ಶಿವಮೊಗ್ಗ

ರೋಬೋಟಿಕ್ ಕಾರ್ಯಾಗಾರ

Published On :

ಶಿವಮೊಗ್ಗ: ಸರ್ಕಾರಿ ಪ್ರೌಢಶಾಲೆಯ ಆಯ್ದ ವಿದ್ಯಾರ್ಥಿಗಳಿಗೆ ಉಚಿತ ರೋಬೋಟಿಕ್ ತರಬೇತಿ ಕಾರ್ಯಾಗಾರವನ್ನು ಜ. 24ರಿಂದ 26ರವರೆಗೆ ವೆಸ್ಟೋ ಎಜುಕೇಷನ್ ಸಲ್ಯೂಷನ್ ಸಹಯೋಗದಲ್ಲಿ ಶಿವಮೊಗ್ಗದ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ (ಪ್ರೌಢಶಾಲಾ ವಿಭಾಗ) ಹಮ್ಮಿಕೊಳ್ಳಲಾಗಿದೆ ಎಂದು ಸರ್ವಶಿಕ್ಷಣ ಅಭಿಯಾನದ ಸಂಯೋಜನಾಧಿಕಾರಿ ಗಣಪತಿ ತಿಳಿಸಿದ್ದಾರೆ.
ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ಸಿಗಬೇಕು ಹಾಗೂ ವಿದ್ಯಾರ್ಥಿಗಳು ವಿಜ್ಞಾನ ಮತ್ತು ತಂತ್ರಜ್ಞಾನ ಕ್ಷೇತ್ರದ ಬಗ್ಗೆ ಆಸಕ್ತಿ ಬೆಳಸಿಕೊಳ್ಳಬೇಕೆಂಬ ಉದ್ದೇಶದಿಂದ ಪ್ರೌಢಶಾಲೆಯ 8 ಮತ್ತು 9ನೇ ತರಗತಿ ವಿದ್ಯಾರ್ಥಿಗಳಿಗೆ ಉಚಿತವಾಗಿ ರೋಬೋಟಿಕ್ ತರಬೇತಿ ನೀಡಲಾಗುತ್ತಿದೆ ಎಂದು ತಿಳಿಸಿದರು.
ಕಾರ್ಯಾಗಾರದಲ್ಲಿ ಶಿವಮೊಗ್ಗ ತಾಲೂಕಿನ 14 ಸರ್ಕಾರಿ ಶಾಲೆಗಳಿಂದ 60 ವಿದ್ಯಾರ್ಥಿಗಳು ಹಾಗೂ ಭದ್ರಾವತಿ ತಾಲೂಕಿನ 9 ಶಾಲೆಗಳಿಂದ 40 ವಿದ್ಯಾರ್ಥಿಗಳು ಸೇರಿ ಒಟ್ಟು 100 ವಿದ್ಯಾರ್ಥಿಗಳು ಭಾಗವಹಿಸುತ್ತಿದ್ದು, ಎಲ್ಲರಿಗೂ ಉಚಿತವಾಗಿ ರೋಬೋಟಿಕ್ ಹಾಗೂ ಪ್ರಮಾಣಪತ್ರ ನೀಡಲಾಗುವುದು ಎಂದರು.
ರೋಬೋಟಿಕ್ ತಂತ್ರಜ್ಞಾನದ ಕುರಿತು ಮಾತನಾಡಿದ ಸಂಸ್ಥೆಯ ಪ್ರಮುಖರಾದ ಸೈಯದ್ ಸಲೀಮ್, ಮಕ್ಕಳಲ್ಲಿ ಈ ಕಾರ್ಯಾಗಾರದಿಂದ ಕ್ರಿಯಾಶೀಲತೆ ಬೆಳೆಯುತ್ತದೆ. ನಾವು ರೋಬೋಟಿಕ್ ಕಲಿಸಿಕೊಡುವ ಜತೆಗೆ ಅವರು ತಮ್ಮ ಸ್ವಂತಿಕೆಯಿಂದ ಕ್ರಿಯಾಶೀಲತೆ ತೋರಿಸಲು ಸಹಕಾರ ನೀಡುತ್ತೇವೆ ಎಂದು ಹೇಳಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.