ಲೋಕಸಭೆಗೆ ಸ್ಪರ್ಧಿಸಲು ಬಿಎಸ್ವೈಗೆ ಒತ್ತಡ
ಶಿವಮೊಗ್ಗ: ಬಿ.ಎಸ್.ಯಡಿಯೂರಪ್ಪನವರಿಗೆ ರಾಜ್ಯ ರಾಜಕಾರಣದಲ್ಲಿ ಆಸಕ್ತಿ ಇದೆ. ಆದರೆ ಪಕ್ಷದ ವರಿಷ್ಠರು ಅವರನ್ನು ಲೋಕಸಭೆ ಚುನಾವಣೆಗೆ ಸ್ಪರ್ಧಿಸುವಂತೆ ಒತ್ತಡ ಹೇರುತ್ತಿದ್ದಾರೆ ಎಂದು ಸಂಸದ ಬಿ.ವೈ. ರಾಘವೇಂದ್ರ ಹೇಳಿದ್ದಾರೆ.
ಬಿಎಸ್ವೈ ಈಗಷ್ಟೇ ಹಿಂದಷ್ಟೆ ಬಿಜೆಪಿಗೆ ಸೇರಿದ್ದಾರೆ. ಬೆಂಗಳೂರಿನ ಕೋರ್ಕಮಿಟಿ ಸಭೆ ನಡೆಯುತ್ತಿದ್ದು, ಪಕ್ಷದ ಅಭ್ಯರ್ಥಿಗಳ ಆಯ್ಕೆ, ಸಂಘಟನೆ ಬಗ್ಗೆ ಚರ್ಚೆ ನಡೆಯುತ್ತಿದೆ ಎಂದರು.
ಯಡಿಯೂರಪ್ಪನವರು ಅಭ್ಯರ್ಥಿಯಾಗದಿದ್ದರೆ ಶಿವಮೊಗ್ಗ ಲೋಕಸಭಾ ಕ್ಷೇತ್ರಕ್ಕೆ ಬಿಜೆಪಿಯಿಂದ ಸ್ಪರ್ಧಿಸಲು ಆಕಾಂಕ್ಷಿಗಳ ದೊಡ್ಡ ಪಟ್ಟಿಯೇ ಇದೆ ಎಂದು ಪಕ್ಷದ ಜಿಲ್ಲಾಧ್ಯಕ್ಷ ಆಯನೂರು ಮಂಜುನಾಥ್ ಹೇಳಿದ್ದಾರೆ. ಅದು ಸಹಜ, ಆಕಾಂಕ್ಷಿಗಳು ಹೆಚ್ಚಿನ ಸಂಖ್ಯೆಯಲ್ಲಿರುತ್ತಾರೆ ಎಂದು ಹೇಳಿದ್ದರಲ್ಲಿ ತಪ್ಪೇನಿಲ್ಲ. ಪಕ್ಷದ ಕಚೇರಿಗೆ ಯಾವಾಗ ಭೇಟಿಕೊಡುತ್ತೀರಾ ಎಂದು ಪ್ರಶ್ನಿಸಿದ್ದಕ್ಕೆ, ಅಮಾನತು ವಾಪಾಸು ಪಡೆದ ನಂತರ ನಾನು ತೆರಳುತ್ತೇನೆ ಎಂದು ರಾಘವೇಂದ್ರ ಸುದ್ದಿಗಾರರಿಗೆ ಹೇಳಿದರು.
ಲೋಕಸಭೆ ಸದಸ್ಯನಾಗಿ 5 ವರ್ಷದ ಅವಧಿಯಲ್ಲಿ ಕ್ಷೇತ್ರದ ಅಭಿವೃದ್ಧಿಗೆ ಕೆಲಸ ಮಾಡಿದ್ದೇನೆ. ಕೇಂದ್ರ, ರಾಜ್ಯ ಸರ್ಕಾರದ ಅನುದಾನ ತಂದು ಸಮರ್ಪಕ ಬಳಕೆ ಮಾಡಲಾಗಿದೆ. ಜನರೊಂದಿಗೆ ಸಂಪರ್ಕ ಮೊದಲಿನಿಂದಲೂ ಹಾಗೆಯೇ ಇದೆ ಎಂದ ಅವರು, ಲೋಕಸಭೆ ಚುನಾವಣೆಗೆ ಕೆಲವೇ ದಿನಗಳು ಉಳಿದಿದ್ದು, ಪಕ್ಷದ ಸಂಘಟನೆಗೆ ಒತ್ತು ನೀಡಲಾಗಿದೆ. ಈ ನಿಟ್ಟಿನಲ್ಲಿ ರಾಜ್ಯದ ವಿಭಾಗಗಳಲ್ಲಿ ಬೃಹತ್ ಸಮಾವೇಶ ನಡೆಸಲಾವುದು ಎಂದರು.
ಕಳೆದ ಅಧಿವೇಶನ ಸರಿಯಾಗಿ ನಡೆಯಲಿಲ್ಲ, ಹೀಗಾಗಿ ಅಡಕೆ ಬಗ್ಗೆ ಸಂಸತ್ನಲ್ಲಿ ಪ್ರಸ್ತಾಪಿಸಲು ಅವಕಾಶ ಸಿಗಲಿಲ್ಲ. ವಿಧಾನಸಭೆ ಚುನಾವಣೆಗೆ ಸ್ಪರ್ಧಿಸುವಿರಾ ಎಂದು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಬಿಜೆಪಿಯಿಂದ ತಾವು ಸೇರಿದಂತೆ ಮೂವರು ಸಂಸದರನ್ನು ಅಮಾನತು ಮಾಡಲಾಗಿದೆ. ಅಮಾನತು ವಾಪಸ್ ಪಡೆದ ನಂತರ ಜಿಲ್ಲಾ ಬಿಜೆಪಿ ಕಚೇರಿಗೆ ಭೇಟಿ ನೀಡುತ್ತೇನೆ ಎಂದು ಹೇಳಿದರು.
ಶಿವಮೊಗ್ಗ ಶಾಸಕರು ಮಹಾನಗರ ಪಾಲಿಕೆಯಾದ ನಂತರ ಹೆಚ್ಚಿನ ಅನುದಾನ ಬಂದಿರುವುದನ್ನು ಸದ್ಭಳಕೆ ಮಾಡಿಕೊಳ್ಳುವ ನಿಟ್ಟಿನಲ್ಲಿ ಸಂಸದರು ಮತ್ತು ವಿಧಾನ ಪರಿಷತ್ ಸದಸ್ಯರನ್ನು ವಿಶ್ವಾಸಕ್ಕೆ ಪಡೆಯಬೇಕಿದೆ ಎಂದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

