ಶಿವಮೊಗ್ಗ

'ಆಮಿಷಕ್ಕೆ ಬಲಿಯಾಗದೇ ಮತದಾನ ಮಾಡಿ'

Published On :

ಸೊರಬ: ಆಸೆ, ಆಮಿಷಗಳಿಗೆ ಬಲಿಯಾಗದೇ ತಪ್ಪದೇ ಮತದಾನ ಮಾಡುವ ಮೂಲಕ ಅರ್ಹರನ್ನು ಆರಿಸಬೇಕು ಎಂದು ಇಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಚಾರ್ಯ ಪ್ರೊ. ಎಂ. ಕೃಷ್ಣಪ್ಪ. ಕರೆ ನೀಡಿದರು.
ಭಾರತ ಚುನಾವಣಾ ಆಯೋಗ, ಜಿಲ್ಲಾಡಳಿತ ಶಿವಮೊಗ್ಗ, ತಾಲೂಕು ಆಡಳಿತ ಸೊರಬ ಇವರ ಆಶ್ರಯದಲ್ಲಿ ಪಟ್ಟಣದ ಗುರುಭವನದಲ್ಲಿ ಶನಿವಾರ ಹಮ್ಮಿಕೊಂಡಿದ್ದ ರಾಷ್ಟ್ರೀಯ ಮತದಾರರ ದಿನಾಚರಣೆಯನ್ನು ಉದ್ಘಾಟಿಸಿ ಮಾತನಾಡಿದರು.
ಯುವಕ ಮತ್ತು ಜನಸಾಮಾನ್ಯರು ನಿರ್ಭೀತಿಯಿಂದ ಮತ ಚಲಾಯಿಸುವುದರ ಜೊತೆಗೆ ಮತದಾನದ ಮಹತ್ವದ ಅರಿವು ಮೂಡಿಸುವ ಜವಾಬ್ದಾರಿ ವಿದ್ಯಾವಂತರ ಮೇಲಿದೆ ಎಂದರು.
ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಂಬಿಕೆ ಇರುವಂತ ಪ್ರತಿಯೊಬ್ಬ ನಾಗರಿಕರೂ ಮತದಾರರ ಪಟ್ಟಿಯಲ್ಲಿ ಸೇರುವ ಮೂಲಕ ಅರ್ಹ ಜನಪ್ರತಿನಿಧಿಗಳನ್ನು ಆಯ್ಕೆ ಮಾಡಲು ಸಹಕಾರಿಯಾಗುತ್ತದೆ ಎಂದು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ತಹಸೀಲ್ದಾರ್ ಪಿ.ಜಿ. ನಟರಾಜ್ ಹೇಳಿದರು.
ಮತದಾನ ಪವಿತ್ರ ಕರ್ತವ್ಯ. 18 ವರ್ಷ ಮೀರಿದ ಯುವ ಸಮೂಹ ತಮಗಿರುವ ಹಕ್ಕನ್ನು ಚಲಾವಣೆ ಮಾಡಿ, ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಬಲಪಡಿಸಬೇಕು ಎಂದು ಕರೆ ನೀಡಿದ ಅವರು, ಪ್ರತಿ ಚುನಾವಣೆಯಲ್ಲೂ ಶೇ. 100 ಮತದಾನವಾಗಬೇಕೆಂದು ಸಿದ್ಧತೆ ನಡೆಸಿಯೂ ಶೇ.60 ಅಥವಾ 70 ಮತದಾನವಾಗುತ್ತಿರುವುದು ಖೇದಕರ ಸಂಗತಿ, ಇದಕ್ಕೆ ತಮ್ಮಲ್ಲಿರುವ ಅಸಡ್ಡೆ, ಅಲಸ್ಯವೇ ಕಾರಣ ಎಂದರು.
ಕ್ಷೇತ್ರ ಶಿಕ್ಷಣಾಧಿಕಾರಿ ಎಂ. ನಾಗರಾಜ್ ಮಾತನಾಡಿ, ವಿದ್ಯಾವಂತ, ಬುದ್ಧಿವಂತ, ಸಮಾಜ ಸೇವಕರನ್ನು ಜನಪ್ರತಿನಧಿಯಾಗಿ ಆಯ್ಕೆ ಮಾಡಿದಾಗ ಮಾತ್ರ ದೇಶದ ಹಿತ ಕಾಯಲು ಸಾಧ್ಯ ಎಂದರು.
ಈ ಸಂದರ್ಭದಲ್ಲಿ ಮತದಾರರಿಗೆ ಪ್ರತಿಜ್ಞಾ ವಿಧಿ ಭೋದಿಸಿ, ಸಾಂಕೇತಿಕವಾಗಿ ಮತದಾರರ ಗುರುತಿನ ಚೀಟಿ ವಿತರಿಸಲಾಯಿತು.
ತಾ.ಪಂ.ಕಾರ್ಯನಿರ್ವಾಹಕ ಅಧಿಕಾರಿ ಮೊಹಮ್ಮದ್ ಇಸ್ಮಾಯಿಲ್, ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಎಂ.ಡಿ. ಸುರೇಶ್ ಹಾಗೂ ವಿವಿಧ ಇಲಾಖಾ ಅಧಿಕಾರಿಗಳು ಹಾಜರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.