ಶಿವಮೊಗ್ಗ

'ನಿರಂತರ ಶ್ರಮದಿಂದ ಗುರಿ ಮುಟ್ಟಲು ಸಾಧ್ಯ'

Published On :

ಸಾಗರ: ಯುವಜನರು ಬದುಕಿನಲ್ಲಿ ನಿಗಧಿತ ಗುರಿ ಹೊಂದಿರುವ ಜೊತೆಗೆ ಆ ಗುರಿಯನ್ನು ತಲುಪಲು ನಿರಂತರ ಪ್ರಯತ್ನ ನಡೆಸುತ್ತಿರಬೇಕು ಎಂದು ಇಂದಿರಾಗಾಂಧಿ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ಪ್ರಾಚಾರ್ಯ ಡಾ. ಅಶೋಕ ಡಿ. ರೇವಣಕರ್ ಹೇಳಿದರು.
ಇಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಬುಧವಾರ ಏರ್ಪಡಿಸಿದ್ದ ಸ್ವಾಮಿ ವಿವೇಕಾನಂದರ 150ನೇ ಜನ್ಮ ದಿನಾಚರಣೆ ಹಾಗೂ ರಾಷ್ಟ್ರೀಯ ಯುವ ಸಪ್ತಾಹ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ನಾಲ್ಕು ಗೋಡೆಗಳ ನಡುವೆ ಪಡೆಯುವ ಶಿಕ್ಷಣ ವಿದ್ಯಾರ್ಥಿಗಳಿಗೆ ಪರಿಪೂರ್ಣ ವ್ಯಕ್ತಿತ್ವ ಕಲ್ಪಿಸಲಾರದು. ನಮ್ಮ ಶಿಕ್ಷಣ ಅಂಕಗಳಿಕೆ, ಉದ್ಯೋಗ ಬೇಟೆ, ಐಷಾರಾಮಿ ಜೀವನದ ಕನಸು ನನಸಾಗಿಸುವುದಷ್ಟಕ್ಕೆ ಸೀಮಿತವಾಗಬಾರದು. ನಮ್ಮ ಆಲೋಚನಾ ಶಕ್ತಿ ವಿಸ್ತರಿಸಬೇಕು. ವಿವೇಕಾನಂದರು ಶಿಕ್ಷಣ ಹಾಗೂ ಮಹಿಳಾ ಶಿಕ್ಷಣದ ಬಗ್ಗೆ ವಿಶೇಷವಾದ ಒತ್ತು ನೀಡಿದ್ದರು. ಅದನ್ನು ಅನುಷ್ಠಾನಕ್ಕೆ ತರುವ ನಿಟ್ಟಿನಲ್ಲಿ ತಮ್ಮ ರಾಮಕೃಷ್ಣ ಮಿಷನ್ ಮೂಲಕವೂ ಪ್ರಯತ್ನ ಪಟ್ಟಿದ್ದರು ಎಂದು ಹೇಳಿದರು.  
ಸರ್ಕಾರಿ ಪದವಿಪೂರರ್ವಕಾಲೇಜಿನ ಉಪನ್ಯಾಸಕ ಡಾ.ಸರ್ಫ್ರಾಜ್ ಚಂದ್ರಗುತ್ತಿ ಮಾತನಾಡಿ, ಈ ದೇಶದಲ್ಲಿ ಮ್ಲೇಚ ಎಂಬ ಶಬ್ದ ಬಳಕೆಗೆ ಬಂದಾಗಿನಿಂದ ದೇಶವು ಅವನತಿಯತ್ತ ಜಾರಲು ಪ್ರಾರಂಭವಾಯಿತು. ಚರ್ಚ್, ಮಸೀದಿ, ಮಂದಿರಗಳಲ್ಲಿ ಹುಟ್ಟುವುದು ತಪ್ಪಲ್ಲ. ಅಲ್ಲಿಯೆ ಸಾಯುವುದು ತಪ್ಪು ಎಂದು ವಿವೇಕಾನಂದರು ಪ್ರತಿಪಾದಿಸಿದ್ದರು. ವಿವೇಕಾನಂದರ ಈ ಸಂದೇಶವನ್ನು ಅರ್ಥ ಮಾಡಿಕೊಂಡರೆ, ನಾವು ವಿವೇಕಾನಂದರನ್ನು ಅರ್ಥ ಮಾಡಿಕೊಂಡಂತೆ ಆಗುತ್ತದೆ. ಹಿಂದೂ ಧರ್ಮದ ಶ್ರೇಷ್ಠತೆ ಬಗ್ಗೆ ಮಾತನಾಡುತ್ತಲೆ ಎಲ್ಲಾ ಧರ್ಮಗಳಲ್ಲೂ ಸಮನ್ವಯತೆ ಸಾಧಿಸಲು ಪ್ರಯತ್ನ ಪಟ್ಟವರು ವಿವೇಕಾನಂದರು ಎಂದು ಹೇಳಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.