ಶಿವಮೊಗ್ಗ

ಫೆ.8ಕ್ಕೆ ತಾಲೂಕು ಯುವಜನ ಮೇಳ

Published On :

ಸಾಗರ: ಇಲ್ಲಿನ ಸಹಾಯಕ ಯುವಜನ ಸೇವಾ ಮತ್ತು ಕ್ರೀಡಾಧಿಕಾರಿಗಳ ಕಚೇರಿ, ತಾಲೂಕು ಯುವ ಒಕ್ಕೂಟ ಹಾಗೂ ವರದಾ ಮೂಲದ ಶ್ರೀಕೃಪಾ ಯುವಕ ಮಂಡಳಿ ಆಶ್ರಯದಲ್ಲಿ ಫೆ.8ರಂದು ತಾಲೂಕು ಮಟ್ಟದ ಯುವಜನ ಮೇಳವನ್ನು ವರದಾ ಮೂಲದ ವರದಾಂಬಾ ಸಭಾಭವನದಲ್ಲಿ ಹಮ್ಮಿಕೊಳ್ಳಲಾಗಿದೆ.
ಯುವಜನ ಮೇಳದಲ್ಲಿ ಭಾಗವಹಿಸುವ ತಂಡಗಳು ಫೆ.5ರೊಳಗೆ ತಮ್ಮ ಹೆಸರನ್ನು ಯುವಜನ ಸೇವಾ ಮತ್ತು ಕ್ರೀಡಾಧಿಕಾರಿಗಳು, ಸಾಗರ ಇವರಲ್ಲಿ ನೋಂದಾಯಿಸಿಕೊಳ್ಳಲು ಕೋರಲಾಗಿದೆ. ಸ್ಪರ್ಧೆಯು ಫೆ.8ರಂದು ವರಾಮೂಲದಲ್ಲಿ ಬೆಳಗ್ಗೆ 9ಗಂಟೆಗೆ ನಡೆಯುತ್ತದೆ.
ಆಸಕ್ತ ಸ್ಪರ್ಧಿಗಳು ಭಾವಗೀತೆ, ಗೀಗಿಪದ, ಭಜನೆ, ಜನಪದ ನೃತ್ಯ, ಏಕಪಾತ್ರಾಭಿನಯ, ಲಾವಣಿ, ಜಾನಪದ ಗೀತೆ, ಕೋಲಾಟ, ರಂಗಗೀತೆ, ಡೊಳ್ಳು ಕುಣಿತ, ಯುವಕರಿಗೆ ವೀರಗಾಸೆ, ಬಯಲಾಟ, ಸಣ್ಣಾಟ, ದೊಡ್ಡಾಟ, ಯಕ್ಷಗಾನ, ಚರ್ಮವಾದ್ಯ, ಯುವತಿಯರಿಗೆ ಬೀಸುವ ಕಲ್ಲಿನ ಪದ, ಸೋಬಾನೆ ಪದ ನಡೆಯಲಿದೆ ಎಂದು ಸಹಾಯಕ ಯುವಜನ ಸೇವಾ ಮತ್ತು ಕ್ರೀಡಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಡೇಟಾ ಸೆಂಟರ್ ಉದ್ಘಾಟನೆ
ಶಿವಮೊಗ್ಗ: ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್‌ನಲ್ಲಿ ಕೋರ್ ಬ್ಯಾಂಕಿನ ವ್ಯವಸ್ಥೆ ಅಳವಡಿಸುತ್ತಿರುವ ಹಿನ್ನೆಲೆಯಲ್ಲಿ ಆರಂಭಿಸಲಾಗಿರುವ ಡೇಟಾ ಸೆಂಟರನ್ನು ನಬಾರ್ಡ್ ಪ್ರಧಾನ ವ್ಯವಸ್ಥಾಪಕ ಜಿ.ಆರ್. ಚಿಂತಾಲ ಬುಧವಾರ ಉದ್ಘಾಟಿಸಿದರು.
ಕೋರ್ ಬ್ಯಾಂಕಿಂಗ್ ಆರಂಭಿಸುವ ಮೂಲಕ ಡಿಸಿಸಿ ಬ್ಯಾಂಕ್ ಕೂಡ ವಾಣಿಜ್ಯ ಬ್ಯಾಂಕ್‌ಗಳಂತೆಯೇ ಕಾರ್ಯನಿರ್ವಹಿಸುತ್ತವೆ. ಇದೊಂದು ಉತ್ತಮ ಬೆಳವಣಿಗೆ ಎಂದರು. ವಾಣಿಜ್ಯ ಬ್ಯಾಂಕುಗಳು ಕೃಷಿ ಸಾಲಕ್ಕೆ ಹೆಚ್ಚಿನ ಆದ್ಯತೆ ನೀಡುತ್ತಿದ್ದು, ಇದಕ್ಕೆ ಬ್ಯಾಂಕುಗಳು ಅಳವಡಿಸಿಕೊಂಡಿರುವ ತಂತ್ರಜ್ಞಾನ ಕೂಡ ಕಾರಣ ಎಂದು ಹೇಳಿದರು.
ಡಿಸಿಸಿ ಬ್ಯಾಂಕ್ ಅಧ್ಯಕ್ಷ ಆರ್.ಎಂ.ಮಂಜುನಾಥ ಗೌಡ ಮಾತನಾಡಿ, ಫೆ.28ರೊಳಗೆ ಕೋರ್ ಬ್ಯಾಂಕಿಂಗ್ ವ್ಯವಸ್ಥೆ ಜಾರಿಯಾಗುತ್ತಿದೆ ಎಂದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.