ಶಿವಮೊಗ್ಗ

11ರಿಂದ ಹೊಸನಗರದಲ್ಲಿ ಕೃಷಿ ಮೇಳ

Published On :

ಕ.ಪ್ರ.ವಾರ್ತೆ, ಹೊಸನಗರ, ಜ. 8
ಜ. 11 ಮತ್ತು 12ಕ್ಕೆ ಇಲ್ಲಿನ ನೆಹರೂ ಮೈದಾನದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಬೃಹತ್ ಕೃಷಿ ಮೇಳ ಹಮ್ಮಿಕೊಳ್ಳಲಾಗಿದೆ ಎಂದು ಕೃಷಿ ಉತ್ಸವ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಡಿ.ಎಂ. ರತ್ನಾಕರ ಶೆಟ್ಟಿ ಹೇಳಿದರು.
ಬುಧವಾರ ಇಲ್ಲಿನ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, 15 ಸಾವಿರಕ್ಕೂ ಅಧಿಕ ಕೃಷಿಕರು ಇದರಲ್ಲಿ ಭಾಗವಹಿಸುವ ನಿರೀಕ್ಷೆಯಿದೆ ಎಂದು ತಿಳಿಸಿದರು.
11ರ ಶನಿವಾರ ಬೆಳಗ್ಗೆ ಕರ್ನಾಟಕ ವಿಧಾನಸಭಾಧ್ಯಕ್ಷ ಕಾಗೋಡು ತಿಮ್ಮಪ್ಪ ಅವರು ಮೇಳದ ಉದ್ಘಾಟನೆ ನೆರವೇರಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಎಸ್ಕೆಡಿಆರ್‌ಡಿಪಿ ಕಾರ್ಯನಿರ್ವಾಹಕ ನಿರ್ದೇಶಕ ಡಾ. ಎಲ್.ಎಚ್. ಮಂಜುನಾಥ್, ಸಂಸದರಾದ ಬಿ.ವೈ. ರಾಘವೇಂದ್ರ, ಜಂಟಿ ಕೃಷಿ ನಿರ್ದೇಶಕ ಮಧುಸೂದನ್ ಭಾಗವಹಿಸಲಿದ್ದಾರೆ. 12ರ ಭಾನುವಾರ ನಡೆಯುವ ಸಮಾರೋಪ ಸಮಾರಂಭದಲ್ಲಿ ಶಿಕ್ಷಣ ಸಚಿವ ಕಿಮ್ಮನೆ ರತ್ನಾಕರ್, ಎಸ್ಕೆಡಿಆರ್‌ಡಿಪಿ ನಿರ್ದೇಶಕ ಸುಧೀರಕುಮಾರ ಬಂಟ್ವಾಳ್, ಅಪೆಕ್ಸ್ ಬ್ಯಾಂಕ್ ಅಧ್ಯಕ್ಷ ಆರ್.ಎಂ. ಮಂಜುನಾಥಗೌಡ ಮತ್ತಿತರರು ಭಾಗವಹಿಸಲಿದ್ದಾರೆ.
ಕೃಷಿ ವಸ್ತು ಪದರ್ಶನ: ಮೇಳದ ಪ್ರಯುಕ್ತ ಅನೇಕ ಕೃಷಿ ಮತ್ತು ಗೃಹೋಪಯೋಗಿ ವಸ್ತುಗಳ ವಸ್ತು ಪ್ರದರ್ಶನ ಏರ್ಪಡಿಸಲಾಗಿದೆ. ಕುಕ್ಕುಟ ಮತ್ತು ಜಾನುವಾರು ಪ್ರದರ್ಶನ ಏರ್ಪಡಿಸಲಾಗಿದೆ. ತಾಲೂಕಿನೆಲ್ಲೆಡೆ ಆಕರ್ಷಕ ಪ್ರವೇಶ ದ್ವಾರ ನಿರ್ಮಿಸಲಾಗಿದೆ ಎಂದರು.
ಸುದ್ದಿಗೋಷ್ಠಿಯಲ್ಲಿ ಯೋಜನಾಧಿಕಾರಿ ಪುರಂದರಪೂಜಾರಿ, ಉಮಾಶಂಕರರಾಜು,  ನಾಗರಾಜ್, ಸುರೇಶ್, ನಾಗರಾಜ್ ಗೊಂಡ್ ಮತ್ತಿತರರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.