ಶಿವಮೊಗ್ಗ

ಕ್ರೀಡಾಕೂಟ, ಸಾಂಸ್ಕೃತಿಕ ಸ್ಪರ್ಧೆ

Published On :

ಶಿವಮೊಗ್ಗ: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಜ.18ರಿಂದ 20ರವರೆಗೆ ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಸರ್ಕಾರಿ ನೌಕರರ ರಾಜ್ಯಮಟ್ಟದ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳನ್ನು ಏರ್ಪಡಿಸಿದೆ. 2013ರ ಡಿ. 6 ಮತ್ತು 7ರಂದು ನಗರದ ನೆರಹೂ ಕ್ರೀಡಾಂಗಣದಲ್ಲಿ ನಡೆದ ಸರ್ಕಾರಿ ನೌಕರರ ಜಿಲ್ಲಾ ಮಟ್ಟದ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆಯಲ್ಲಿ ವೈಯಕ್ತಿಕ ಸ್ಪರ್ಧೆಯಲ್ಲಿ ಭಾಗವಹಿಸಿ ಪ್ರಥಮ ಮತ್ತು ದ್ವಿತೀಯ ಸ್ಥಾನ ಪಡೆದವರು ಹಾಗೂ ಗುಂಪು ಸ್ಪರ್ಧೆಗಳಲ್ಲಿ ಪ್ರಥಮ ಸ್ಥಾನಗಳಿಸಿ ಆಯ್ಕೆಯಾಗಿರುವವರು ರಾಜ್ಯ ಮಟ್ಟದ ಸ್ಪರ್ಧೆಯಲ್ಲಿ ಭಾಗವಹಿಸಬಹುದಾಗಿದೆ. ಅರ್ಹ ಕ್ರೀಡಾಪಟುಗಳು ಜ. 17ರಂದು ಸಂಜೆ 4 ಗಂಟೆಯೊಳಗೆ ನಿಗದಿಪಡಿಸಿದ ಸ್ಥಳದಲ್ಲಿ ಉಪಸ್ಥಿತರಿದ್ದು, ಹೆಸರು ನೋಂದಾಯಿಸಿಕೊಳ್ಳಬೇಕು. ಸ್ಪರ್ಧಿಗಳಿಗೆ ಸಾಮಾನ್ಯ ವಸತಿ ವ್ಯವಸ್ಥೆ ಕಲ್ಪಿಸಲಾಗುವುದು ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ  ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.
ಬಿಎಸ್ಸೆನ್ನೆಲ್‌ನಿಂದ ತರಬೇತಿ
ಶಿವಮೊಗ್ಗ: ಎಲೆಕ್ಟ್ರಾನಿಕ್ಸ್ ಮತ್ತು ಟೆಲಿಕಮ್ಯುನಿಕೇಷನ್ ವಿಭಾಗದ ಎಂಜಿನಿಯರಿಂಗ್ ಹಾಗೂ ಡಿಪ್ಲೊಮೋ ವಿದ್ಯಾರ್ಥಿಗಳಿಗಾಗಿ ಭಾರತ ಸಂಚಾರ ನಿಗಮ ನಿಯಮಿತ ಜ.13ರಿಂದ ಒಂದು ವಾರದ ತರಬೇತಿ ಕಾರ್ಯಾಗಾರ ಏರ್ಪಡಿಸಿದೆ. ತರಬೇತಿಯಲ್ಲಿ ಭಾಗವಹಿಸಲು ಇಚ್ಚಿಸುವವರು ಭಾನುಮತಿ, ಉಪಮಂಡಲ ಅಧಿಕಾರಿ, ಮಹಾಪ್ರಬಂಧಕರ ಕಚೇರಿ, ಸಾಗರ ರಸ್ತೆ, ಶಿವಮೊಗ್ಗ ಇವರನ್ನು ಖುದ್ದಾಗಿ ಅಥವಾ ದೂ.ಸಂ. 08182-251469, ಮೊ.ಸಂ. 9449831389 ನ್ನು ಸಂಪರ್ಕಿಸುವಂತೆ ಸಾರ್ವಜನಿಕ ಸಂಪರ್ಕಾಧಿಕಾರಿ ತಿಳಿಸಿದ್ದಾರೆ.
ಸಂದರ್ಶನ ಪುಸ್ತಕಕ್ಕೆ ಆಗ್ರಹ
ಶಿವಮೊಗ್ಗ: ಸರ್ಕಾರಿ ಕಚೇರಿಗಳಲ್ಲಿ ಸಾರ್ವಜನಿಕರ ಸಂದರ್ಶನ ಪುಸ್ತಕ ಮತ್ತು ಸಿಬ್ಬಂದಿ ಮೂವ್‌ಮೆಂಟ್ ರಿಜಿಸ್ಟರ್  ಅಳವಡಿಸುವಂತೆ ಒತ್ತಾಯಿಸಿ ಮಾಹಿತಿ ಹಕ್ಕು ಮತ್ತು ಮಾನವ ಹಕ್ಕು ಸಂರಕ್ಷಣಾ ವೇದಿಕೆ ಸದಸ್ಯರು ಗುರುವಾರ ಜಿಲ್ಲಾಡಳಿತಕ್ಕೆ ಮನವಿ ಮಾಡಿದರು.
ಸರ್ಕಾರಿ ಕಾರ್ಯಾಲಯದಲ್ಲಿ ಸರಿಯಾದ ಸಮಯದಲ್ಲಿ ಸರ್ಕಾರಿ ಕೆಲಸ ಆಗದೆ, ಭ್ರಷ್ಟಾಚಾರ ಮಿತಿಮೀರಿದೆ. ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ಸಂದರ್ಶನ ಪುಸ್ತಕ ಮತ್ತು ಸಿಬ್ಬಂದಿ ಮೂಮೆಂಟ್ ರಿಜಿಸ್ಟರನ್ನು ಸಮರ್ಪಕವಾಗಿ ಪಾಲನೆ ಮಾಡುತ್ತಿಲ್ಲ ಎಂದು ವೇದಿಕೆ ಸದಸ್ಯರು ಆರೋಪಿಸಿದರು. ಕೂಡಲೇ ಜಿಲ್ಲಾಡಳಿತ ಸರ್ಕಾರಿ ಕಚೇರಿಗಳನ್ನು ಸಾರ್ವಜನಿಕರ ಅನುಕೂಲವಾಗುವಂತೆ ವಾತಾವರಣ ಸೃಷ್ಟಿಸಬೇಕು ಎಂದು ವೇದಿಕೆ ಸದಸ್ಯರು ಒತ್ತಾಯಿಸಿದರು. ಸಿ.ಜಿ. ರಾಮಚಂದ್ರಪ್ಪ, ಶಿವಕುಮಾರ್ ಮೊದಲಾದವರು ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.