ಶಿವಮೊಗ್ಗ

ವಲ್ಲಭಭಾಯ್ ಪಟೇಲ್‌ರನ್ನು ಮರೆತ ಕಾಂಗ್ರೆಸ್: ಭಾನುಪ್ರಕಾಶ್

Published On :

ಶಿವಮೊಗ್ಗ: ಕಾಂಗ್ರೆಸ್ಸಿಗರು ಪ್ರತಿ ಯೋಜನೆಗೆ ಇಂದಿರಾಗಾಂಧಿ, ರಾಜೀವ್ ಗಾಂಧಿ ಹೆಸರನ್ನು ಇಡುತ್ತಾ ಬರುತ್ತಿದ್ದಾರೆ. ಆದರೆ, ಸ್ವಾತಂತ್ರ್ಯಕ್ಕಾಗಿ ಹಾಗೂ ಆ ನಂತರದಲ್ಲಿಯೂ ರಾಷ್ಟ್ರಕ್ಕಾಗಿ ಸಾಕಷ್ಟು ಸೇವೆ ಮಾಡಿರುವ ಉಕ್ಕಿನ ಮನುಷ್ಯ ವಲ್ಲಭಭಾಯ್ ಪಟೇಲ್ ಅವರ ಹೆಸರನ್ನು ಸ್ಮರಿಸುತ್ತಿಲ್ಲ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಹಾಗೂ ವಿಧಾನಪರಿಷತ್ ಸದಸ್ಯ ಎಂ.ಬಿ. ಭಾನುಪ್ರಕಾಶ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಬಿಜೆಪಿ ವತಿಯಿಂದ ಶಿವಪ್ಪ ನಾಯಕ ಪ್ರತಿಮೆ ಬಳಿ ಶುಕ್ರವಾರ ಸಂಜೆ ಆಯೋಜಿಸಿದ್ದ ವಲ್ಲಭಭಾಯ್ ಪಟೇಲ್ ಪ್ರತಿಮೆ ನಿರ್ಮಾಣಕ್ಕೆ ಲೋಹ ಸಂಗ್ರಹ ಅಭಿಯಾನ ಕಾರ್ಯಕ್ರಮದಲ್ಲಿ ಮಾತನಾಡಿದರು.
ದೇಶದಲ್ಲಿ ಕಾಂಗ್ರೆಸ್ ಆಳ್ವಿಕೆಯಲ್ಲಿ ಎಲ್ಲ ಯೋಜನೆಗಳಿಗೆ ಇಂದಿರಾಗಾಂಧಿ, ರಾಜೀವ್‌ಗಾಂಧಿ ಹೆಸರನ್ನು ಇಡಲಾಗುತ್ತಿದೆ. ಈಗ ಹೆಚ್ಚು ಭ್ರಷ್ಟಾಚಾರದಲ್ಲಿ ಹೆಸರು ಕೇಳಿ ಬರುತ್ತಿರುವುದರಿಂದ ಕಾರಾಗೃಹಕ್ಕೂ ರಾಜೀವ್ ಗಾಂಧಿ ಕಾರಾಗೃಹ ಎಂದು ಹೆಸರಿಟ್ಟರೆ ಆಶ್ಚರ್ಯವೇನಿಲ್ಲ ಲೇವಡಿ ಮಾಡಿದರು. ದೇಶದಲ್ಲಿ ಸ್ವಾತಂತ್ರ್ಯಕ್ಕಾಗಿ ನೆಹರೂ ಮನೆತನದವರು ಮಾತ್ರ ಹೋರಾಟ ಮಾಡಿದವರು ಎಂದು ಬಿಂಬಿಸಲಾಗುತ್ತಿದೆ. ಹೋರಾಟ ನಡೆಸಿದ ಅನೇಕರನ್ನು ಮರೆಯುವಂತೆ ಮಾಡಿದ್ದಾರೆ. ವಲ್ಲಭಭಾಯ್ ಪಟೇಲ್ ಅವರ ಹೆಸರನ್ನು ಕಡೆಗಣಿಸಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಚನ್ನಬಸಪ್ಪ, ಎಂ.ಶಂಕರ್, ಮೋಹನ ರೆಡ್ಡಿ, ರತ್ನಾಕರ ಶೆಣೈ, ನಗರಸಭಾ ಸದಸ್ಯರು ಹಾಜರಿದ್ದರು.


Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.