ಉನ್ನತ ಅವಕಾಶದ ಕನಸಿಗೆ ವಾಸ್ತವ ರೂಪ ನೀಡಿ
ಕ.ಪ್ರ.ವಾರ್ತೆ, ಭದ್ರಾವತಿ, ಜ. 12
ಪ್ರೌಢಶಿಕ್ಷಣ ವಿದ್ಯಾರ್ಥಿಗಳಲ್ಲಿ ಉನ್ನತ ಅವಕಾಶಗಳ ಕುರಿತು ಕನಸುಗಳನ್ನು ಬಿತ್ತುವುದರೊಂದಿಗೆ ಅವುಗಳನ್ನು ವಾಸ್ತವಿಕತೆಯತ್ತ ಕೊಂಡೊಯ್ಯುವ ಪ್ರಯತ್ನ ಮಾಡಬೇಕಾಗಿದೆ ಎಂದು ಪ್ರಗತಿ ಗ್ರೂಪ್‌ನ ಮುಖ್ಯ ಕಾರ್ಯನಿರ್ವಹಣಾಧಿಕಾರಿ, ತರಬೇತುದಾರ ವಿಜಯಕುಮಾರ್ ಹೇಳಿದರು.
ಪಟ್ಟಣದ ಪೇಪರ್‌ಟೌನ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಭಾನುವಾರ ವಿದ್ಯಾರ್ಥಿಗಳಿಗೆ ಆಯೋಜಿಸಿದ್ದ ಉನ್ನತ ಅವಕಾಶಗಳು ಮತ್ತು ಎಸ್‌ಎಸ್‌ಎಲ್‌ಸಿ ಪರೀಕ್ಷಾ ತರಬೇತಿ ಶಿಬಿರದಲ್ಲಿ ಮಾತನಾಡಿದ ಅವರು, ರಾಜ್ಯದ ಪ್ರತಿಭಾವಂತ ವಿದ್ಯಾರ್ಥಿಗಳಿಗೂ ಐಐಟಿಯಂತಹ ತಾಂತ್ರಿಕ ಸಂಸ್ಥೆಗಳ ಬೋಧನೆ ಮತ್ತು ಮಾರ್ಗದರ್ಶನದ ಅವಶ್ಯಕತೆ ಇದೆ ಎಂದರು.
ಮಾಹಿತಿ ಅಗತ್ಯ: ರಾಜ್ಯದ ಮಕ್ಕಳಲ್ಲಿ ಉನ್ನತ ಶಿಕ್ಷಣ ಅವಕಾಶಗಳ ಮಾಹಿತಿ ಕೊರತೆ ಕಾರಣ ಇಂತಹ ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಅವಕಾಶ ಪಡೆದುಕೊಳ್ಳುವವರ ಪ್ರಮಾಣ ಬಹಳಷ್ಟು ಕಡಮೆ ಇದೆ. ಈ ಕೊರತೆಯನ್ನು ನೀಗಿಸಲು ಪ್ರೌಢಶಾಲೆಗಳು ಇಂತಹ ಪರೀಕ್ಷೆಗಳ ಮಾಹಿತಿ ಒದಗಿಸುವ ಅಗತ್ಯವಿದೆ. ಈ ದಿಸೆಯಲ್ಲಿ ಪ್ರಗತಿ ಗ್ರೂಪ್‌ನ ಆ್ಯ ಪಲ್ ಎಜುಕೇಶನ್ ನಿರಂತರ ಕೆಲಸ ಮಾಡುತ್ತಿದೆ ಎಂದು ತಿಳಿಸಿದರು. ಉನ್ನತ ಶಿಕ್ಷಣ ಅವಕಾಶದ ಸದುಪಯೋಗ ಪಡೆಯಲು ವಿದ್ಯಾರ್ಥಿಗಳು ಪ್ರಮಾಣವಚನ ಸ್ವೀಕಾರ ಮಾಡಿದರು.
ಶಾಲೆ ಮುಖ್ಯಶಿಕ್ಷಕಿ ಉಮಾ, ಶಿಕ್ಷಕರಾದ ನಾಗರಾಜ್, ಅಜರ್ ಅಲಿ, ಪ್ರವೀಣ್, ಆರಾಧ್ಯಮಠ್, ಹನುಮಂತಪ್ಪ, ಹರೀಶ್‌ಕುಮಾರ್ ಮೊದಲಾದವರು ಉಪಸ್ಥಿತರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

