ಡಬ್ಬಿಂಗ್ ವಿರೋಧಿಸಿ ಪ್ರತಿಭಟನೆ
ಶಿವಮೊಗ್ಗ: ಡಬ್ಬಿಂಗ್ ವಿರೋಧಿಸಿ ನವಕರ್ನಾಟಕ ನಿರ್ಮಾಣ ವೇದಿಕೆ ಕಾರ್ಯಕರ್ತರು ಸೋಮವಾರ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
ಡಬ್ಬಿಂಗ್ ಸಂಸ್ಕೃತಿ ಶುರುವಾದರೆ ಕನ್ನಡ ಭಾಷೆ, ಸಂಸ್ಕೃತಿಗೆ ಧಕ್ಕೆಯಾಗಲಿದೆ. ಆದರೆ ಕೆಲವು ಧನದಾಹಿ ನಿರ್ಮಾಪಕರು ಪರಭಾಷಾ ಚಿತ್ರಗಳ ಡಬ್ಬಿಂಗ್ ಮಾಡುವುದಕ್ಕೆ ಬೆಂಬಲಿಸುತ್ತಿದ್ದಾರೆ. ಇದು ಸರಿ ಅಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಪ್ರತಿಭೆಗೆ ಅವಕಾಶವಿಲ್ಲ: ಡಬ್ಬಿಂಗ್ಗೆ ಅವಕಾಶ ನೀಡಿದರೆ ಸ್ಥಳೀಯ ಕಲಾವಿದರಿಗೆ, ಸ್ಥಳೀಯ ಸಂಸ್ಕೃತಿ ಆಧರಿಸಿ ಚಿತ್ರ ನಿರ್ಮಿಸುವ ನಿರ್ಮಾಪಕರಿಗೆ ಅವಕಾಶ ಕಡಿಮೆಯಾಗಲಿದೆ. ಹೊಸ ಪ್ರತಿಭೆಗಳಿಗೆ ಮತ್ತು ಕಲಾವಿದರಿಗೆ ಅವಕಾಶ ಸಿಗುವುದಿಲ್ಲ. ಈಗಾಗಲೇ ಸಂಕಷ್ಟದಲ್ಲಿರುವ ಕನ್ನಡ ಚಿತ್ರರಂಗ ಅವನತಿಯ ಹಾದಿ ಹಿಡಿಯಲಿದೆ. ಆದ್ದರಿಂದ ರಾಜ್ಯ ಸರ್ಕಾರವು ಯಾವ ಕಾರಣಕ್ಕೂ ಪರಭಾಷಾ ಚಿತ್ರಗಳ ಡಬ್ಬಿಂಗ್ಗೆ ಅವಕಾಶ ನೀಡಬಾರದು ಎಂದರು.
ಡಬ್ಬಿಂಗ್ ಬೆಂಬಲಿಸುವುದು ಕನ್ನಡಕ್ಕೆ ಮಾಡುವ ದ್ರೋಹ ಎಂದ ಅವರು, ಹಾಲಿ ರಾಜ್ಯದಲ್ಲಿ ನಿಯಮ ಉಲ್ಲಂಘಿಸಿ ಪರಭಾಷಾ ಚಿತ್ರಗಳ ಪ್ರದರ್ಶನ ಮಾಡಲಾಗುತ್ತಿದೆ. ಇದಕ್ಕೂ ಕಡಿವಾಣ ಹಾಕಬೇಕು ಎಂದು ಒತ್ತಾಯಿಸಿದರು.
ಹೋರಾಟದ ಎಚ್ಚರಿಕೆ: ಸರ್ಕಾರ ಕೂಡಲೇ ಮುಂದಾಗಿ ಕನ್ನಡಿಗರ ಹಿತಾಸಕ್ತಿ ರಕ್ಷಣೆಗೆ ಮುಂದಾಗಬೇಕು. ಇಲ್ಲದಿದ್ದರೆ ವೇದಿಕೆ ವತಿಯಿಂದ ಉಗ್ರ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಸಿದ್ದಾರೆ.
ಪ್ರತಿಭಟನೆಯಲ್ಲಿ ವೇದಿಕೆಯ ರಾಜ್ಯಾಧ್ಯಕ್ಷ ಗೋ. ರಮೇಶ್ ಗೌಡ, ನಗರಾಧ್ಯಕ್ಷ ಮಂಜುನಾಥ್, ನರಸಿಂಹ, ರಘುನಾಥ್, ರಾಜು ನಾಯ್ಕ, ಮಧು, ರಘು ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

