ಶಿವಮೊಗ್ಗ

ಹೃದಯಾಘಾತ: ಪೊಲೀಸ್ ಪೇದೆ ಸಾವು

Published On :

ಸೊರಬ:  ಪಟ್ಟಣದ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಪೊಲೀಸ್ ಪೇದೆ ರಾಘವೇಂದ್ರ (33) ಎಂಬವರು ಹಠಾತ್ ಹೃದಯಾಘಾತದಿಂದ ನಿಧನರಾದರು. ಅವರಿಗೆ ಪತ್ನಿ, ಇಬ್ಬರು ಪುತ್ರಿಯರು, ತಂದೆ-ತಾಯಿ ಇದ್ದಾರೆ.
ತಾಲೂಕಿನ ಹಂಚಿ ತಾಂಡಾದವರಾದ ರಾಘವೇಂದ್ರ ಅವರಿಗೆ ಶುಕ್ರವಾರ ಕರ್ತವ್ಯದಲ್ಲಿದ್ದಾಗ ಮಧ್ಯಾಹ್ನ ಎದೆನೋವು ಎಂದು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ, ಆವರ ದೇಹಸ್ಥಿತಿ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ. ಕೆಲಕಾಲ ಅವರ ಪಾರ್ಥಿವ ಶರೀರವನ್ನು ಪಟ್ಟಣ ಪೊಲೀಸ್ ಠಾಣೆಯ ಎದುರು ಸಾರ್ವಜನಿಕರ ದರ್ಶನಕ್ಕೆ ಇರಿಸಲಾಗಿತ್ತು. ಸರ್ಕಾರಿ ಮರ್ಯಾದೆಯೊಂದಿಗೆ ಶವ ಸಂಬಂಧಿಗಳಿಗೆ ಒಪ್ಪಿಸಲಾಯಿತು.  ತಾಲೂಕು ಪ್ರಮುಖರು, ಗಣ್ಯರಾದ ಹುನವಳ್ಳಿ ಗಂಗಾಧರಪ್ಪ, ಪಾಣಿ ರಾಜಪ್ಪ, ಎಂ.ಡಿ.ಶೇಖರ್, ಪ್ರಶಾಂತ ಮೇಸ್ತ್ರಿ, ಮಹೇಶ್ ಗೌಳಿ, ಚಿಕ್ಕಾವಲಿ ನಾಗರಾಜಗೌಡ, ಎಚ್.ಗಣಪತಿ, ಬಂದಿಗೆ ಬಸವರಾಜ ಶೇಟ್, ಸುರೇಶ್, ಸೊರಬದಲ್ಲಿ ವೃತ್ತ ನಿರೀಕ್ಷಕರಾಗಿ ಸೇವೆ ಸಲ್ಲಿಸಿದ್ದ ಕೃಷ್ಣಮೂರ್ತಿ, ಪಿಎಸ್‌ಐ ಆಗಿ ಕರ್ತವ್ಯ ನಿರ್ವಹಿಸಿದ್ದ ಮಹಬಲೇಶ್ವರ ನಾಯ್ಕ್, ಠಾಣೆಯ ಅಧಿಕಾರಿಗಳು, ಸಿಬ್ಬಂದಿ, ಪಟ್ಟಣ ಮತ್ತು ವಿವಿಧ ಗ್ರಾಮಗಳ ನೂರಾರು ಜನ ಪಾರ್ಥಿವ ಶರೀರ ವೀಕ್ಷಿಸಲು ಆಗಮಿಸಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.