ಜಾತಿ ಪ್ರಮಾಣ ಪತ್ರ ವಿತರಣೆ ವಿಳಂಬ ಖಂಡಿಸಿ ಪ್ರತಿಭಟನೆ
ಶಿವಮೊಗ್ಗ: ತಾಲೂಕು ಕಚೇರಿಯಲ್ಲಿ ಭೋವಿ ಸಮಾಜದ ಜಾತಿ ಪ್ರಮಾಣ ಪತ್ರ ವಿತರಣೆಯಲ್ಲಿ ವಿಳಂಬ ನೀತಿ ಅನುಸರಿಸಲಾಗುತ್ತಿದೆ ಎಂದು ಆರೋಪಿಸಿ ಗುರುವಾರ ತಾಲೂಕು ಕಚೇರಿ ಎದುರು ಭೋವಿ ವಿದ್ಯಾವರ್ಧಕ ಸಂಘದ ಸದಸ್ಯರು ಪ್ರತಿಭಟನೆ ನಡೆಸಿದರು.
ತಹಸೀಲ್ದಾರ್ ಕಚೇರಿಯಲ್ಲಿ ಭೋವಿ ಜಾತಿ ಪ್ರಮಾಣ ಪತ್ರ ನೀಡಲು ಅಧಿಕಾರಿಗಳು ವಿಳಂಬ ಮಾಡುತ್ತಿದ್ದಾರೆ. ಅಗತ್ಯ ಎಲ್ಲಾ ದಾಖಲೆಗಳನ್ನು ನೀಡಿದ್ದರೂ, ವಲಸೆ ದೃಢೀಕರಣ ಪತ್ರ ತರುವಂತೆ ಹಾಗೂ ಪ್ರವರ್ಗ-1ಕ್ಕೆ ಸೇರಿದ್ದ ಪೂರ್ಣ ಪ್ರಮಾಣದ ದಾಖಲಾತಿ ಪತ್ರ ನೀಡಿಲ್ಲ ಎಂದು ಜಾತಿ ಪ್ರಮಾಣ ಪತ್ರ ನೀಡಲು ನಿರಾಕರಿಸುತ್ತಿದ್ದಾರೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.
ಈ ಸಂಬಂಧ ಹಲವು ಬಾರಿ ಸಂಬಂಧಿಸಿದ ಅಧಿಕಾರಿಗಳಿಗೆ ದೂರು ನೀಡಿದ್ದರೂ ಯಾವುದೇ ಪ್ರಯೋಜನವಾಗಿಲ್ಲ. ಸರಿಯಾದ ಸಮಯಕ್ಕೆ ಜಾತಿ ಪ್ರಮಾಣ ಪತ್ರ ದೊರಕದಿರುವದರಿಂದ ಭೋವಿ ಸಮಾಜದ ವಿದ್ಯಾರ್ಥಿಗಳಿಗೆ ಹಾಗೂ ಸರ್ಕಾರದ ಸೌಲಭ್ಯ ಪಡೆಯುವುದಕ್ಕೆ ಅರ್ಜಿ ಸಲ್ಲಿಸುವ ಸಮಾಜ ಬಾಂಧವರಿಗೆ ತೊಂದರೆಯಾಗುತ್ತಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.
ಪ್ರತಿಭಟನೆಯಲ್ಲಿ ಸಂಘದ ಮುಖಂಡ ಲೋಕೇಶ್ ಹನಸವಾಡಿ, ವೀರಭದ್ರಪೂಜಾರ್, ಹುಚ್ಚರಾಯಪ್ಪ, ರವಿಕುಮಾರ್, ಹರ್ಷಭೋವಿ, ರಾಜು, ಧೀರರಾಜ್ ಜೊನ್ನವಿಲೆ, ಗಣೇಶ್, ಚಂದ್ರ ಭೋವಿ ಮತ್ತಿತರರು ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

