ಯುಜಿಡಿ ಕಾಮಗಾರಿ ಕಳಪೆ ನಾಗರಿಕರಿಂದ ಪ್ರತಿಭಟನೆ
ಶಿವಮೊಗ್ಗ: ಶಾಂತಿ ನಗರದಲ್ಲಿ ನಡೆದಿರುವ ಯುಜಿಡಿ ಕಾಮಗಾರಿ ಕಳಪೆಯಾಗಿದ್ದು ಕೂಡಲೇ ತಪ್ಪಿತಸ್ಥ ಅಧಿಕಾರಿಗಳು, ಗುತ್ತಿಗೆದಾರರ ವಿರುದ್ಧ ಕ್ರಮಕೈಗೊಳ್ಳುವಂತೆ ಒತ್ತಾಯಿಸಿ ನಾಗರಿಕರು ಬುಧವಾರ ಪ್ರತಿಭಟನೆ ನಡೆಸಿದರು.
ಶಾಂತಿ ನಗರ ನಾಗರಿಕ ಹಕ್ಕುಗಳ ವೇದಿಕೆ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದ ನಾಗರಿಕರು ಘೋಷಣೆ ಕೂಗಿ ಅಸಮಾಧಾನ ವ್ಯಕ್ತಪಡಿಸಿದರು. ಈಗಾಗಲೇ ಮಾಡಿರುವ ಯುಜಿಡಿ ಮ್ಯಾನ್ ಹೋಲ್ಗಳು ಮುರಿದು ಬಿದ್ದಿವೆ. ಸರ್ಕಾರದ ಲಕ್ಷಾಂತರ ರುಪಾಯಿ ಹಣ ಪೋಲಾಗಿದೆ ಎಂದು ಸಾರ್ವಜನಿಕರು ಅಸಮಾಧಾನ ವ್ಯಕ್ತಪಡಿಸಿದರು.
ಕೊಳಚೆ ನಿರ್ಮೂಲನಾ ಮಂಡಳಿಯ ಸಹಾಯಕ ಕಾರ್ಯಪಾಲಕ ಅಭಿಯಂತರರು ಹಾಗೂ ಜಲಮಂಡಳಿಯ ಸಹಾಯಕ ಅಧಿಕಾರಿಗಳು ಸ್ಥಳಕ್ಕಾಗಮಿಸಿ ತಕ್ಷಣವೇ ಕಾಮಗಾರಿಯ ದುರಸ್ತಿ ಕಾರ್ಯ ನಡೆಸುವ ಭರವಸೆ ನೀಡಿದ ನಂತರ ಪ್ರತಿಭಟನೆಯನ್ನು ತಾತ್ಕಾಲಿಕವಾಗಿ ಹಿಂತೆಗೆದುಕೊಳ್ಳಲಾಯಿತು.
ವೇದಿಕೆಯ ಸೈಯದ್ ಮಜೀಬುಲ್ಲಾ, ಶಾಂತಮ್ಮ, ರಾಮು, ಇರ್ಫಾನ್, ಜಯಪ್ರಕಾಶ್, ಫೈರೋಜ್, ಸಂದೀಪ್, ಬಾಬು ಮೊದಲಾದವರು ಈ ಸಂದರ್ಭದಲ್ಲಿ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

