25000 ಗೌರವಧನ ನೀಡಲು ಆಗ್ರಹ
ಸೊರಬ: ವಿವಿಧ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಅತಿಥಿ ಉಪನ್ಯಾಸಕರ ಸಂಘದ ವತಿಯಿಂದ ಶುಕ್ರವಾರ ತಾಲೂಕು ಕಚೇರಿಗೆ ತೆರಳಿ ತಹಸೀಲ್ದಾರ್ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು.
ಅತಿಥಿ ಉಪನ್ಯಾಸಕರ ಸಂಘದ ಅಧ್ಯಕ್ಷ ನಾಗರಾಜ್ ಮಾತನಾಡಿ, ರಾಜ್ಯದಲ್ಲಿ ಸುಮಾರು 11 ಸಾವಿರ ಅತಿಥಿ ಉಪನ್ಯಾಸಕರಿದ್ದು, 6 ರಿಂದ 9 ವರ್ಷದವರೆಗೆ ಅತ್ಯಂತ ಕಡಿಮೆ ಗೌರವಧನದಲ್ಲಿ ಅತಿಥಿ ಉಪನ್ಯಾಸಕ ವೃತ್ತಿಯನ್ನು ಮಾಡಿಕೊಂಡು ಬಂದಿದ್ದೇವೆ. ಈಗಾಗಲೇ ಸೇವೆ ಸಲ್ಲಿಸುತ್ತಿರುವ ಅನೇಕ ಉಪನ್ಯಾಸಕರು ವಿವಾಹಿತರಾಗಿದ್ದು, ವಯೋವುತಿ ಸಹಾ ಮೀರುತ್ತಿದೆ. ಸರ್ಕಾರದಿಂದ ಜೀವನ ಭದ್ರತೆ ಇಲ್ಲದೇ ಇರುವುದರಿಂದ ಮುಂದಿನ ಭವಿಷ್ಯದ ಬಗ್ಗೆ ಯೋಚನೆ ಮಾಡುವಂತಾಗಿದೆ. ಆದ್ದರಿಂದ ಹಾಲಿ ಸೇವೆ ಸಲ್ಲಿಸುತ್ತಿರುವವರಿಗೆ ಸರ್ಕಾರದಿಂದ ಜೀವನ ಭದ್ರತೆಗಾಗಿ ಮತ್ತು ರಕ್ಷಣೆಗಾಗಿ ಯೋಜನೆಗಳನ್ನು ಜಾರಿ ಮಾಡಬೇಕು. ಗೌರವಧನ ಪ್ರತಿ ತಿಂಗಳು ನೀಡಬೇಕು ಎಂದು ಮನವಿ ಮಾಡಿದರು.
ಪಕ್ಕದ ರಾಜ್ಯಗಳಾದ ಆಂಧ್ರಪ್ರದೇಶ ಮತ್ತು ತಮಿಳುನಾಡಿನಲ್ಲಿ ಅತಿಥಿ ಉಪನ್ಯಾಸಕರಿಗೆ 25000 ಗೌರವಧನ ನೀಡುತ್ತಿದೆ. ಆದರೆ, ರಾಜ್ಯ ಸರ್ಕಾರ ಕೇವಲ 8000 ಮಾತ್ರ ನೀಡುತ್ತಿದೆ. ಒಬ್ಬ ಕೂಲಿ ಕಾರ್ಮಿಕನಿಗಿಂತಲೂ ಕನಿಷ್ಠ ವೇತನ ತಮ್ಮದ್ದಾಗಿದೆ. ಇದರಿಂದ ಜೀವನ ನಿರ್ವಹಣೆಯೇ ಕಷ್ಟವಾಗಿದೆ. ಆದ್ದರಿಂದ ನಮ್ಮ ಮನವಿಗೆ ಸ್ಪಂದಿಸಿ ಗೌರವಧನ ಯುಜಿಸಿ ಮಾರ್ಗದರ್ಶನದಂತೆ ಪ್ರತಿ ಉಪನ್ಯಾಸಕನಿಗೂ ಮಾಸಿಕವಾಗಿ 25000 ವನ್ನು ಪ್ರಸಕ್ತ ಶೈಕ್ಷಣಿಕ ವರ್ಷದಿಂದಲೇ ನೀಡಬೇಕು. ಹಾಲಿ ಇರುವ ಅತಿಥಿ ಉಪನ್ಯಾಸಕರನ್ನು ಮುಂದಿನ ವರ್ಷಕ್ಕೆ ಕರ್ತವ್ಯಕ್ಕೆ ನೇಮಕ ಮಾಡಿಕೊಳ್ಳುವಾಗ ಪುನಃ ಸಂದರ್ಶನ ಮಾಡದೇ ಕಾರ್ಯನಿರ್ವಹಿಸುತ್ತಿರುವ ಕಾಲೇಜುಗಳಲ್ಲಿ ಮುಂದುವರಿಸಬೇಕು. ಸೇವಾ ಹಿರಿತನದ ಆಧಾರದ ಮೇಲೆ ಸದರಿ ಕಾಲೇಜುಗಳಿಗೆ ಉಪನ್ಯಾಸಕರನ್ನು ಕಾಯಂ ಮಾಡಿಕೊಳ್ಳಬೇಕು. ವಯೋವುತಿ ಮೀರುತ್ತಿರುವವರಿಗೆ ಮೊದಲ ಆದ್ಯತೆ ನೀಡಬೇಕು. ಸಂವಿಧಾನದ ಅನುಚ್ಛೇಧ 309ರ ಪ್ರಕಾರ ಸರ್ಕಾರಿ ಪದವಿ ಕಾಲೇಜುಗಳ ಉಪನ್ಯಾಸಕರ ಈಗಿರುವ ನಿಯಮಗಳಿಗೆ ತಿದ್ದುಪಡಿ ತರಬೇಕು ಎಂದು ಒತ್ತಾಯಿಸಿದರು.
ಅತಿಥಿ ಉಪನ್ಯಾಸಕರ ಸಂಘದ ಕಾರ್ಯದರ್ಶಿ ಟಿ.ರಾಘವೇಂದ್ರ, ಖಜಾಂಚಿ ಎಸ್.ಜಿ. ಚೇತನಕುಮಾರಿ, ಉಪನ್ಯಾಸಕರಾದ ಕೆ.ಆರ್. ಚಂದ್ರಪ್ಪ, ಎಂ.ಡಿ. ವೀರೇಂದ್ರ, ಎಚ್.ಡಿ. ವಿದ್ಯಾಶ್ರೀ, ಸ್ಮಿತಾ, ಕೆ.ಎಸ್. ಶೃತಿ, ಎಸ್. ರಮ್ಯಾ, ಎಸ್. ಕಾವ್ಯಾಶ್ರೀ, ವಸಂತ್, ಶಿವಕುಮಾರ್, ಪ್ರವೀಣ್, ನಾರಾಯಣ, ವಿಘ್ನೇಶ್, ಸಿದ್ದಪ್ಪ ಮೊದಲಾದವರು ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

