13ರಂದು ಸಿದ್ಧರಾಮೇಶ್ವರ ಜಯಂತಿ
ಶಿವಮೊಗ್ಗ: ಜಿಲ್ಲಾ ಆಡಳಿತ, ಜಿಪಂ, ಕನ್ನಡ-ಸಂಸ್ಕೃತಿ ಇಲಾಖೆ, ಮಹಾನಗರಪಾಲಿಕೆ,ವಾರ್ತಾ ಇಲಖೆ ಆಶ್ರಯದಲ್ಲಿ ಜ.13ರಂದು ಬೆಳಗ್ಗೆ 11 ಗಂಟೆಗೆ ಡಾ.ಬಿ.ಆರ್. ಅಂಬೇಡ್ಕರ್ ಭವನದಲ್ಲಿ ಪ್ರಥಮ ಬಾರಿಗೆ ಶಿವಶರಣ ಹಾಗೂ ವಚನಕಾರ ಶಿವಯೋಗಿ ಸಿದ್ಧರಾಮೇಶ್ವರ ಜಯಂತಿ ಏರ್ಪಡಿಸಿದೆ.
ವಿಧಾನಪರಿಷತ್ ಸಭಾಪತಿ ಡಿ.ಎಚ್. ಶಂಕರಮೂರ್ತಿ, ವಿಧಾನಸಭಾಧ್ಯಕ್ಷ ಕಾಗೋಡು ತಿಮ್ಮಪ್ಪ ಉಪಸ್ಥಿತಿಯಲ್ಲಿ ಶಿಕ್ಷಣ ಸಚಿವ ಕಿಮ್ಮನೆ ರತ್ನಾಕರ್ ಕಾರ್ಯಕ್ರಮ ಉದ್ಘಾಟಿಸುವರು. ಸಂಸದ ಬಿ.ವೈ.ರಾಘವೇಂದ್ರ ಶರಣ ಸಿದ್ಧರಾಮೇಶ್ವರರ ಭಾವಚಿತ್ರದ ಮೆರವಣಿಗೆಗೆ ಚಾಲನೆ ನೀಡುವರು. ರಾಜ್ಯಸಭಾ ಸದಸ್ಯ ಆಯನೂರು ಮಂಜುನಾಥ್ ಶಿವಯೋಗಿ ಸಿದ್ಧರಾಮೇಶ್ವರರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡುವರು.
ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ, ಜಿಪಂ ಅಧ್ಯಕ್ಷೆ ಗೀತಾ ಬಿ. ಮಲ್ಲಿಕಾರ್ಜುನ್, ಜಿಲ್ಲೆಯ ಎಲ್ಲಾ ಶಾಸಕರು, ಸ್ಥಳೀಯ ಸಂಸ್ಥೆಗಳ ಚುನಾಯಿತ ಪ್ರತಿನಿಧಿಗಳು, ವಿವಿಧ ಸಂಘಟನೆಗಳ ಮುಖಂಡರು, ಅಧಿಕಾರಿಗಳು, ಜಿಲ್ಲಾ ಭೋವಿ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಎಚ್. ಹನುಮಂತಪ್ಪ ಭಾಗವಹಿಸುವರು. ಟಿ. ಕೃಷ್ಣಪ್ಪ ಶಿವಯೋಗಿ ಸಿದ್ಧರಾಮೇಶ್ವರರ ಕುರಿತು ಉಪನ್ಯಾಸ ನೀಡುವರು.
ಬೆಳಗ್ಗೆ 9 ಗಂಟೆಗೆ ಸೈನ್ಸ್ ಮೈದಾನದಿಂದ ಶಿವಯೋಗಿ ಸಿದ್ಧರಾಮೇಶ್ವರರ ಭಾವಚಿತ್ರ ಮೆರವಣಿಗೆಯಲ್ಲಿ ವಿವಿಧ ಜಾನಪದ ಕಲಾತಂಡಗಳು ನಗರದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ, ಅಂಬೇಡ್ಕರ್ ಭವನ ತಲುಪಲಾಗುವುದು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

