ಶಿವಮೊಗ್ಗ

ಆಧುನಿಕತೆ ಆಕರ್ಷಣೆಯಿಂದ ಮಾನವೀಯ ಮೌಲ್ಯಕ್ಕೆ ಧಕ್ಕೆ

Published On :

ಸಾಗರ: ಆಧುನಿಕತೆಯತ್ತ ಮುಖ ಮಾಡಿರುವ ನಾವು ಮಾನವೀಯ ಮೌಲ್ಯ ಮರೆಯುತ್ತಿದ್ದೇವೆ ಎಂದು ನಗರಸಭೆ ಸದಸ್ಯ ತೀ.ನ. ಶ್ರೀನಿವಾಸ್ ಹೇಳಿದರು.
ಇಲ್ಲಿನ ಮಾತೃಭೂಮಿ ಟ್ರಸ್ಟ್ ರಾಷ್ಟ್ರಕಾಕಗಿ ಮಡಿದ ವೀರ ಯೋಧರ ಸ್ಮರಣಾರ್ಥ ಉಪವಿಭಾಗೀಯ ಆಸ್ಪತ್ರೆಯಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಉಚಿತ ರಕ್ತದಾನ ಶಿಬಿರ ಉದ್ಘಾಟಿಸಿ ಮಾತನಾಡಿದರು.
ಸಂಬಂಧಕ್ಕೆ ಬೆಲೆ ಇಲ್ಲ: ಕೇವಲ ಹಣದ ಬೆನ್ನುಹತ್ತಿರುವ ನಮ್ಮಲ್ಲಿ ಮನುಷ್ಯ ಸಂಬಂಧಕ್ಕೆ ಬೆಲೆ ಇಲ್ಲದಂತಾಗಿದೆ. ಯಾರನ್ನೂ ನಂಬದ ಸ್ಥಿತಿ ನಿರ್ಮಾಣವಾಗುತ್ತಿರುವ ಈ ಹೊತ್ತಿನಲ್ಲಿ ಸಮಾಜದ ಪರವಾಗಿ ಕೆಲಸ ಮಾಡುವ ಸಂಘಟನೆಗಳು ಮನಸ್ಸುಗಳನ್ನು ಬೆಸೆಯುವ ಕೆಲಸ ಮಾಡಬೇಕು. ರಕ್ತದಾನದಂತಹ ವಿಷಯದ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವ ಜೊತೆಗೆ ಸರ್ಕಾರದ ಸವಲತ್ತು ಕುರಿತು ಜನರಿಗೆ ಅರಿವು ಮೂಡಿಸಬೇಕು ಎಂದು ಹೇಳಿದರು.
ತಪ್ಪು ಕಲ್ಪನೆ; ಜಿಪಂ ಸದಸ್ಯೆ ಲಲಿತಾ ನಾರಾಯಣ್ ಮಾತನಾಡಿ, ಇಂದಿಗೂ ಸಮಾಜದಲ್ಲಿ ರಕ್ತದಾನದ ಬಗ್ಗೆ ತಪ್ಪು ಕಲ್ಪನೆಯಿದೆ. ರಕ್ತದಾನ ಮಾಡಿದರೆ ಆರೋಗ್ಯ ಹದಗೆಡುತ್ತದೆ ಎಂದು ಜನರ ಮನಸ್ಸಿನಲ್ಲಿ ಬೇರೂರಿರುವ ಭಯ ಹೋಗಲಾಡಿಸುವ ಕೆಲಸ ಮಾಡಬೇಕಾಗಿದೆ. ರಕ್ತದಾನದಿಂದ ಮತ್ತೊಬ್ಬರ ಪ್ರಾಣ ಉಳಿಸಲು ಸಾಧ್ಯವಿದೆ ಎನ್ನುವುದನ್ನು ಜನರಿಗೆ ತಿಳಿಸುವ ಕೆಲಸ ತುರ್ತಾಗಿ ಮಾಡಬೇಕಾಗಿದೆ ಎಂದರು. ಅಧ್ಯಕ್ಷತೆ ವಹಿಸಿದ್ದ ಮಾತೃಭೂಮಿ ಟ್ರಸ್ಟ್ ಅಧ್ಯಕ್ಷ ರವಿಕುಗ್ವೆ, ಯುವಜನರನ್ನು ಸಮಾಜಮುಖಿ ಚಟುವಟಿಕೆಗಳಲ್ಲಿ ತೊಡಗಿಸಿಕೊಲ್ಳುವಂತೆ ಪ್ರೇರೇಪಿಸುವುದು ನಮ್ಮ ಟ್ರಸ್ಟ್ ಪ್ರಮುಖ ಆಶಯವಾಗಿದೆ. ಇದರ ಜೊತೆಗೆ ಜನಜಾಗೃತಿ, ಆರೋಗ್ಯ ಶಿಬಿರ ಹಾಗೂ ನೊಂದವರ ನೆರವಿಗೆ ಧಾವಿಸುವ ಉದ್ದೇಶವನ್ನು ಟ್ರಸ್ಟ್ ಹೊಂದಿದೆ ಎಂದು ತಿಳಿಸಿದರು.
ತಾಪಂ ಮಾಜಿ ಅಧ್ಯಕ್ಷ ಮಲ್ಲಿಕಾರ್ಜುನ ಹಕ್ರೆ, ಮಂಡಗಳಲೆ ಹುಚ್ಚಪ್ಪ, ಡಾ. ಪ್ರಕಾಶ್ ಭೋಸ್ಲೆ, ಪದವಿ ಕಾಲೇಜು ಪ್ರಾಚಾರ್ಯ ಡಾ. ಪ್ರಸನ್ನ, ಡಾ.ಒ.ಜಿ. ಬಸವನಗೌಡ, ಅಣ್ಣಪ್ಪ ಬಾಳೆಗುಂಡಿ, ಪರಮೇಶ್ವರ ದೂಗೂರು, ಸ್ವಪ್ನ, ಎನ್. ಲಲಿತಮ್ಮ ಹಾಜರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.