ಶಿವಮೊಗ್ಗ

ಇಂದು ಆನವಟ್ಟಿ ಉತ್ಸವ

Published On :

ಸೊರಬ: ತಾಲೂಕಿನ ಆನವಟ್ಟಿಯ ವಿಶ್ವಭಾರತಿ ಟ್ರಸ್ಟ್ ಹಾಗೂ ಗ್ರಾಮಸ್ಥರ ಸಹಕಾರದೊಂದಿಗೆ ಸ್ವಾಮಿ ವಿವೇಕಾನಂದರ 151ನೇ ಜನ್ಮದಿನಾಚರಣೆ ಅಂಗವಾಗಿ ಜ.12ರಂದು ಆನವಟ್ಟಿ ಉತ್ಸವ ಹಮ್ಮಿಕೊಳ್ಳಲಾಗಿದೆ. ಗ್ರಾಮದ ಸರ್ಕಾರಿ ಪ.ಪೂ. ಕಾಲೇಜು ಆವರಣದಲ್ಲಿ ಉತ್ಸವ ಜರುಗಲಿದ್ದು ಅಂದು ಬೆಳಿಗ್ಗೆ 9-30ಕ್ಕೆ ಕಲಾ ತಂಡಗಳೊಂದಿಗೆ ಮೆರವಣಿಗೆ, ನಂತರ ಜಡೆ ಸಂಸ್ಥಾನಮಠದ ಡಾ. ಮಹಾಂತ ಸ್ವಾಮೀಜಿಯವರಿಂದ ಉದ್ಘಾಟನೆ ನೆರವೇರಲಿದೆ. ಉಪನ್ಯಾಸಕ ಪರಶುರಾಮ ಮಟ್ಟೇರ ವಿವೇಕಾನಂದರ ಕುರಿತು ಉಪನ್ಯಾಸ ನೀಡಲಿದ್ದಾರೆ. ಪ್ರಸಕ್ತ ಉತ್ಸವದ ಸಮ್ಮೇಳನಾಧ್ಯಕ್ಷತೆಯನ್ನು ಪ್ರಾಂಶುಪಾಲ ಎಚ್. ಜಯಪ್ಪ ವಹಿಸಲಿದ್ದಾರೆ. ಪ್ಯಾರಾ ಒಲಿಂಪಿಕ್ಸ್ನಲ್ಲಿ ಬಂಗಾರದ ಪದಕ ಪಡೆದ ಸುಹಾಸ್, ಪ್ರತಿಭಾ, ನಿವೃತ್ತ ಸೈನಿಕರಾದ ಚಂದ್ರಪ್ಪ, ಷಣ್ಮುಖಪ್ಪ, ಶಿಕ್ಷಣ ಕ್ಷೇತ್ರದಲ್ಲಿ ವಿಶೇಷ ಸಾಧನೆ ಮಾಡಿದ ಶಿವಶಂಕರಯ್ಯ ಸಾಲಿಮಠ, ಸತ್ಯನಾರಾಯಣ ಭಟ್, ಚಂದ್ರಪ್ಪ ಹಾಗೂ ಪ್ರತಿಭಾವಂತ ವಿದ್ಯಾರ್ಥಿಗಳಾದ ಸಂತೋಷ್, ಗಣೇಶ್, ಶೃತಿ, ಅಪೂರ್ವ ಅವರನ್ನು ಸನ್ಮಾನಿಸಲಾಗುತ್ತದೆ. ಬಂದಗದ್ದೆ ರಾಧಾಕೃಷ್ಣ ಹಾಗೂ ಪೂರ್ಣಪ್ರಜ್ಞ ಅವರಿಂದ ಹಸೆ ಚಿತ್ರಗಳ ಪ್ರದರ್ಶನ, ಮಾರಾಟ, ಶಿವಮೊಗ್ಗದ ಉಷಾ ನರ್ಸಿಂಗ್ ಹೋಂ ಸಹಕಾರದೊಂದಿಗೆ ಉಚಿತ ಆರೋಗ್ಯ ತಪಾಸಣೆ ಹಮ್ಮಿಕೊಳ್ಳಲಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.