ಮೆಸ್ಕಾಂ ಕಚೇರಿಗೆ ಬೀಗ ಜಡಿದು ಪ್ರತಿಭಟನೆ
ಕನ್ನಡಪ್ರಭ ವಾರ್ತೆ ಟಿ ತ್ಯಾಗರ್ತಿ ಟಿ ಜ.13
ಸಾಗರ ತಾಲೂಕಿನ ತ್ಯಾಗರ್ತಿ, ಬರೂರು ಗ್ರಾಪಂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಅಸರ್ಪಪಕ ವಿದ್ಯುತ್ ಪೂರೈಕೆ ಖಂಡಿಸಿ ಗ್ರಾಮಸ್ಥರು ಸೋಮವಾರ ತ್ಯಾಗರ್ತಿಯ ಮೆಸ್ಕಾಂ ಕಚೇರಿಗೆ ಬೀಗ ಜಡಿದು ಪ್ರತಿಭಟನೆ ನಡೆಸಿದರು.
ಈ ಸಂದರ್ಭ ಮಾತನಾಡಿದ ಗ್ರಾಪಂ ಮಾಜಿ ಸದಸ್ಯ ಲ್ಯಾವಿಗೆರೆ ವೀರಪ್ಪಗೌಡ, ಮೆಸ್ಕಾಂನ ನಿರ್ಲಕ್ಷ್ಯತನದಿಂದಾಗಿ ರೈತರು ಜೀವನ ಸಾಗಿಸುವುದು ಕಷ್ಟ ಎನ್ನುವ ಸ್ಥಿತಿ ನಿರ್ಮಾಣವಾಗಿದೆ. ತ್ಯಾಗರ್ತಿ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವೋಲ್ಟೇಜ್ ತೊಂದರೆಯಿಂದಾಗಿ ಗದ್ದೆಗಳಿಗೆ ನೀರು ಹರಿಸಲು ಸಾಧ್ಯವಾಗದ ಸ್ಥಿತಿ ನಿರ್ಮಾಣವಾಗಿದೆ ಎಂದು ಆತಂಕ ವ್ಯಕ್ತಪಡಿಸಿದರು.
ಮೆಸ್ಕಾಂನ ಸ್ಥಳೀಯ ಅಧಿಕಾರಿಗಳು ಬಗರ್ಹುಕುಂ ಜಮೀನಿನ ಬೋರ್ವೆಲ್ಗಳಿಗೆ ನೀಡಿದ ವಿದ್ಯುತ್ ಸಂಪರ್ಕ ಕಡಿತಗೊಳಿಸಿದ್ದರಿಂದ ಜಮೀನು ಒಣಗಿ ರೈತರು ಸಾವಿರಾರು ರುಪಾಯಿ ನಷ್ಟ ಅನುಭವಿಸುವಂತೆ ಆಗಿದೆ ಎಂದು ಇದೇ ಸಂದರ್ಭದಲ್ಲಿ ದೂರಿದರು.
ಭರವಸೆ: ಸ್ಥಳಕ್ಕೆ ಆಗಮಿಸಿದ ಸಾಗರ ಮೆಸ್ಕಾಂನ ಸಹಾಯಕ ಕಾರ್ಯಪಾಲಕ ಅಭಿಯಂತರ ಸುರೇಶ್, ಪ್ರತಿಭಟನಾನಿರತರನ್ನು ಮನವೊಲಿಸಿ ಮಾತನಾಡಿ, ತ್ಯಾಗರ್ತಿ ಭಾಗಕ್ಕೆ 45,33 ಲಕ್ಷ ವೆಚ್ಚದಲ್ಲಿ ತಡೆರಹಿತ ವಿದ್ಯುತ್ ಸಂಪರ್ಕ ನೀಡಲು ಕ್ರಮ ಕೈಗೊಳ್ಳಲಾಗುತ್ತಿದೆ. ವಿದ್ಯುತ್ ಪ್ರಸರಣ ಕೇಂದ್ರ ಸ್ಥಾಪಿಸಲು ಸ್ಥಳದ ಅವಶ್ಯಕತೆಗಾಗಿ ತ್ಯಾಗರ್ತಿ ಗ್ರಾಪಂಗೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಈ ಭಾಗದಲ್ಲಿ ಸಿಬ್ಬಂದಿ ಕೊರತೆ ಇದ್ದು, ಸರ್ಕಾರದ ಹಂತದಲ್ಲಿ ನೇಮಕಾತಿ ಆಗಬೇಕಾಗಿದೆ. ಒಂದು ವಾರದೊಳಗಾಗಿ ವಿದ್ಯುತ್ ಪೂರೈಕೆ ಸಮಸ್ಯೆ ಬಗೆಹರಿಸುವ ಭರವಸೆ ನೀಡಿದ ನಂತರ ರೈತರು ಪ್ರತಿಭಟನೆ ಹಿಂತೆಗೆದುಕೊಂಡರು.
ಎಲ್.ಆರ್. ವೀರಪ್ಪ ಲ್ಯಾವಿಗೆರೆ, ಖಂಡೋಜಪ್ಪ, ಗಣಪತಿ, ಸತ್ಯನಾರಾಯಣ, ಹುಚ್ಚಪ್ಪ, ದೇವರಾಜ್ ಇನ್ನಿತರರು ಹಾಜರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

