ಮೆಗ್ಗಾನ್ ಆಸ್ಪತ್ರೆಗೆ ದೀಪ ವ್ಯವಸ್ಥೆಗಾಗಿ ಪ್ರತಿಭಟನೆ
ಶಿವಮೊಗ್ಗ: ಇಲ್ಲಿನ ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಸೂಕ್ತ ವಿದ್ಯುತ್ ದೀಪಗಳ ವ್ಯವಸ್ಥೆ ಇಲ್ಲದಿರುವ ಕಾರಣ ರಾತ್ರಿ ರೋಗಿಗಳು ಮತ್ತವರ ಸಂಬಂಧಿಗಳು ಸಾಕಷ್ಟು ತೊಂದರೆ ಅನುಭವಿಸುವಂತಾಗಿದೆ ಎಂದು ಕನ್ನಡಿಗರ ರಕ್ಷಣಾ ವೇದಿಕೆ ಕಾರ್ಯಕರ್ತರು ಪ್ರತಿಭಟನೆ ನಡೆಸಿದ ಪ್ರಸಂಗ ಮಂಗಳವಾರ ರಾತ್ರಿ ನಡೆಯಿತು.
ಮೆಗ್ಗಾನ್ ಆಸ್ಪತ್ರೆ ಆವರಣಕ್ಕೆ ಕ್ಯಾಂಡಲ್ ಹಿಡಿದು ಆಗಮಿಸಿದ ಕಾರ್ಯಕರ್ತರು ಆಸ್ಪತ್ರೆ ಮುಖ್ಯಸ್ಥರ ವಿರುದ್ಧ ಘೋಷಣೆ ಕೂಗಿ ಅಸಮಾಧಾನ ವ್ಯಕ್ತಪಡಿಸಿದರು.
ವೈದ್ಯ-ಸಿಬ್ಬಂದಿ ನಿರ್ಲಕ್ಷ್ಯ ವಹಿಸುತ್ತಿದ್ದಾರೆ. ಆಸ್ಪತ್ರೆಯಲ್ಲಿ ಸೂಕ್ತ ಯಂತ್ರೋಪಕರಣಗಳು ಇಲ್ಲ. ಸ್ಪತ್ರೆಯ ಮುಂಭಾಗದಲ್ಲಿ ಯಾವುದೇ ರೀತಿಯ ವಿದ್ಯುತ್ ದೀಪವಿಲ್ಲದೇ ರೋಗಿಗಳಿಗೆ ತೊಂದರೆಯಾಗುತ್ತಿದೆ ಎಂದು ಆರೋಪಿಸಿದರು.
ಕೂಡಲೇ ಸಮಸ್ಯೆಗಳನ್ನು ಬಗೆಹರಿಸಬೇಕು. ಇಲ್ಲದಿದ್ದಲ್ಲಿ ಹೋರಾಟವನ್ನು ಇನ್ನಷ್ಟು ತೀವ್ರಗೊಳಿಸಲಾಗುವುದು ಎಂದು ಎಚ್ಚರಿಸಿದರು. ಪ್ರತಿಭಟನೆಯಲ್ಲಿ ವೇದಿಕೆ ಜಿಲ್ಲಾಧ್ಯಕ್ಷ ಜಾವಳ್ಳಿ ಚಂದ್ರು, ಉಪಾಧ್ಯಕ್ಷ ದಾನೇಶ್, ಪ್ರಮುಖರಾದ ಶ್ರೀನಿವಾಸ್, ಕಲ್ಲಾಪುರ ಮಂಜುನಾಥ್, ಎಂ.ಪುನೀತ್, ಕಿರಣಣ್ಕುಮಾರ್, ಸಿದ್ದು, ಆರ್.ಸುಜಿತ್, ರಾಜ, ಮಂಜುನಾಥ್ ಮತ್ತಿತರರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

