ರಾಷ್ಟ್ರಕ್ಕೆ ಸಮರ್ಥ ನಾಯಕತ್ವ ಅಗತ್ಯ
ಸಾಗರ: ಕಾಂಗ್ರೆಸ್ ನೇತೃತ್ವದ ಯು.ಪಿ.ಎ. ಸರ್ಕಾರದ ಜನವಿರೋಧಿ ಆಡಳಿತದಿಂದ, ವ್ಯಾಪಕ ಭ್ರಷ್ಟಾಚಾರದಿಂದ ಬೇಸತ್ತಿರುವ ದೇಶವಾಸಿಗಳಿಗೆ ನರೇಂದ್ರ ಮೋದಿಯವರಂತಹ ಸಮರ್ಥ ನಾಯಕರ ನಾಯಕತ್ವ ಬೇಕಾಗಿದೆ ಎಂದು ವಾಗ್ಮಿ ನಿತ್ಯಾನಂದ ವಿವೇಕ ವಂಶಿ ಹೇಳಿದರು.
ನಮೋ ಬ್ರಿಗೇಡ್ ತಾಲೂಕು ಘಟಕ ಹಮ್ಮಿಕೊಂಡಿದ್ದ “”YÚÁé ಚಲೋ-ಗಾಂವ್ ^ÚÅæàÞ’’ ಅಭಿಯಾನ ಕಾರ್ಯಕ್ರಮ ಉದ್ಘಾಟಿಸಿ, ಯು.ಪಿ.ಎ. ಸರ್ಕಾರದ ಅವಧಿಯಲ್ಲಿ ನಡೆದಷ್ಟು ಭ್ರಷ್ಟಾಚಾರ ಯಾವ ಸರ್ಕಾರದ ಅವಧಿಯಲ್ಲಿಯೂ ನಡೆಯಲಿಲ್ಲ. ದೇಶವು ಸಂಕಷ್ಟ ಸ್ಥಿತಿಯಲ್ಲಿದ್ದು, ಮೋದಿಯವರನ್ನು ಪ್ರಧಾನಿ ಮಾಡುವ ಮೂಲಕ ಸಂಕಷ್ಟ ನಿವಾರಿಸುವ ಕೆಲಸವನ್ನು ಮಾಡಬೇಕಾಗಿದೆ ಎಂದರು.
ನರೇಂದ್ರ ಮೋದಿಯವರು ಮುಖ್ಯಮಂತ್ರಿಯಾದ ಮೇಲೆ ಗುಜರಾತಿನಲ್ಲಿ 200ಕ್ಕೂ ಹೆಚ್ಚು ಚೆಕ್ ಡ್ಯಾಂಗಳನ್ನು ನಿರ್ಮಿಸಿ ಬರಗಾಲವನ್ನು ನೀಗಿಸಿದ್ದಾರೆ. ಗುಜರಾತಿನಲ್ಲಿ ಮೋದಿ ಕೇಸರೀಕರಣ ಮಾಡುತ್ತಿಲ್ಲ. ಬದಲಾಗಿ ಹಸಿರೀಕರಣ ಮಾಡುತ್ತಿದ್ದಾರೆ. ದೇಶದಲ್ಲಿ ಕಾಂಗ್ರೆಸ್ ಸರ್ಕಾರವು ಖಸಾಯಿಖಾನೆಗಳಿಗೆ ಪರವಾನಿಗೆ ನೀಡುವ ಮೂಲಕ ಗೋಸಂತತಿಯ ನಾಶಕ್ಕೆ ಕಾರಣವಾಗಿದೆ. ದೇಶದಾದ್ಯಂತ ಗೋಹತ್ಯಾ ನಿಷೇಧ ಕಾಯ್ದೆ ಜಾರಿಗೆ ಬರಬೇಕಾದರೆ ಮೋದಿ ಪ್ರಧಾನಿಯಾಗುವುದು ಅಗತ್ಯ ಎಂದು ಹೇಳಿದರು.
ಅಧ್ಯಕ್ಷತೆ ವಹಿಸಿದ್ದ ನಮೋ ಬ್ರಿಗೇಡ್ ತಾಲೂಕು ಸಂಚಾಲಕ ಕೆ.ಎಲ್. ಭೋಜರಾಜ್, ದೇಶದಲ್ಲಿ 12.50 ಕೋಟಿ ಹೊಸ ಮತದಾರರಿದ್ದಾರೆ. ಅವರಲ್ಲಿ ಈತನಕ ಕೇವಲ 55 ಲಕ್ಷ ಜನ ಮಾತ್ರ ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರನ್ನು ನೋಂದಾಯಿಸಿಕೊಂಡಿದ್ದಾರೆ. ಈ ತಿಂಗಳ 26ರೊಳಗೆ ಹೊಸ ಮತದಾರರು ತಮ್ಮ ಹೆಸರನ್ನು ಪಟ್ಟಿಗೆ ಸೇರಿಸಿಕೊಳ್ಳಬೇಕು ಎಂದು ತಿಳಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

