ಅಧಿಕಾರಿ ಅಮಾನತಿಗೆ ಆಗ್ರಹಿಸಿ ಪ್ರತಿಭಟನೆ
ಕ.ಪ್ರ.ವಾರ್ತೆ, ಶಿವಮೊಗ್ಗ, ಜ.27
ವಿಕಲಚೇತನರ ಬಗ್ಗೆ ಕರ್ನಾಟಕ ರಾಜ್ಯ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ನಿರ್ದೇಶಕ ಜಯವಿಭವ ಸ್ವಾಮಿ ಅವರು ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ. ಅವರನ್ನು ಕೂಡಲೇ ಅಮಾನತು ಮಾಡಬೇಕೆಂದು ಒತ್ತಾಯಿಸಿ ಕರ್ನಾಟಕ ರಾಜ್ಯ ವಿಕಲಚೇತನರ ಹಾಗೂ ವಿವಿಧೋದ್ದೇಶ ಮತ್ತು ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ ಒಕ್ಕೂಟ ಆಗ್ರಹಿಸಿದೆ.
ನಗರದ ಗಾಂಧಿ ಪಾರ್ಕ್ನಿಂದ ಸೋಮವಾರ ಬೆಳಿಗ್ಗೆ ಜಿಲ್ಲಾಧಿಕಾರಿ ಕಚೇರಿವರೆಗೆ ಪ್ರತಿಭಟನೆ ನಡೆಸಿದ ಒಕ್ಕಟದ ಸದಸ್ಯರು ಜಯವಿಭವ ಸ್ವಾಮಿ ಅವರು ಹಂಪಿ ಉತ್ಸವ ಕಾರ್ಯಕ್ರಮದಲ್ಲಿ ಎಂ.ಆರ್.ಡಬ್ಲೂ ಮತ್ತು ವಿ.ಆರ್.ಡಬ್ಲೂ ಕಾರ್ಯಕರ್ತರನ್ನು ವಜಾಗೊಳಿಸುವುದಾಗಿ ಹೇಳಿರುವುದು ಖಂಡನಾರ್ಹ ಎಂದರು.
ಪ್ರತ್ಯೇಕ ಸಚಿವಾಲಯ ರಚಿಸಿ: ಕಾರ್ಯಕರ್ತರಿಗೆ ನೀಡುತ್ತಿರುವ ಮಾಸಿಕ ಗೌರವಧನದಿಂದ ಜೀವನ ನಡೆಸುವುದು ದುಸ್ತರವಾಗಿದೆ. ಸರ್ಕಾರ ಕನಿಷ್ಠ ವೇತನ ಜಾರಿಗೊಳಿಸಬೇಕು. ಎಂ.ಆರ್.ಡಬ್ಲೂ. ಮತ್ತು ವಿ.ಆರ್.ಡಬ್ಲೂ. ಕಾರ್ಯಕರ್ತರನ್ನು ಕಾಯಂಗೊಳಿಸಬೇಕು. ಮಹಿಳಾ ಕಾರ್ಯಕರ್ತರಿಗೆ ಹೆರಿಗೆ ಸಂದರ್ಭ ಗೌರವಧನ ಸಹಿತ ರಜೆ ನೀಡಬೇಕು. ಗ್ರಾಮೀಣ ವಿಕಲಚೇತನರ ಪುನರ್ವಸತಿ ಯೋಜನೆಯನ್ನು ನಗರ ಮತ್ತು ಪಟ್ಟಣ ಪಂಚಾಯ್ತಿಗಳಿಗೆ ವಿಸ್ತರಿಸಬೇಕು. ಜಿಲ್ಲಾಮಟ್ಟದಲ್ಲಿ ಶೇ.3ರ ಅನುದಾನ ಬಳಕೆಗೆ ವಿಕಲಚೇತನ ಅಭಿವೃದ್ಧಿ ನಿಗಮ ಸ್ಥಾಪಿಸಬೇಕು. ವಿಕಲಚೇತನ ಅಭಿವೃದ್ಧಿಗಾಗಿ ಪ್ರತ್ಯೇಕ ಸಚಿವಾಲಯ ರಚಿಸಬೇಕು ಎಂದು ಒತ್ತಾಯಿಸಿದರು.
ಗೌರವಧನ ಹೆಚ್ಚಸಿ: ಎನ್ಪಿಆರ್ಪಿಡಿ ಯೋಜನೆಯಡಿ ರಾಜ್ಯಮಟ್ಟದಲ್ಲಿ ಕಾರ್ಯರೂಪಕ್ಕೆ ಬಂದಿರುವ ವಿಕಲಚೇತನರ ಪುನರ್ವಸತಿ ಕಾರ್ಯಕರ್ತರನ್ನು ರಾಜ್ಯ ವಲಯದ ಯೋಜನೆ ಅಡಿ 5,652 ಗ್ರಾಮ ಪಂಚಾಯ್ತಿಗಳಲ್ಲಿ ನೇಮಕ ಮಾಡಲಾಗಿದೆ.
ಒಟ್ಟು 5,828 ವಿಕಲಚೇತನ ಕಾರ್ಯಕರ್ತರನ್ನು ನೇಮಕ ಮಾಡಿ, ವಿಕಲಚೇತನರ ಪುನರ್ವಸತಿ ಕಾರ್ಯಕರ್ತರಿಗೆ ಮಾಸಿಕ 3,600 ಹಾಗೂ ವಿವಿಧೋದ್ದೇಶ ಪುನರ್ವಸತಿ ಕಾರ್ಯಕರ್ತರಿಗೆ ಮತ್ತು ಗ್ರಾಮೀಣ ಪುನರ್ವಸತಿ ಕಾರ್ಯಕರ್ತರಿಗೆ 1,400 ಗೌರವಧನ ನೀಡಲಾಗುತ್ತಿದೆ. ಇಷ್ಟು ಕಡಿಮೆ ವೇತನದಿಂದ ಜೀವನ ನಡೆಸುವುದು ದುಸ್ತರವಾಗುತ್ತಿದೆ. ಈ ಗೌರವಧನ ಹೆಚ್ಚಿಸಬೇಕು ಎಂದು ಒತ್ತಾಯಿಸಿದರು.
ಪ್ರತಿಭಟನೆಯಲ್ಲಿ ಒಕ್ಕೂಟದ ಬಿ.ಎಂ. ರಮೇಶ್, ಪಿ.ಎಂ. ಪ್ರಕಾಶ್, ಅಂಬಿಕಾ, ಏಕೇಶಪ್ಪ, ಎಸ್. ಉಷಾಬಾಯಿ, ಗಾಯತ್ರಿ, ಷಣ್ಮುಖ, ದೇವರಾಜ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

