ವಿದ್ಯಾದೇವಿ ಕೃಪೆಗೆ ಶ್ರಮ ಅವಶ್ಯ
ಸಾಗರ: ಯಾವುದೇ ವಿದ್ಯೆ ಒಲಿಸಿಕೊಳ್ಳಲು ಕಠಿಣ ಪರಿಶ್ರಮ, ಶ್ರದ್ಧೆ ಅವಶ್ಯ ಎಂದು ಸುಗಮ ಸಂಗೀತ ಕಲಾವಿದ ಬೆಂಗಳೂರಿನ ನರಹರಿ ದೀಕ್ಷಿತ್ ಹೇಳಿದರು. ಇಲ್ಲಿನ ವೇದನಾದ ಪ್ರತಿಷ್ಠಾನ, ಶ್ರೀಸದ್ಗುರು ಹಿಂದೂಸ್ತಾನಿ ಶಾಸ್ತ್ರೀಯ ಸಂಗೀತ ವಿದ್ಯಾಲಯ ವತಿಯಿಂದ 3 ದಿನಗಳ ಕಾಲ ಹಮ್ಮಿಕೊಂಡಿರುವ ಚತುರ್ದಶಿಯ ಸಂಗೀತೋತ್ಸವ ಉದ್ಘಾಟನಾ ಸಮಾರಂಭದಲ್ಲಿ ಸಾಧನಾ ಪ್ರಶಸ್ತಿ ಸ್ವೀಕರಿಸಿ ಅವರು ಮಾತನಾಡಿದರು. ಸಂಗೀತೋತ್ಸವ ಉದ್ಘಾಟಿಸಿದ ವಿಧಾನಸಭಾಧ್ಯಕ್ಷ ಕಾಗೋಡು ತಿಮ್ಮಪ್ಪ ಮಾತನಾಡಿ, ಸಂಗೀತ, ನಾಟ್ಯ ಚಟುವಟಿಕೆಗಳ ಅಭಿರುಚಿ ಮಕ್ಕಳಲ್ಲಿ ಬೆಳೆಸುವ ಕೆಲಸವಾಗಬೇಕು. ಮಕ್ಕಳಿಗೆ ಸಂಗೀತಾಭ್ಯಾಸ ಮಾಡಿಸಿದರೆ ಅದು ಹೃದಯಕ್ಕೆ ಪ್ರವೇಶ ಮಾಡಿ ಮುಂದೆ ಈ ಕ್ಷೇತ್ರದಲ್ಲಿ ಉತ್ತಮ ಭವಿಷ್ಯ ಕಂಡುಕೊಳ್ಳಬಹುದು. ಮಕ್ಕಳ ಭವಿಷ್ಯ ಪಠ್ಯವೊಂದರಿಂದಲೇ ನಿರ್ಧಾರ ಆಗುವುದಿಲ್ಲ ಎಂದು ಹೇಳಿದರು. ಸ್ವರಮೇಧಾ ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ ಸಂಗೀತ ಕಲಾವಿದ ಶಿವಮೊಗ್ಗ ವೇಣುಗೋಪಾಲ್, ಸಂಗೀತ ಕಲಿಕೆ ಫ್ಯಾಷನ್ ಆಗಬಾರದು ಎಂದರು. ನವೀನ್ ಶರ್ಮರಿಗೆ ಸಾಧನಾ ಪ್ರಶಸ್ತಿ, ಅನಘಾ ಭಟ್ ಇವರಿಗೆ ಪ್ರೇರಣಾ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಪ್ರತಿಷ್ಠಾನದ ಅಧ್ಯಕ್ಷ ಎಚ್.ಕೆ. ವೆಂಕಟೇಶ್ ಅಧ್ಯಕ್ಷತೆ ವಹಿಸಿದ್ದರು. ಎ.ಎನ್.ವೆಂಕಟಕೃಷ್ಣ ಹಾಜರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

