ಶಿವಮೊಗ್ಗ

ಅರಣ್ಯವಾಸಿಗಳ ಸಮಸ್ಯೆ ಬಗೆಹರಿಸಲು ಎಂಥ ತ್ಯಾಗಕ್ಕೂ ಸಿದ್ಧ

Published On :

ಹೊಸನಗರ:  ರೈತರ ಬಗರ್‌ಹುಕುಂ, ಅರಣ್ಯ ಒತ್ತುವರಿ, ಅರಣ್ಯವಾಸಿಗಳ ಸಮಸ್ಯೆಗಳಿಗೆ ಇತಿಶ್ರೀ ಹಾಡಲು ನಾನು ಯಾವುದೇ ತ್ಯಾಗಕ್ಕೂ ಸಿದ್ಧ. ರೈತರ ಪರವಾಗಿ ಸಾಯುವವರೆಗೂ ಹೋರಾಡುತ್ತೇನೆ. ರೈತರ ಈ ಎಲ್ಲಾ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕೈಗೊಳ್ಳುವವರೆಗೂ ನನಗೆ ಸಾವಿಲ್ಲ. ಸಾಯೋದು ಇಲ್ಲ...
ಹೀಗೆಂದು ನುಡಿದವರು ರಾಜ್ಯ ವಿಧಾನಸಭಾ ಸ್ಪೀಕರ್ ಕಾಗೋಡು ತಿಮ್ಮಪ್ಪ.
ನಿಮ್ಮ ಈ ಅವಧಿಯಲ್ಲಾದರೂ ಅರಣ್ಯ ಸಮಸ್ಯೆಗಳಿಗೆ ಪರಿಹಾರ ಕಂಡುಹಿಡಿಯುವ ಸಂಕಲ್ಪ ಮಾಡಿದ್ದೀರಾ ಎಂಬ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ್ದು ಹೀಗೆ.
ಅರಣ್ಯವಾಸಿ, ಬಗರ್ಹುಕ್ಕುಂ, ಒತ್ತುವರಿ ರೈತರ ಸಮಸ್ಯೆಗಳನ್ನು ಕಣ್ಣಾರೆಕಂಡಿದ್ದೇನೆ. ಅದೇ ಪರಿಸರದಲ್ಲಿ ಹುಟ್ಟಿ ಬೆಳೆದ ನನಗೆ ಅದರ ಸಾದಕ ಭಾದಕಗಳ ಅರಿವಿದೆ. ಶಾಶ್ವತ ಪರಿಹಾರ ಕೈಗೊಳ್ಳಲು ಶ್ರಮಿಸುತ್ತೇನೆ ಎಂದು ಭರವಸೆ ನೀಡಿದರು.
ಅರಣ್ಯ ಒತ್ತುವರಿ ವಿಚಾರದಲ್ಲಿ ಬೇಕಾಬಿಟ್ಟಿಯಾಗಿ ಕ್ರಮ ಕೈಗೊಂಡ ಅರಣ್ಯ ಇಲಾಖೆ, ರೈತರನ್ನು ಶಾಶ್ವತವಾಗಿ ಆತಂಕದಲ್ಲಿಡುವ ಕೆಲಸ ಮಾಡುತ್ತಿದೆ.  ಅರಣ್ಯ ಒತ್ತುವರಿ ಆರೋಪದಲ್ಲಿ ಇಲಾಖೆಯು ರೈತರಿಗೆ ನೀಡಿದ್ದ ತೆರವು ನೋಟಿಸ್ ನೀಡುತ್ತಿದೆ. ನೋಟಿಸ್ ಅನ್ನು ಈ ಕೂಡಲೇ ವಾಪಸ್ ಪಡೆಯಬೇಕು ಎಂದು ವಿಧಾನ ಸಭಾಧ್ಯಕ್ಷ ಕಾಗೋಡು ತಿಮ್ಮಪ್ಪ ಎಚ್ಚರಿಸಿದರು.
ತಾಲೂಕಿನ ಮಂಜಗಳಲೆ ಸಮೀಪದ ಕುಂಬಳೆ ಶಾಲೆಯ ಸುವರ್ಣ ಮಹೋತ್ಸವ ನಂತರ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.