ಶಿವಮೊಗ್ಗ

ಬಿಜೆಪಿಯಿಂದ ವಿಧಾನಸೌಧ ಮುತ್ತಿಗೆ 22ರಂದು

Published On :

ಶಿವಮೊಗ್ಗ: ರಾಜ್ಯ ಸರ್ಕಾರದ ಜನವಿರೋಧಿ ಆಡಳಿತ ವಿರೋಧಿಸಿ ಜು.22ರಂದು ವಿದಾನಸೌಧ ಮುತ್ತಿಗೆ ಹಾಕಲಿದ್ದು, ಸಮಾಜ ಒಡೆಯುವ ಕೆಲಸ ಮಾಡುತ್ತಿರುವ ಸರ್ಕಾರಕ್ಕೆ ಎಚ್ಚರಿಕೆ ನೀಡಲಾಗುವುದು ಎಂದು ಬಿಜೆಪಿ ಎಸ್ಸಿಎಸ್ಟಿ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಎಂ. ಬಸವರಾಜ ನಾಯ್ಕ್ ಹೇಳಿದ್ದಾರೆ.
ನಗರದ ಬಿಜೆಪಿ ಕಚೇರಿಯಲ್ಲಿ ಮಂಗಳವಾರ ಅವರು ಪ್ರತಿಭಟನೆ ಪೂರ್ವ ಸಿದ್ಧತಾ ಸಭೆಯಲ್ಲಿ, ಬಿಜೆಪಿ ಅಧಿಕಾರದಲ್ಲಿದ್ದಾಗ ಭಾಗ್ಯಲಕ್ಷ್ಮೀ, ಶಾಲಾ ಮಕ್ಕಳಿಗೆ ಸೈಕಲ್ ಇತ್ಯಾದಿ ಯೋಜನೆಗಳನ್ನು ಜಾತಿರಹಿತವಾಗಿ ಜಾರಿಗೊಳಿಸಿತ್ತು. ಆದರೆ ಕಾಂಗ್ರೆಸ್ ಸರ್ಕಾರ ಶಾದಿಭಾಗ್ಯ, ಶಾಲಾ ಮಕ್ಕಳ ಪ್ರವಾಸ ಇತ್ಯಾದಿ ಯೋಜನೆಗಳನ್ನು ಜಾರಿ ಮಾಡಿ ಸಮಾಜ ಒಡೆಯುವ ಕೆಲಸ ಮಾಡುತ್ತಿದೆ ಎಂದರು.
ಬಿಜೆಪಿ ಎಸ್ಸಿ ಮೋರ್ಚಾ ಉಪಾಧ್ಯಕ್ಷ ಎ.ಕೆ. ಮಹದೇವಪ್ಪ ಅಧ್ಯಕ್ಷತೆ ವಹಿಸಿದ್ದರು. ಮುಖಂಡ ಪಾಣಿ ರಾಜಪ್ಪ, ಜಯರಾಂ, ಯೋಗೀಶ್, ಅರುಣ್, ವೆಂಕಟೇಶ್, ದತ್ತಾತ್ರಿ, ಶ್ರೀನಾಥ್, ಶಶಿಧರ್ ಮತ್ತಿತರರು ಇದ್ದರು.

ಹರೀಶ್ ಹಂದೆ ಇಂದು ಭೇಟಿ
ಶಿವಮೊಗ್ಗ: ಮ್ಯಾಗ್ಸೆಸ್ಸೆ ಪ್ರಶಸ್ತಿ ಪುರಸ್ಕೃತ, ಸೆಲ್ಕೋ ಇಂಡಿಯಾ ಸಹ ಸಂಸ್ಥಾಪಕ ಹರೀಶ್ ಹಂದೆ ನಗರಕ್ಕೆ ಜು.16ರಂದು ಆಗಮಿಸಲಿದ್ದು, ಸಂಜೆ 6 ಗಂಟೆಗೆ ರೋಟರಿ ಕ್ಲಬ್ ಆಯೋಜಿಸಿರುವ ವಾರದ ಸಭೆಯಲ್ಲಿ ಭಾಗವಹಿಸುವರು. ಸವಳಂಗ ರಸ್ತೆಯ ಎಲ್ ಬಿಎಸ್ ನಗರದ ರೋಟರಿ ಯುವ ಕೇಂದ್ರದಲ್ಲಿ ಸಂಜೆ 7 ಗಂಟೆಗೆ ನಡೆಯುವ ಕಾರ್ಯಕ್ರಮದಲ್ಲಿ ಅವರು -ಸೋಲಾರ್ ಶಿವಮೊಗ್ಗ- ಕುರಿತು ವಿವರಣೆ ನೀಡುವರು. ಆಸಕ್ತರು ಭಾಗವಹಿಸುವಂತೆ ರೋಟರಿ ಅಧ್ಯಕ್ಷೆ ಲಕ್ಷ್ಮೀದೇವಿ ಗೋಪಿನಾಥ್ ಕೋರಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.