ಸಂಸ್ಕಾರಯುತ ಸಮಾಜ ನಿರ್ಮಾಣಕ್ಕೆ ಶಿಕ್ಷಕರ ಪಾತ್ರ ಪ್ರಮುಖ
ಸಾಗರ: ಸುಭದ್ರ ಭಾರತ ಕಟ್ಟುವ ನಿಟ್ಟಿನಲ್ಲಿ ಮಹಿಳೆಯರು, ಹಿಂದುಳಿದವರು, ದಲಿತರು ಸಮಾಜದ ಮುಖ್ಯವಾಹಿನಿಗೆ ತರುವತ್ತ ನಮ್ಮೆಲ್ಲರ ಪ್ರಯತ್ನ ಅಗತ್ಯ ಎಂದು ಉಪವಿಭಾಗಾಧಿಕಾರಿ ಡಾ. ಉದಯಕುಮಾರ್ ಶೆಟ್ಟಿ ಹೇಳಿದರು.
ಇಲ್ಲಿನ ನೆಹರೂ ಮೈದಾನದಲ್ಲಿ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಭಾನುವಾರ ಹಮ್ಮಿಕೊಂಡಿದ್ದ 65ನೇ ಗಣರಾಜ್ಯೋತ್ಸವದ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು.
ನಾವು ಅನೇಕ ಸವಾಲುಗಳನ್ನು ಸಮರ್ಥವಾಗಿ ನಿಭಾಯಿಸಿದ್ದೇವೆ. ಆಹಾರ ಸ್ವಾವಲಂಬನೆ, ಬಡತನ ನಿವಾರಣೆ, ಜನಜೀವನ ಮಟ್ಟ ಸುಧಾರಣೆ, ಭಾತೃತ್ವ ಪ್ರತಿಷ್ಠಾಪನೆ ಜತೆಗೆ ಬಾಹ್ಯ ಶಕ್ತಿಗಳನ್ನು ಸಹ ಎದುರಿಸುವ ಶಕ್ತಿ ನಮ್ಮ ದೇಶಕ್ಕೆ ಇದೆ. ನಮ್ಮೆಲ್ಲರ ನಾಳೆಗಾಗಿ ಗಡಿಯಲ್ಲಿ ಹಗಲಿರುಳು ದೇಶ ಸಂರಕ್ಷಣೆ ಮಾಡುವ ನಮ್ಮ ಯೋಧರು, ಸ್ವಸ್ಥ ಸಮಾಜ ನಿರ್ಮಾಣದಲ್ಲಿ ಪ್ರಮುಖ ಪಾತ್ರ ವಹಿಸುವ ಆರಕ್ಷಕರು, ಅಕ್ಷರಧಾರೆ ಎರೆದು ಸಂಸ್ಕಾರಯುತ ಸಮಾಜ ನಿರ್ಮಿಸುವ ಶಿಕ್ಷಕರು ಎಲ್ಲರೂ ನಮಗೆ ಮಾರ್ಗದರ್ಶಕರಾಗಿದ್ದಾರೆ. ಅವರ ತ್ಯಾಗವನ್ನು ನಾವು ಎಂದಿಗೂ ಮರೆಯಬಾರದು ಎಂದು ಹೇಳಿದರು.
ತಾಪಂ ಅಧ್ಯಕ್ಷ ಹರೀಶ್ ಗಂಟೆ ಮಾತನಾಡಿದರು.
ತಹಸೀಲ್ದಾರ್ ಸಾಜಿದ್ ಅಹ್ಮದ್ ಮುಲ್ಲಾ, ಪೌರಾಯುಕ್ತ ಚಂದ್ರಶೇಖರ್, ನಗರ ಠಾಣೆ ಸರ್ಕಲ್ ಇನ್ಸ್‌ಪೆಕ್ಟರ್ ಕೃಷ್ಣಮೂರ್ತಿ, ಗ್ರಾಮಾಂತರ ಠಾಣೆ ಸರ್ಕಲ್ ಇನ್ಸ್‌ಪೆಕ್ಟರ್ ಹೊನ್ನಪ್ಪ ಹಾಜರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

