ಶಿವಮೊಗ್ಗ

ಚಂದ್ರಗುಪ್ತ ಮೌರ್ಯ ಪ್ರಶಸ್ತಿ ಪ್ರದಾನ

Published On :

ಕ.ಪ್ರ.ವಾರ್ತೆ    ಶಿವಮೊಗ್ಗ    ಜ. 11
ಅಪರೂಪದ ನಾಣ್ಯ ಮತ್ತು ನೋಟುಗಳ ಸಂಗ್ರಹಕಾರ, ಮುಂಬೈನ ಕಿಶೋರ್ ಜುಂಜುವಾಲೀಯ ಅವರಿಗೆ ಮಲೆನಾಡು ನಾಣ್ಯ ಮತ್ತು ಅಂಚೆ ಚೀಟಿ ಸಂಗ್ರಹಕಾರರ ಸಂಘವು ಚಂದ್ರಗುಪ್ತ ಮೌರ್ಯ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಿದೆ.
ನಗರದ ಗಾಯತ್ರಿ ಮಾಂಗಲ್ಯ ಮಂದಿರದಲ್ಲಿ ನಡೆಯುತ್ತಿರುವ ರಾಷ್ಟ್ರಮಟ್ಟದ ನಾಣ್ಯ, ನೋಟು ಹಾಗೂ ಅಂಚೆ ಚೀಟಿಗಳ ಪ್ರದರ್ಶನ ಹಾಗೂ ಸಮ್ಮೇಳನದಲ್ಲಿ ಶನಿವಾರ ಈ ಪ್ರಶಸ್ತಿ ಪ್ರದಾನ ಮಾಡಲಾಯಿತು.
ಇದೇ ಸಂದರ್ಭದಲ್ಲಿ ನಾಣ್ಯ, ನೋಟು ಸಂಗ್ರಾಹಕರಾದ ಡಿ.ಎಚ್. ಸುಬ್ರಹ್ಮಣ್ಯ, ಸಿ.ಬಿ. ಕೃಷ್ಣಮೂರ್ತಿ, ಶೇಷಗಿರಿರಾವ್, ಹೈದರಾಬಾದ್ ನ ಮನಮೋಹನ್ ಸಿಂಗ್, ಕೊಯಮತ್ತೂರಿನ ನಾರಾಯಣಸ್ವಾಮಿ, ಭದ್ರಾವತಿಯ ಎಸ್.ಕೆ. ಗಣೇಶ್ ಅವರನ್ನು ಸನ್ಮಾನಿಸಲಾಯಿತು.
ಶಾಸಕ ಕೆ.ಬಿ. ಪ್ರಸನ್ನಕುಮಾರ್ ಮಾತನಾಡಿ, ನಾಣ್ಯ ಮತ್ತು ನೋಟುಗಳು ನಮಗೆ ಇತಿಹಾಸ ತಿಳಿಸಿಕೊಡುತ್ತವೆ. ನಮ್ಮ ಪೂರ್ವಜರು ನಡೆದು ಬಂದ ದಾರಿ ಇದರಿಂದ ಗೊತ್ತಾಗುತ್ತದೆ. ನಮ್ಮನ್ನು ಇತಿಹಾಸಕ್ಕೆ ಕರೆದುಕೊಂಡು ಹೋಗುವ ಶಕ್ತಿ ಇವುಗಳಿಗೆ ಇದೆ ಎಂದರು.
ಈ ರೀತಿಯ ಪ್ರದರ್ಶನ ಜಿಲ್ಲಾ ಕೇಂದ್ರದಲ್ಲಿ ಮಾತ್ರವಲ್ಲದೇ ತಾಲೂಕು ಕೇಂದ್ರಗಳಲ್ಲಿಯೂ ನಡೆಯುವಂತಾಗಬೇಕು ಎಂದು ಆಶಿಸಿದ ಅವರು, ವಿದ್ಯಾರ್ಥಿಗಳು ಇಂತಹ ಪ್ರದರ್ಶನಗಳಲ್ಲಿ ಭಾಗವಹಿಸಿ ತಮ್ಮ ಇತಿಹಾಸದ ಬಗ್ಗೆ ಜಾಗೃತರಾಗಬೇಕು ಎಂದರು.
ಜೆಡಿಎಸ್ ಜಿಲ್ಲಾಧ್ಯಕ್ಷ ಎಂ. ಶ್ರೀಕಾಂತ್, ನಾಣ್ಯ ಹಾಗೂ ನೋಟುಗಳ ಪ್ರದರ್ಶನ ಆಯೋಜನೆ ಮಾಡಿರುವುದು ಅತ್ಯಂತ ಸ್ವಾಗತಾರ್ಹ ಎಂದರು. ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷ ದೇವದಾಸ್ ಎನ್. ನಾಯಕ್ ವಹಿಸಿದ್ದರು. ಪ್ರಧಾನ ಕಾರ್ಯದರ್ಶಿ ಎಸ್. ಚಂದ್ರಕಾಂತ್, ಖಜಾಂಚಿ ವಿ.ಕೆ. ಜೈನ್, ಎಚ್.ವಿ. ಮಹೇಶ್ವರಪ್ಪ, ಪಂಚಾಕ್ಷರಪ್ಪ ಮತ್ತಿತರರು ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.