ಮೂಲ ಸೌಲಭ್ಯ ಆಗ್ರಹಿಸಿ ಪ್ರತಿಭಟನೆ
ಶಿವಮೊಗ್ಗ: ದಲಿತರ ಬಗರ್‌ಹುಕುಂ ಸಾಗುವಳಿ ಸಕ್ರಮಗೊಳಿಸುವುದು, ವಸತಿ ಹಾಗೂ ಮೂಲಭೂತ ಸೌಲಭ್ಯ ಕಲ್ಪಿಸುವಂತೆ ಒತ್ತಾಯಿಸಿ ದಲಿತ ಸಂಘರ್ಷ ಸಮಿತಿ ಕಾರ್ಯಕರ್ತರು ಬುಧವಾರ ಪ್ರತಿಭಟನೆ ನಡೆಸಿದರು.
ದಲಿತರು ಎಷ್ಟೋ ವರ್ಷಗಳಿಂದ ಅಸ್ತಿತ್ವ ಕಳೆದುಕೊಂಡಿರುವಂತಹ ಕೆರೆ ಕಟ್ಟೆಗಳಲ್ಲಿ ತಮ್ಮ ಜೀವನೋಪಾಯಕ್ಕಾಗಿ ಸಾಗುವಳಿ ಮಾಡಿಕೊಂಡು ಬಂದಿದ್ದಾರೆ. ಇನ್ನು ಅನೇಕರು ಸರ್ಕಾರಿ ಭೂಮಿ ಹಾಗೂ ಅರಣ್ಯ ಭೂಮಿಗಳಲ್ಲಿ ಸಾಗುವಳಿ ಮಾಡಿಕೊಂಡಿದ್ದಾರೆ. ಇವರಿಗೆ ವಾಸ ಮಾಡಲು ಮನೆಯಾಗಲಿ, ಶುದ್ಧ ಕುಡಿವ ನೀರಿನ ವ್ಯವಸ್ಥೆಯಾಗಿ ಇರುವುದಿಲ್ಲ. ಸರ್ಕಾರ ಇವರಿಗೆ ನ್ಯಾಯಕೊಡಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.
ಅರಣ್ಯವಲ್ಲದ ಭೂಮಿಯನ್ನು ಅರಣ್ಯ ಭೂಮಿ ಎಂದು ಪರಿಗಣಿಸುತ್ತಿರುವ ಭ್ರಷ್ಟ ಅರಣ್ಯಾಧಿಕಾರಿಗಳು ಕಿರುಕುಳ ನೀಡಲಾಗುತ್ತಿದೆ. ನಷ್ಟ ಉಂಟುಮಾಡುತ್ತಿರುವ ಅರಣ್ಯಾಧಿಕಾರಿಗಳ ವಿರುದ್ಧ ಶೋಷಿತರಿಗೆ ಪರಿಹಾರ ನೀಡಬೇಕೆಂದು ಮನವಿಯಲ್ಲಿ ಒತ್ತಾಯಿಸಿದ್ದಾರೆ.
ಶರಾವತಿ ಹಿನ್ನೀರಿನ ನಿರಾಶ್ರಿತರಿಗೆಂದು ಮೀಸಲಿಟ್ಟ ಹಾಯ್‌ಹೊಳೆ ಹಾಗೂ ಅಸನವಳ್ಳಿ ಗ್ರಾಮದ ಸರ್ವೆ ನಂ.167ರ ಜಮೀನನ್ನು ಶೀಘ್ರವಾಗಿ ನಿರಾಶ್ರಿತರಿಗೆ ಹಂಚಬೇಕು, ನಿವೇಶನ ರಹಿತರಿಗೆ ಶೀಘ್ರವಾಗಿ ನಿವೇಶನ ಹಂಚಬೇಕು, ಜಿಲ್ಲೆಯಲ್ಲಿ ಶೀಘ್ರವಾಗಿ ಬಗರ್‌ಹುಕುಂ ಸಮಿತಿ ರಚನೆಯಾಗಬೇಕು, ನ್ಯಾಯಾಲಯಗಳಲ್ಲಿ ಬಾಕಿ ಉಳಿದಿರುವ ಪಿಟಿಸಿಎಲಲ್ಜಮೀನುಗಳನ್ನು ತ್ವರಿತಗತಿಯಲ್ಲಿ ವಿಲೇವರಿ ಮಾಡಬೇಕು ಎಂದು ಆಗ್ರಹಿಸಿದರು.
ಸಂಘಟನೆಯ ಪ್ರಮುಖರಾದ ವಿ.ನಾಗರಾಜ, ಪಾಪಣ್ಣ, ಸೈಯದ್ ಪಾಟೀಲ್, ಚೌಡಪ್ಪ ಮತ್ತಿತರರು ಪ್ರತಿಭಟನೆಯ ನೇತೃತ್ವ ವಹಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

