ಶಿವಮೊಗ್ಗ

ಬಾವಿಗೆ ಹಾರಿ ಮಹಿಳೆ ಆತ್ಮಹತ್ಯೆ

Published On :

ಹೊಸನಗರ:  ತಿಂಗಳ ಹಿಂದಷ್ಟೇ ಮದುವೆ ಆಗಿದ್ದ ನವ ವಿವಾಹಿತೆ ಭವಾನಿ (22) ಎಂಬಾಕೆ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ನಗರ ಸಮೀಪದ ತುಮಕೋಡು ಬ್ಯಾಣ ಎಂಬಲ್ಲಿ ನಡೆದಿದೆ. ಶಿರಸಿ ತಾಲೂಕು ಬನವಾಸಿ ಸಮೀಪದ ಮಡುವಳ್ಳಿಯ ಗಣಪತಿ ಆಚಾರ್ ಎಂಬವರ ಪುತ್ರಿಯಾದ ಭವಾನಿ ಅವರನ್ನು ತುಮಕೋಡು ಬ್ಯಾಣದ ವಾಸು ಎಂಬವರೊಂದಿಗೆ ವಿವಾಹ ನೆರವೇರಿಸಲಾಗಿತ್ತು. 3 ದಿನಗಳಿಂದ ಮನೆಯಿಂದ ನಾಪತ್ತೆಯಾಗಿದ್ದ ಅವರನ್ನು ಮನೆಯವರೆಲ್ಲಾ ಹುಡುಕಾಡಿದ್ದರು. ಆದರೆ, ಸುಳಿವು ಮಾತ್ರ ಸಿಕ್ಕಿರಲಿಲ್ಲ. ನಗರ ಠಾಣೆ ಪಿಎಸ್‌ಐ ದೂರು ದಾಖಲಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.