ಶಿವಮೊಗ್ಗ

ಧಾರಾಕಾರ ಮಳೆ; ಜನಜೀವನ ಅಸ್ತವ್ಯಸ್ತ

Published On :

ಸಾಗರ:  ಪಟ್ಟಣದಲ್ಲಿ ಮಂಗಳವಾರ ರಾತ್ರಿ ಹಾಗೂ ಬುಧವಾರ ಬೆಳಗ್ಗೆ ಸುರಿದ ಧಾರಾಕಾರ ಮಳೆಯಿಂದಾಗಿ ಸಾಕಷ್ಟು ಅನಾಹುತ ಸಂಭವಿಸಿದೆ. ರಾಷ್ಟ್ರೀಯ ಹೆದ್ದಾರಿ 206ರ ಹೋಂಡಾ ಷೋ ರೂಂ ಪಕ್ಕದಲ್ಲಿ ಬೃಹತ್ ಮರ ರಸ್ತೆಗೆ ಉರುಳಿದ್ದು, ವಿದ್ಯುತ್ ಕಂಬ ಮುರಿದಿದೆ. ನಾಲ್ಕಾರು ಕಂಬಗಳು ಬಾಗಿ, ವಿದ್ಯುತ್ ತಂತಿಗಳು ತುಂಡಾಗಿವೆ. ಜೊಸೆಫ್ ನಗರ, ನೆಹರು ನಗರ, ಎಸ್.ಎನ್. ನಗರ ಸೇರಿದಂತೆ ಅನೇಕ ಬಡಾವಣೆಗಳಲ್ಲಿ ವಿದ್ಯುತ್ ಸಮಸ್ಯೆ ಉಂಟಾಗಿದೆ. ಸ್ಥಳಕ್ಕೆ ನಗರಸಭೆ ಅಧ್ಯಕ್ಷೆ ಎನ್.ಲಲಿತಮ್ಮ, ಸದಸ್ಯ ಡಿ.ದಿನೇಶ್, ಪೌರಾಯುಕ್ತ ಚಂದ್ರಶೇಖರ್ ಹಾಗೂ ಮೆಸ್ಕಾಂ ಅಧಿಕಾರಿಗಳು ಭೇಟಿ ನೀಡಿ ಮರವನ್ನು ತೆರವುಗೊಳಿಸಲು ಸೂಚನೆ ನೀಡಿದರು.
ಮನೆ ಕುಸಿತ:  ನಗರದ ಶಿವಾಜಿ ರಸ್ತೆಯಲ್ಲಿ ಪ್ರಭಾಕರ್ ಪೈ ಎಂಬವರಿಗೆ ಸೇರಿದ ಮನೆಯ ಗೋಡೆ ಕುಸಿದಿದೆ. ಚಂದ್ರಮಾವಿನಕೊಪ್ಪಲು ಸಾಮಿಲ್ ಸಮೀಪದ ಆಚಾರ್ ಕೇರಿಯಲ್ಲಿ ಮನೆಗೆ ನೀರು ನುಗ್ಗಿ ಹಾನಿ ಸಂಭವಿಸಿದೆ. ವಿವಿಧ ಭಾಗಗಳಲ್ಲಿ ಮನೆ ಕಾಂಪೋಂಡ್ ಕುಸಿದಿದ್ದು, ರಸ್ತೆಗಳಲ್ಲಿ ಮರದ ಟೊಂಗೆಗಳು ಉರುಳಿದ್ದು, ಸಂಚಾರ ಅಸ್ತವ್ಯಸ್ತಗೊಂಡಿದೆ.  ತಾಳಗುಪ್ಪ ಹೋಬಳಿಯ ಬೀಸನಗದ್ದೆ ಗ್ರಾಮದಲ್ಲಿ ನೆರೆ ಹಾವಳಿಯಿಂದಾಗಿ ಸಂಪರ್ಕ ತುಂಡಾಗಿದೆ. ಸ್ಥಳೀಯ ಗ್ರಾಮ ಪಂಚಾಯ್ತಿ ಗ್ರಾಮಸ್ಥರ ಸಂಚಾರಕ್ಕಾಗಿ ದೋಣಿ ಬಿಡಲು ಸಿದ್ಧತೆ ನಡೆಸಿದೆ. ಹೋಬಳಿಯ ಕನ್ನಹೊಳೆ, ಕಣಸೆ ಹೊಳೆ ಹಾಗೂ ಮಾವಿನಹೊಳೆ ತುಂಬಿ ಹರಿಯುತ್ತಿದ್ದು, ತಡಗಳಲೆ, ಶುಂಠಿಕೊಪ್ಪ, ತಟ್ಟೆಕೊಪ್ಪ, ಕಾಗೋಡು, ಕೆಲವೆ, ಕಣಸೆ ಇನ್ನಿತರ ಭಾಗಗಳಲ್ಲಿ ಸಾವಿರಾರು ಎಕರೆ ಜಮೀನು ಜಲಾವೃತಗೊಂಡಿದೆ. ಕನ್ನಹೊಳೆ ಸೇತುವೆ ನೀರಿನಿಂದ ಮುಚ್ಚುವ ಸ್ಥಿತಿ ತಲುಪಿದೆ. ಯಾವ ಸಂದರ್ಭದಲ್ಲಿ ಬೇಕಾದರೂ ಸೇತುವೆ ಮೇಲೆ ವಾಹನ ಹಾಗೂ ಜನಸಂಚಾರ ನಿಲ್ಲುವ ಸಾಧ್ಯತೆ ಇದೆ. ತಾಲೂಕಿನಲ್ಲಿ ದಾಖಲೆಯ ಪ್ರಮಾಣದಲ್ಲಿ ಮಳೆಯಾಗಿದೆ. ಬುಧವಾರ ಬೆಳಗ್ಗೆ ದಾಖಲಾದ ಮಳೆ ಪ್ರಮಾಣ 89 ಮಿ.ಮೀ. ಆಗಿದೆ. ಲಿಂಗನಮಕ್ಕಿ ಜಲಾಶಯ ಪ್ರದೇಶದಲ್ಲಿ ವ್ಯಾಪಕ ಮಳೆಯಾಗುತ್ತಿದೆ. ಅಣೆಕಟ್ಟಿಗೆ ಒಂದೆ ದಿನ 4 ಅಡಿ ನೀರು ಹರಿದು ಬಂದಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.