ಸೂಡಾ ನಿವೇಶನ ಹಗರಣ ಸಿಬಿಐ ತನಿಖೆಗೆ ಒತ್ತಾಯಿಸಿ ಪ್ರತಿಭಟನೆ
ಶಿವಮೊಗ್ಗ: ಅಟಲ್ ಬಿಹಾರಿ ವಾಜಪೇಯಿ ಬಡಾವಣೆ ನಿವೇಶನ ಹಗರಣದ ತನಿಖೆಯನ್ನು ಸಿಬಿಐಗೆ ಒಪ್ಪಿಸುವಂತೆ ಒತ್ತಾಯಿಸಿ ಅಣ್ಣಾ ಹಜಾರೆ ಹೋರಾಟ ಸಮಿತಿ ಕಾರ್ಯಕರ್ತರು ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಸೋಮವಾರ ಪ್ರತಿಭಟನೆ ನಡೆಸಿದರು.
ವಾಜಪೇಯಿ ಬಡಾವಣೆ ನಿವೇಶನ ಹಂಚಿಕೆ ಸಂದರ್ಭದಲ್ಲಿ ಸಂಪೂರ್ಣವಾಗಿ ನಿಯಮ ಉಲ್ಲಂಘನೆ ಮಾಡಲಾಗಿದೆ. ಸ್ವಜನ ಪಕ್ಷಪಾತ, ಭಾರಿ ಭ್ರಷ್ಟಾಚಾರ ನಡೆದಿದೆ. ಈ ರೀತಿಯ ಹಗರಣಗಳಲ್ಲಿ ಕಠಿಣ ಕ್ರಮ ಕೈಗೊಳ್ಳದಿದ್ದರೆ ಮುಂದಿನ ದಿನಗಳಲ್ಲಿ ಇನ್ನಷ್ಟು ಭ್ರಷ್ಟಾಚಾರ ಹೆಚ್ಚುತ್ತದೆ ಎಂದು ಪ್ರತಿಭಟನಾಕಾರರು ಆತಂಕ ವ್ಯಕ್ತಪಡಿಸಿದ್ದಾರೆ.
ವಿವೇಚನಾ ಕೋಟಾ ಅಡಿ ನಿವೇಶನ ಹಂಚಿಕೆಗೆ ಅವಕಾಶ ಇಲ್ಲದಿದ್ದರೂ ಹಲವರಿಗೆ ತಮಗಿಚ್ಛೆ ಬಂದಂತೆ ನಿವೇಶನ ಹಂಚಲಾಗಿದೆ. ನಗರಾಭಿವೃದ್ಧಿ ಪ್ರಾಧಿಕಾರದ ಸಿಬ್ಬಂದಿ ಸಹ ನಿವೇಶನ ಪಡೆದಿದ್ದಾರೆ. ಹಾಗಾಗಿ ಅಕ್ರಮ ನಿವೇಶನ ಹಂಚಿಕೆ ರದ್ದು ಮಾಡಬೇಕು. ತಪ್ಪಿತಸ್ಥರನ್ನು ಶಿಕ್ಷೆಗೆ ಗುರಿಪಡಿಸಬೇಕು ಎಂದರು.
ವಾಜಪೇಯಿ ನಿವೇಶನ ಹಗರಣ ಸಂಪೂರ್ಣ ತನಿಖೆ ಆಗುವವರೆಗೂ ಯಾವುದೇ ಗೃಹ ನಿರ್ಮಾಣಕ್ಕೆ ಅವಕಾಶ ನೀಡಬಾರದು. ರದ್ದಾಗುವ ನಿವೇಶನಗಳನ್ನು ಪಾರದರ್ಶಕವಾಗಿ ಜೇಷ್ಠತೆ ಆಧಾರದ ಮೇಲೆ ಹಂಚಿಕೆ ಮಾಡಬೇಕು ಎಂದು ಒತ್ತಾಯಿಸಿದರು.
ಜಿಲ್ಲಾಧಿಕಾರಿ ವಿಪುಲ್ ಬನ್ಸಲ್ ಅವರು ಮನವಿ ಸ್ವೀಕರಿಸಿ ಈ ಬಗ್ಗೆ ತುರ್ತು ಕ್ರಮ ಕೈಗೊಳ್ಳುವ ಭರವಸೆ ನೀಡಿದರು. ಪ್ರತಿಭಟನೆಯಲ್ಲಿ ಅಣ್ಣಾ ಹಜಾರೆ ಹೋರಾಟ ಸಮಿತಿ ಕೆ.ವಿ. ವಸಂತಕುಮಾರ್, ಅಶೋಕ್ ಯಾದವನ್, ಜನಮೇಜಿರಾವ್, ಪ್ರೊ. ಕಲ್ಹನ, ಡಾ. ಎನ್.ಎಲ್. ನಾಯಕ್, ಪರಿಸರ ರಮೇಶ್, ರಾಜು ಮತ್ತಿತರರು ಪಾಲ್ಗೊಂಡಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

