ಜಾತಿ, ಆದಾಯ ಪ್ರಮಾಣ ಪತ್ರ: ಕಾಲಾವಧಿ ನಿಗದಿ
ಶಿವಮೊಗ್ಗ: ರಾಜ್ಯದ ಸಾರ್ವಜನಿಕರಿಗೆ ಸರ್ಕಾರದ ವಿವಿಧ ಯೋಜನೆಗಳಿಗಾಗಿ ಕಂದಾಯ ಇಲಾಖೆಯಿಂದ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಹಿಂದುಳಿದ ವರ್ಗದವರಿಗೆ ನೀಡಲಾಗುತ್ತಿರುವ ಜಾತಿ ಪ್ರಮಾಣ ಪತ್ರಗಳ ಕಾಲಾವಧಿಯನ್ನು ಸದರಿ ಪ್ರಮಾಣ ಪತ್ರವನ್ನು ರದ್ದುಪಡಿಸುವವರೆಗೆ ಸಿಂಧುತ್ವದಲ್ಲಿರುತ್ತದೆ ಹಾಗೂ ಆದಾಯ ಪ್ರಮಾಣ ಪತ್ರಗಳ ಕಾಲಾವಧಿಯು ಐದು ವರ್ಷಗಳವರೆಗೆ ಸಿಂಧುತ್ವದಲ್ಲಿರುತ್ತದೆ ಎಂದು ಸಮಾಜ ಕಲ್ಯಾಣ ಇಲಾಖೆಯು ಸುತ್ತೋಲೆ ಹೊರಡಿಸಿದೆ.
ಸುತ್ತೋಲೆ ಹೊರಡಿಸಲಾಗಿದ್ದರೂ ಸಹ, ಸಾರ್ವಜನಿಕರು ಮತ್ತು ವಿದ್ಯಾರ್ಥಿಗಳಿಂದ ಜಾತಿ ಮತ್ತು ಆದಾಯ ಪ್ರಮಾಣ ಪತ್ರಗಳ ಮೂಲ ಪ್ರಮಾಣ ಪತ್ರಗಳನ್ನು ಸಂಬಂಧಿಸಿದ ಇಲಾಖೆಯಲ್ಲಿ ತೆಗೆದುಕೊಳ್ಳುತ್ತಿರುವುದರಿಂದ ಸಾರ್ವಜನಿಕರು ಪದೇ ಪದೇ ಪ್ರಮಾಣ ಪತ್ರಗಳಿಗಾಗಿ ಅರ್ಜಿ ಸಲ್ಲಿಸಬೇಕಾದ ಸಂದರ್ಭ ಉಂಟಾಗುತ್ತಿದೆ. ಈ ರೀತಿಯಾಗಿ ಇಲಾಖೆಗಳಲ್ಲಿ ಮೂಲ ಪ್ರಮಾಣ ಪತ್ರಗಳನ್ನು ತೆಗೆದುಕೊಳ್ಳುತ್ತಿರುವುದರಿಂದ ವಿದ್ಯಾರ್ಥಿಗಳು ವಿದ್ಯಾಭ್ಯಾಸದ ಕಾರಣಕ್ಕಾಗಿ ಪ್ರಮಾಣ ಪತ್ರಗಳನ್ನು ಪಡೆಯಲು ಸಲ್ಲಿಸುವ ಅರ್ಜಿಯ ಮೇಲೆ ಪ್ರತಿ ವರ್ಷವೂ ಹಿಂದೆ ನೀಡಿದ ಪ್ರಮಾಣ ಪತ್ರವನ್ನೇ ನೀಡಬೇಕಾಗುತ್ತದೆ.
ಇದರಿಂದ ಯಾವುದೇ ಪ್ರಯೋಜನವಾಗದೇ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರನ್ನು ಪದೇ ಪದೇ ಕಚೇರಿಗೆ ಅಲೆದಾಡಿಸಬೇಕಾದ ಹಾಗೂ ಇಲಾಖೆಗೆ ಪುನಃ ಪ್ರಮಾಣ ಪತ್ರವನ್ನು ನೀಡಬೇಕಾದ ಹೆಚ್ಚುವರಿ ಕಾರ್ಯವಾಗುತ್ತದೆ.
ಈ ಎಲ್ಲಾ ತೊಂದರೆಗಳನ್ನು ತಪ್ಪಿಸಲು ಸಾರ್ವಜನಿಕರು ಮತ್ತು ವಿದ್ಯಾರ್ಥಿಗಳಿಂದ ಇಲಾಖಾ ಮುಖ್ಯಸ್ಥರುಗಳು ಮೂಲ ಆದಾಯ ಪ್ರಮಾಣ ಪತ್ರ ಮತ್ತು ಜಾತಿ ಪ್ರಮಾಣ ಪತ್ರಗಳನ್ನು ಯಾವುದೇ ಕಾರಣಕ್ಕೂ ಪಡೆದುಕೊಳ್ಳದೆ ದೃಢೀಕರಿಸಿದ ಪ್ರಮಾಣ ಪತ್ರಗಳನ್ನು ಪಡೆದುಕೊಂಡು ಅವುಗಳನ್ನು ಮೂಲ ಪ್ರಮಾಣ ಪತ್ರದೊಂದಿಗೆ ತಾಳೆನೋಡಿ, ನಂತರ ಮೂಲ ಪ್ರಮಾಣ ಪತ್ರವನ್ನು ಅರ್ಜಿದಾರರಿಗೆ ಹಿಂದಿರುಗಿಸಬೇಕೆಂದು ಸರ್ಕಾರದ ಮುಖ್ಯ ಕಾರ್ಯದರ್ಶಿ ಕೌಶಿಕ್ ಮುಖರ್ಜಿಯವರು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

