ಸುಳ್ಳು ಪ್ರಕರಣ: ತನಿಖೆಗೆ ಆಗ್ರಹ
ಸಾಗರ: ತಾಲೂಕಿನ ಆನಂದಪುರಂನಲ್ಲಿ ಕಿಡಿಗೇಡಿಗಳನ್ನು ನಿಯಂತ್ರಿಸಿದ ಪೊಲೀಸರ ಮೇಲೆ ಸುಳ್ಳು ಪ್ರಕರಣ ದಾಖಲಿಸಿರುವುದನ್ನು ಖಂಡಿಸಿ, ಸಮಾನ ನಾಗರಿಕ ಸಂಹಿತೆ ಜಾರಿ ಹಾಗೂ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವಂತೆ ಒತ್ತಾಯಿಸಿ ಬುಧವಾರ ವಿಶ್ವ ಹಿಂದೂ ಪರಿಷತ್, ಭಜರಂಗದಳ ಹಾಗೂ ನಮ್ಮ ದೇಶ ನಮ್ಮ ಹಕ್ಕು ಹೋರಾಟ ವೇದಿಕೆ ವತಿಯಿಂದ ಉಪವಿಭಾಗಾಧಿಕಾರಿ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಲಾಯಿತು.
ಜ.19ರಂದು ರಾತ್ರಿ 8 ಗಂಟೆ ಸಮಯದಲ್ಲಿ ಆನಂದಪುರಂ ರಾಷ್ಟ್ರೀಯ ಹೆದ್ದಾರಿಯಲ್ಲಿ 10 ರಿಂದ 15 ವ್ಯಕ್ತಿಗಳು ರಸ್ತೆಯ ಮೇಲೆ ವಾಹನದಲ್ಲಿರುವ ಧ್ವನಿವರ್ಧಕ ಬಳಸಿ ಮನಬಂದಂತೆ ಕುಣಿದು, ಸಾರ್ವಜನಿಕರಿಗೆ ತೊಂದರೆ ಉಂಟು ಮಾಡಿದ್ದಾರೆ. ಸಾರ್ವಜನಿಕರು ನೀಡಿದ ದೂರಿನ ಮೇಲೆ ಆನಂದಪುರಂ ಠಾಣೆಯ ಮೂವರು ಪೊಲೀಸರು ಸ್ಥಳಕ್ಕೆ ಆಗಮಿಸಿ, ಅಸಂಬದ್ಧವಾಗಿ ವರ್ತಿಸುತ್ತಿದ್ದ ವ್ಯಕ್ತಿಗಳನ್ನು ನಿಯಂತ್ರಿಸಿ ಕ್ರಮ ಜರುಗಿಸಿದ್ದರು. ಈ ವ್ಯಕ್ತಿಗಳು ಸಾಗರಕ್ಕೆ ಬಂದು ಸುಳ್ಳು ದೂರನ್ನು ದಾಖಲಿಸಿದ್ದಾರೆ. ಇದರ ಹಿಂದೆ ವ್ಯವಸ್ಥಿತ ರಾಜಕೀಯ ಷಡ್ಯಂತ್ರವಿದೆ. ದಕ್ಷ ಪೊಲೀಸರ ವಿರುದ್ಧ ಕಾನೂನು ಸವಲತ್ತು ದುರುಪಯೋಗಪಡಿಸಿಕೊಳ್ಳಲಾಗಿದೆ. ಈ ಮೂಲಕ ಕೇಂದ್ರ ಮತ್ತು ರಾಜ್ಯ ಕಾಂಗ್ರೆಸ್ ಸರ್ಕಾರ ಓಟ್ ಬ್ಯಾಂಕ್ ರಾಜಕಾರಣಕ್ಕಾಗಿ ದಕ್ಷ ಪೊಲೀಸರ ನೈತಿಕ ಸ್ಥೈರ್ಯವನ್ನು ಕುಗ್ಗಿಸುವ ಪ್ರಯತ್ನ ಮಾಡುತ್ತಿದೆ ಎಂದು ಮನವಿಯಲ್ಲಿ. ಈ ಬಗ್ಗೆ ಸಮಗ್ರ ಹಾಗೂ ಪಾರದರ್ಶಕ ತನಿಖೆ ನಡೆಸಬೇಕು. ತಪ್ಪಿತಸ್ತರ ವಿರುದ್ಧ ಕ್ರಮ ಜರುಗಿಸಬೇಕು ಎಂದು ಆಗ್ರಹಿಸಲಾಗಿದೆ.
ಈ ಸಂದರ್ಭ ಚೇತನರಾಜ್ ಕಣ್ಣೂರು, ರವೀಶಕುಮಾರ್, ಕೆ.ವಿ. ಪ್ರವೀಣ್, ಉಲ್ಲಾಸ್, ನವೀನ್, ಎಸ್.ಸಿ. ಹಿರೇಮಠ್, ಬಾಲಕೃಷ್ಣ ಗುಳೇದ್, ಐ.ವಿ. ಹೆಗಡೆ, ಉಮೇಶ್ ಇನ್ನಿತರರು ಹಾಜರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

