ಶಿವಮೊಗ್ಗ

ಕೇಂದ್ರ ಸರ್ಕಾರ ಎಂಎನ್‌ಸಿ ಏಜೆಂಟ್: ಜೆಡಿಎಸ್ ಆರೋಪ

Published On :

ಶಿವಮೊಗ್ಗ:  'ಅಚ್ಚೆ ದಿನ್ ಆನೇ ವಾಲೆ ಹೈ' ಎಂದು ಸುಳ್ಳು ಆಶ್ವಾಸನೆ ನೀಡುತ್ತಾ ಅಧಿಕಾರಕ್ಕೆ ಬಂದ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ಪೆಟ್ರೋಲ್ ಹಾಗೂ ಡೀಸಲ್ ದರ ಹೆಚ್ಚಳ ಮಾಡಿ ಜನಜೀವನ ದುಸ್ತರ ಮಾಡಿದೆ ಎಂದು ಆರೋಪಿಸಿರುವ ಜೆಡಿಎಸ್ ಕಾರ್ಯಕರ್ತರು ನಗರದಲ್ಲಿ ಮಂಗಳವಾರ ಪಕ್ಷದ ಜಿಲ್ಲಾ ಕಚೇರಿಯಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಸೈಕಲ್ ಜಾಥಾ ನಡೆಸಿ ಪ್ರತಿಭಟನೆ ನಡೆಸಿದರು.
ಕೇಂದ್ರ ಸರ್ಕಾರ ಬಹುರಾಷ್ಟ್ರೀಯ ಕಂಪನಿಗಳ ಏಜೆಂಟರಂತೆ ವರ್ತಿಸುತ್ತಿರುವುದೇ ಬೆಲೆ ಏರಿಕೆಗೆ ಕಾರಣ. ಚುನಾವಣೆ ಸಂದರ್ಭದಲ್ಲಿ ನೀಡಿದ ಆಶ್ವಾಸನೆಗಳನ್ನು ಈಡೇರಿಸಬೇಕು. ಇಲ್ಲವಾದಲ್ಲಿ ಕೇಂದ್ರ ಸರ್ಕಾರದ ಜನವಿರೋಧಿ ನೀತಿ ವಿರುದ್ಧ ಹೋರಾಟ ಹಮ್ಮಿಕೊಳ್ಳಲಾಗುವುದು ಎಂದು ಎಚ್ಚರಿಸಿದರು.
ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಕೆಲವೇ ದಿನಗಳಲ್ಲಿ ಮತದಾರರಿಗೆ ನೀಡಿದ್ದ ಭರವಸೆ ಹುಸಿಗೊಳಿಸಿ ಏಕಾಏಕಿ ರೈಲು ಪ್ರಯಾಣ ದರ ಹೆಚ್ಚಿಸಿತ್ತು. ಈಗ ಪೆಟ್ರೋಲ್, ಡೀಸೆಲ್, ಗ್ಯಾಸ್ ಸಿಲಿಂಡರ್ ದರ ಹೆಚ್ಚಿಸುವ ಮೂಲಕ ಜನಸಾಮಾನ್ಯರ ಬದುಕನ್ನು ದುಸ್ತರಗೊಳಿಸಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಜಿಲ್ಲಾ ಯುವ ಜೆಡಿಎಸ್ ಅಧ್ಯಕ್ಷ ಜಿ.ಡಿ.ಮಂಜುನಾಥ್, ಪಾಲಿಕೆ ಸದಸ್ಯರಾದ ನಾಗರಾಜ ಕಂಕಾರಿ, ಎಚ್.ಪಾಲಾಕ್ಷಿ, ಮುಖಂಡರಾದ ಶ್ರೀನಿವಾಸ್, ಅಣ್ಣಪ್ಪ ನಾಯ್ಕ, ಕೆ.ಸಿದ್ದಪ್ಪ, ಟೀಕಪ್ಪ, ಅನಿಲ್ ಕುಮಾರ್, ಗುರುಪ್ರಸಾದ್, ಘನಶ್ಯಾಮ್ ಮತ್ತಿತರರು ಪಾಲ್ಗೊಂಡಿದ್ದರು.


Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.