ಎಸ್ಕೆಎನ್ ಆಂಗ್ಲ ಶಾಲೆ ವಾರ್ಷಿಕೋತ್ಸವ
ಶಿವಮೊಗ್ಗ: ಎಸ್.ಕೆ.ಎನ್ ಆಂಗ್ಲ ಶಾಲೆಯ ವಾರ್ಷಿಕೋತ್ಸವ ನಗರದ ಕುವೆಂಪು ರಂಗಮಂದಿರದಲ್ಲಿ ಹಮ್ಮಿಕೊಳ್ಳಲಾಗಿತ್ತು.
ಅಧ್ಯಕ್ಷತೆಯನ್ನು ಎಸ್.ಕೆ.ಎನ್. ಚಾರಿಟಬಲ್ ಟ್ರಸ್ಟ್ ಅಧ್ಯಕ್ಷ ಅನೂಪ್ ಎನ್. ಪಟೇಲ್ ವಹಿಸಿದ್ದರು. ಮುಖ್ಯ ಅತಿಥಿಯಾಗಿ ಅಧಿಕಾರಿ ಜಿಲ್ಲಾ ವಯಸ್ಕರ ಶಿಕ್ಷಣ ಇಲಾಖೆ ಎಚ್.ಎಸ್. ಪಾಟೀಲ್, ನಾರಾಯಣಸ್ವಾಮಿ, ಪದ್ಮಾ ನಾರಾಯಣಸ್ವಾಮಿ ಮತ್ತು ಅಮಿತ ಉಪಸ್ಥಿತರಿದ್ದರು.
ಕಾರ್ಯಕ್ರಮವನ್ನು ಅಲ್ನಾಜ್ ಹುಸ್ನಾ ಹಾಗೂ ವಿಶ್ವ ನಿರೂಪಿಸಿದರು. ರೂಪಶ್ರೀ ಮತ್ತು ರಕ್ಷಿತಾ ಪ್ರಾರ್ಥಿಸಿದರು. ಹೇಮಲತಾ ಸ್ವಾಗತಿಸಿದರು. ದೀಪಾ ರಾಯ್ಕರ್ ವಂದಿಸಿದರು. ರಾಜ್ಯ ಮತ್ತು ರಾಷ್ಟ್ರಮಟ್ಟದ ಕ್ರೀಡೆಯಲ್ಲಿ ಭಾಗವಹಿಸಿದ ಕ್ರೀಡಾಪಟುಗಳಿಗೆ ಇದೇ ಸಂದರ್ಭದಲ್ಲಿ ಸನ್ಮಾನಿಸಲಾಯಿತು.
ನಂತರ ಮಕ್ಕಳಿಂದ ಆಕರ್ಷಕ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು. ಯೋಗಾಸನ ಪ್ರದರ್ಶನ ಮನಸೂರೆಗೊಂಡಿತು.
--
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

