ಸರ್ಕಾರದ ನಿರ್ಲಕ್ಷ; ದುಸ್ಥಿತಿಯಲ್ಲಿ ಉರ್ದು ಶಾಲೆ
ವಿಶೇಷ ವರದಿ
ಸೊರಬ: ಶತಮಾನದ ಹೊಸ್ತಿಲಲ್ಲಿ ಇರುವ ಪಟ್ಟಣದ ಸರ್ಕಾರಿ ಉರ್ದು ಹಿರಿಯ ಪ್ರಾಥಮಿಕ ಶಾಲೆ ಅಧಿಕಾರಿ, ಜನಪ್ರತಿನಿಧಿಗಳ ನಿರ್ಲಕ್ಷ್ಯದಿಂದಾಗಿ ಯಾವುದೇ ಅಭಿವೃದ್ಧಿ ಕಾಣದೇ ದುಸ್ಥಿತಿಯಲ್ಲಿದೆ.
ಪಟ್ಟಣದ ಚಿಕ್ಕಪೇಟೆಯ ಸರ್ಕಾರಿ ಉರ್ದು ಹಿರಿಯ ಪ್ರಾಥಮಿಕ ಶಾಲೆ 1925ನೇ ಇಸವಿಯಲ್ಲಿ ಪ್ರಾರಂಭಗೊಂಡು ತಾಲೂಕಿನಲ್ಲಿಯೇ ಹಳೆಯ ಭಾಷಾ ಅಲ್ಪಸಂಖ್ಯಾತರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಎಂಬ ಹೆಗ್ಗಳಿಕೆ ಪಡೆದಿದೆ. ಮೊದಲು ಮಾರ್ಕೇಟ್ ರಸ್ತೆಯ ಬಾಡಿಗೆ ಕಟ್ಟಡದಲ್ಲಿ ಆರಂಭಗೊಂಡ ಶಾಲೆ ಸುಮಾರು 50 ವರ್ಷದ ನಂತರ ಈಗಿರುವ ಸರ್ಕಾರಿ ಕಟ್ಟಡಕ್ಕೆ ಸ್ಥಳಾಂತರಗೊಂಡಿತು. ಒಟ್ಟು 9 ಕೊಠಡಿಗಳಿರುವ ಇಲ್ಲಿ 4 ಕೊಠಡಿಗಳು ಸಂಪೂರ್ಣ ಶಿಥಿಲಗೊಂಡಿದೆ. ಉಳಿದ 5 ಕೊಠಡಿಗಳಲ್ಲಿ 2 ತರಗತಿಗಳನ್ನು ಒಟ್ಟಾಗಿಸಿ ಸೇರಿಸಿ ಶಿಕ್ಷಣ ನೀಡಲಾಗುತ್ತಿದೆ. 1 ರಿಂದ 7ನೇ ತರಗತಿಯವರೆಗೆ ಇಲ್ಲಿ ಶಿಕ್ಷಣ ದೊರೆಯುತ್ತದೆ.
ಬಡವರು, ಕೂಲಿ ಕಾರ್ಮಿಕರು, ಮಧ್ಯಮ ವರ್ಗದವರ ಮಕ್ಕಳೇ ಹೆಚ್ಚಿನ ಸಂಖ್ಯೆಯಲ್ಲಿ ಶಿಕ್ಷಣ ಪಡೆಯುತ್ತಿರುವ ಇಲ್ಲಿ ಅವರ ಶಿಕ್ಷಣ ಕಲಿಕೆಗೆ ಹಿನ್ನೆಡೆ ಆಗುತ್ತಿದೆ. ಇದರ ಜೊತೆಗೆ ಶಾಶ್ವತ ಕುಡಿಯುವ ನೀರು ವ್ಯವಸ್ಥೆ ಇಲ್ಲ. ಪಟ್ಟಣ ಪಂಚಾಯಿತಿ ಪೂರೈಸುವ ಫ್ಲೋರೈಡ್ ನೀರನ್ನೇ ಮಕ್ಕಳು ಕುಡಿಯುವಂತಾಗಿದೆ. ಶಾಲಾ ಆಜುಬಾಜು ಸುಮಾರು 5 ಮಾಂಸಹಾರಿ ಹೋಟೆಲ್ಗಳಿವೆ. ಗ್ರಾಹಕರು ಪಾನಮತ್ತರಾಗಿ ಶಾಲಾ ಕಾಂಪೌಂಡ್ ಪಕ್ಕದಲ್ಲಿಯೇ ಮಲ-ಮೂತ್ರ ವಿಸರ್ಜನೆ ಮಾಡುತ್ತಿರುವುದರಿಂದ ವಿದ್ಯಾರ್ಥಿಗಳಿಗೆ ಕಿರಿಕಿರಿಯಾಗಿದೆ. ದುಸ್ಥಿತಿಯಲ್ಲಿ ಇರುವ ಕಟ್ಟಡದಿಂದಾಗಿ ಪೋಷಕರು ತಮ್ಮ ಮಕ್ಕಳನ್ನು ಖಾಸಗಿ ಶಾಲೆಗೆ ಕಳುಹಿಸುವ ವಾತಾವರಣ ನಿರ್ಮಾಣವಾಗಿದೆ. ಈ ಹಿಂದೆ 350ಕ್ಕೂ ಹೆಚ್ಚು ವಿದ್ಯಾರ್ಥಿಗಳಿದ್ದ ಶಾಲೆಯಲ್ಲಿ ಈಗ 125 ಮಕ್ಕಳು ಮಾತ್ರ ಇದ್ದಾರೆ.
ಏಷ್ಯಾ ಖಂಡದಲ್ಲಿಯೇ ಪ್ರಸಿದ್ಧವಾಗಿರುವ ದುಬೈನ ಅವರ್ ಒನ್ ಇಂಗ್ಲಿಷ್ ಸ್ಕೂಲ್ನ ಉಪನ್ಯಾಸಕ ಹಾಗೂ ಮೇಲ್ವಿಚಾರಕ ಸೈಯದ್ ಜಾಕೀರ್ ಉಲ್ಹಕ್, ಕರ್ನಾಟಕ ಉರ್ದು ಅಕಾಡಮಿಯ ಮಾಜಿ ಅಧ್ಯಕ್ಷ ಹಫೀಝ್ ಅಮ್ಜದ್ ಹುಸೇನ್, ಇತ್ತೀಚೆಗೆ ನಿಧನರಾದ ವಿಕ್ಟೋರಿಯಾ ಆಸ್ಪತ್ರೆಯ ಡಾ. ನಸೀರ್ ಅಹ್ಮದ್, ಪಟ್ಟಣದಲ್ಲಿ ಸೇವೆ ಸಲ್ಲಿಸುತ್ತಿರುವ ಡಾ. ಸೈಯದ್ ಹಾಷಂ ಹೀಗೆ ಹಲವು ಪ್ರತಿಭೆಗಳು ಕಲಿತ ಹಿರಿಮೆ ಈ ಶಾಲೆಗೆ ಇದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

