ಕೀಳರಿಮೆ ಗ್ರಾಮೀಣ ವಿದ್ಯಾರ್ಥಿಗಳ ದೊಡ್ಡ ಶತ್ರು:ರಾಘವೇಂದ್ರ
ಸಾಗರ: ಕೀಳರಿಮೆ ಗ್ರಾಮೀಣ ವಿದ್ಯಾರ್ಥಿಗಳ ಅತಿ ದೊಡ್ಡ ಶತೃಎಂದು ಅಮೆರಿಕಾದಲ್ಲಿ ಸಾಫ್ಟ್ವೇರ್ ತಜ್ಞರಾಗಿರುವ ಜಿ.ಎ.ರಾಘವೇಂದ್ರ ಗೀಜಗಾರು ಹೇಳಿದರು.
ತಾಲೂಕಿನ ಎಡಜಿಗಳೇಮನೆಯ ಇಕ್ಕೇರಿ ಪ್ರೌಢಶಾಲೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಇ-ಸ್ಕೂಲ್ ತರಗತಿಗೆ ಕಂಪ್ಯೂಟರ್, ಪ್ರೊಜೆಕ್ಟರ್ಗಳನ್ನು ವಿತರಿಸಿದ ಅವರು ಸಂಸ್ಥೆ ನೀಡಿದ ಸನ್ಮಾನ ಸ್ವೀಕರಿಸಿ ಮಾತನಾಡಿ, ಗ್ರಾಮೀಣ ವಿದ್ಯಾರ್ಥಿಗಳು ಕೀಳರಿಮೆಯಿಂದ ಹೊರ ಬರಬೇಕಾದರೆ ಇಂಗ್ಲಿಷ್ ಮಾತನಾಡುವುದನ್ನು ಕಲಿಯಬೇಕು. ಶಿಕ್ಷಕರು ಮಕ್ಕಳಿಗೆ ಅಗತ್ಯ ಸೌಲಭ್ಯ ಕಲ್ಪಿಸಿ ವಿದ್ಯಾರ್ಥಿಗಳ ತಿಳಿವಳಿಕೆ, ಜ್ಞಾನವನ್ನು ಹೆಚ್ಚಿಸುವ ಕೆಲಸ ಮಾಡಬೇಕು. ಗ್ರಾಮೀಣ ವಿದ್ಯಾರ್ಥಿಗಳಾಗಿದ್ದೂ ಶೇ. 90ರಷ್ಟು ಜನ ಈಗ ಅತ್ಯುನ್ನತ ಸ್ಥಾನ, ಉದ್ಯೋಗಗಳಲ್ಲಿ ಇದ್ದಾರೆ ಎನ್ನುವುದು ಈಗ ಓದುವ ಮಕ್ಕಳಿಗೆ ಸ್ಫೂರ್ತಿಯಾಗಬೇಕು ಎಂದು ತಿಳಿಸಿದರು.
ಇಂದಿನ ಶೈಕ್ಷಣಿಕ ವ್ಯವಸ್ಥೆಯಲ್ಲಿ ವಿದ್ಯಾರ್ಥಿಗಳು ಶಿಕ್ಷಕರ ಬೋಧನೆಯ ಚೌಕಟ್ಟಿನೊಳಗೆ ಚಿಂತಿಸಿ, ಪರಿಹಾರ ಕಂಡುಕೊಳ್ಳುತ್ತಿದ್ದಾರೆ. ಕಂಪ್ಯೂಟರ್ ತಂತ್ರಜ್ಞಾನ ಹಾಗೂ ಅಂತರ್ಜಾಲ ಸೌಲಭ್ಯಗಳು ಈ ಚೌಕಟ್ಟಿನಿಂದ ಹೊರತಾದ ಮಾದರಿಗಳಾಗಿವೆ. ವಿದ್ಯಾರ್ಥಿಗಳು ಇವುಗಳ ಕಲಿಕೆಯಲ್ಲೂ ಆಸಕ್ತಿ ವಹಿಸಿದರೆ ಮಾತ್ರ ಹೆಚ್ಚಿನ ಸಾಧನೆ ಮಾಡಲು ಸಾಧ್ಯ. ಈ ನಿಟ್ಟಿನಲ್ಲಿ ಮಕ್ಕಳನ್ನು ತಯಾರು ಮಾಡಲು ಶಿಕ್ಷಕರು ಪ್ರಯತ್ನಿಸಬೇಕು ಎಂದು ಹೇಳಿದರು.
ಇ ಸ್ಕೂಲ್ ತರಗತಿ ಉದ್ಘಾಟಿಸಿದ ಮೈಸೂರಿನ ನಿವೃತ್ತ ಸಂಸ್ಕೃತ ಪ್ರಾಧ್ಯಾಪಕ ಎನ್. ವೆಂಕಟಾಚಲ ಮಾತನಾಡಿ, ಮಕ್ಕಳಿಗೆ ಶಿಕ್ಷಣ ಎಂದರೆ ಕಠಿಣ, ಶಿಕ್ಷೆ ಎಂಬುದನ್ನು ನಾವು ನಮ್ಮ ಮನಸ್ಸಿನಲ್ಲಿ ಬಿತ್ತಿಕೊಂಡಿದ್ದರಿಂದಲೇ ಕಲಿಕೆ ಸಮಸ್ಯೆಯಾಗುತ್ತದೆ. ಇದರಿಂದ ವಿದ್ಯಾರ್ಥಿಗಳು ಹೊರಬರಬೇಕು ಎಂದು ಸೂಚಿಸಿದರು.
ಸಾಗರ ಜೀವವಿಮಾ ಶಾಖಾ ಪ್ರಬಂಧಕ ಎಚ್.ಎನ್. ಕೃಷ್ಣಮೂರ್ತಿ ಮಾತನಾಡಿದರು. ವಿದ್ಯಾ ಸಂಸ್ಥೆಯ ಅಧ್ಯಕ್ಷ ಜಿ.ವಿ.ಅನಂತ ಅಧ್ಯಕ್ಷತೆ ವಹಿಸಿದ್ದರು. ಗ್ರಾಪಂ ಮಾಜಿ ಉಪಾಧ್ಯಕ್ಷ ಶ್ರೀನಿವಾಸ್ ಶೇರಿಗಾರ್, ಮುಖ್ಯ ಶಿಕ್ಷಕ ರಜನೀಶ್, ಎಸ್.ಟಿ.ರತ್ನಾಕರ, ಚಂದ್ರಶೇಖರ ಭಟ್ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

