ಪಟೇಲರನ್ನು ಕಾಂಗ್ರೆಸ್ ಮರೆತಿದೆ: ವಿಕಾಸ್
ಶಿವಮೊಗ್ಗ: ಭಾರತದ 547 ಸಂಸ್ಥಾನಗಳನ್ನು ಒಕ್ಕೂಟದಲ್ಲಿ ಸೇರಿಸಲು ಶ್ರಮಿಸಿದ ಸರ್ದಾರ್ ವಲ್ಲಭ ಬಾಯಿ ಪಟೇಲರನ್ನು ಕಾಂಗ್ರೆಸ್ ಮರೆತುಬಿಟ್ಟಿದೆ. ಆದರೆ, ಬಿಜೆಪಿ ಮರೆಯುವುದಿಲ್ಲ. ಬೀದರ್ನಲ್ಲಿ ವಲ್ಲಭಬಾಯಿ ಪಟೇಲರ ಪುತ್ಥಳಿ ನಿರ್ಮಿಸುವ ಯೋಜನೆ ಕೈಗೆತ್ತಿಕೊಂಡಿದೆ ಎಂದು ಬಿಜೆಪಿ ಯುವ ಮೋರ್ಚಾ ರಾಷ್ಟ್ರೀಯ ಕಾರ್ಯದರ್ಶಿ ವಿಕಾಸ್ ಪುತ್ತೂರು ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಜಾಕಾರರ ದೌರ್ಜನ್ಯಕ್ಕೆ ಗುರಿಯಾಗಿ ಪ್ರಾಣಾರ್ಪಣೆ ಮಾಡಿದ
ಬೀದರ್ ಜಿಲ್ಲೆಯ ಗೋರಾಟ ಯುವಕರ ಸ್ಮರಣಾರ್ಥ ಹುತಾತ್ಮರ ಸ್ಮಾರಕ ಹಾಗೂ ಈ ಹೋರಾಟಕ್ಕೆ ಗೆಲುವು ತಂದುಕೊಟ್ಟ ಪಟೇಲರ ಪುತ್ಥಳಿಯನ್ನು ಗ್ರಾಮದಲ್ಲಿ ಸ್ಥಾಪಿಸಲಾಗುವುದೆಂದರು.
ಬಸವ ಕಲ್ಯಾಣ ತಾಲೂಕಿನ ಗೋರಾಟ ಗ್ರಾಮದಲ್ಲಿ 1948ರ ಮೇ 9 ಮತ್ತು 10ರಂದು ನಡೆದ ಹತ್ಯಾಕಾಂಡದಲ್ಲಿ 20ಕ್ಕೂ ಹೆಚ್ಚು ಜನರು ಪ್ರಾಣ ಕಳೆದುಕೊಂಡರು. ಇದರ ನೆನಪಿಗಾಗಿ ಗೋರಾಟ ಹುತಾತ್ಮರ ಸ್ಮಾರಕ ನಿರ್ಮಿಸಲಾಗುವುದು ಎಂದು ತಿಳಿಸಿದರು.
ಯುವ ಮೋರ್ಚಾ ಈ ಕಾರ್ಯದಲ್ಲಿ ತೊಡಗಿದ್ದು, ರಾಜ್ಯದ ಪ್ರತಿ ಮತಗಟ್ಟೆ ವ್ಯಾಪ್ತಿಯಿಂದ ಐದು ಯುವಕರನ್ನು ಸಂಪರ್ಕಿಸಿ ಪ್ರತಿಯೊಬ್ಬರಿಂದ ರು. 10 ರುಪಾಯಿ ನಿಧಿ ಸಂಗ್ರಹಿಸಲಾಗುವುದು. ರಾಜ್ಯದಲ್ಲಿ ಒಟ್ಟು 54 ಸಾವಿರ ಬಿಜೆಪಿ ಮತಗಟ್ಟೆಗಳಿದ್ದು, ಅಲ್ಲಿಂದ ಬರುವ ರು. 2.70 ಲಕ್ಷವನ್ನು ಸ್ಮಾರಕ ನಿರ್ಮಾಣಕ್ಕೆ ನೀಡಲಾಗುವುದು ಎಂದು ತಿಳಿಸಿದರು.
ಅರುಣಜೇಟ್ಲಿ ಉತ್ತಮ ಬಜೆಟ್ ನೀಡಿದ್ದಾರೆ. ಇದು ಬಡವರ ಮತ್ತು ಜನಪರ ಬಜೆಟ್ ಎಂದ ಅವರು,
ಹಾಗೆಯೇ ಸದಾನಂದ ಗೌಡರು ಮಂಡಿಸಿದ ರೈಲ್ವೆ ಬಜೆಟ್ ಕೂಡಾ ಇಡೀ ದೇಶದ ಪ್ರಗತಿಯ ದೃಷ್ಟಿಯನ್ನಿಟ್ಟುಕೊಂಡು ಮಂಡಿಸಲಾಗಿದೆ ಎಂದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

