ಶಿಕಾರಿಪುರ ಉಪಚುನಾವಣೆ: ನಾನೇ ಕಾಂಗ್ರೆಸ್‌ಅಭ್ಯರ್ಥಿ
ಶಾಂತವೀರಪ್ಪ ಗೌಡ ಸ್ಪಷ್ಟನೆ
ಶಿವಮೊಗ್ಗ: ಶಿಕಾರಿಪುರ ವಿಧಾನಸಭಾ ಕ್ಷೇತ್ರ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ತಾವು ಕಣಕ್ಕಿಳಿಯುತ್ತೇನೆ ಎಂದು ಶಾಂತವೀರಪ್ಪ ಗೌಡ ಸ್ಪಷ್ಟಪಡಿಸಿದ್ದಾರೆ.
ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸದ್ಯವೇ ಶಿಕಾರಿಪುರ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ಬರಲಿದೆ. ಈಗಾಗಲೇ ತಾವು ಕ್ಷೇತ್ರದಲ್ಲಿ ಪ್ರವಾಸ ಮಾಡುತ್ತಿದ್ದು, ಈ ಹಿಂದೆ ಸೋತಿದ್ದರೂ ಜನರ ಪ್ರೀತಿ ವಿಶ್ವಾಸ ಉಳಿಸಿಕೊಂಡಿದ್ದೇನೆ. ಶಿಕಾರಿಪುರ ತಾಲೂಕು ಕಾಂಗ್ರೆಸ್ ಮುಖಂಡರು ಮತ್ತು ಪಕ್ಷ ತಮ್ಮನ್ನೇ ಅಭ್ಯರ್ಥಿಯಾಗಿ ಆಯ್ಕೆ ಮಾಡಿದ್ದಾರೆ ಎಂದರು.
ಇತ್ತೀಚೆಗೆ ಬಿ.ಸಿ.ಪಾಟೀಲ್ ಶಿಕಾರಿಪುರ ಕ್ಷೇತ್ರದಿಂದ ಸ್ಪರ್ಧಿಸುವುದಾಗಿ ಸುದ್ದಿ ಹರಡಿದೆ. ಈ ಬಗ್ಗೆ ತಮಗೆ ಅಧಿಕೃತವಾಗಿ ತಿಳಿದಿಲ್ಲ, ನಾನು ಅವರ ಜೊತೆಗೆ ಈ ಬಗ್ಗೆ ಮಾತನಾಡಿಲ್ಲ. ಆದರೆ, ಕ್ಷೇತ್ರದ ಜನತೆ ಈ ವಿಷಯ ಕೇಳಿ ಅಚ್ಚರಿಗೊಂಡಿದ್ದಾರೆ ಎಂದರು. ಪಕ್ಷದ ವರಿಷ್ಠರು ತಮಗೇ ಟಿಕೆಟ್ ನೀಡಬಹುದು ಎಂಬ ವಿಶ್ವಾಸವಿದೆ ಎಂದು ಹೇಳಿದ ಅವರು, 2013ರ ಚುನಾವಣೆಯಲ್ಲಿ ತಾವು ಸೋತಿದ್ದರೂ 44700 ಕ್ಕೂ ಹೆಚ್ಚು ಮತ ಪಡೆದಿದ್ದೇನೆ. ಪಕ್ಷಕ್ಕಾಗಿ ದುಡಿದಿದ್ದೇನೆ ಎಂದು ತಿಳಿಸಿದರು.
ಈಗಾಗಲೇ ಕೆಪಿಸಿಸಿ ಅಧ್ಯಕ್ಷ, ಮುಖ್ಯಮಂತ್ರಿಯವರನ್ನು ಭೇಟಿ ಮಾಡಿದ್ದೇನೆ. ತಮಗೆ ಟಿಕೆಟ್ ನೀಡುವುದಾಗಿ ಭರವಸೆ ಕೊಟ್ಟಿದ್ದಾರೆ. ಈಗಾಗಲೇ ಪರಿಷತ್ ಸದಸ್ಯನಾಗಿ ಕೆಲಸ ಮಾಡಿದ್ದೇನೆ. ಕ್ಷೇತ್ರದ ಮತದಾರರ ಪ್ರೋತ್ಸಾಹ ತಮಗೆ ಇದೆ. ಟಿಕೆಟ್ ನೀಡಿದರೆ ತಾವು ಗೆಲ್ಲುವುದು ಖಚಿತ ಎಂದು ವಿಶ್ವಾಸ ವ್ಯಕ್ತ ಪಡಿಸಿದರು.
ಒಂದು ವೇಳೆ ತಮಗೆ ಟಿಕೆಟ್ ನೀಡದಿದ್ದರೆ ಬಂಡಾಯವೇನೂ ಏಳಲ್ಲ. ಇಂದಿಗೂ ಕಾಂಗ್ರೆಸ್ ಪಕ್ಷಕ್ಕೆ ದ್ರೋಹ ಮಾಡಲಾರೆ. ಆದರೆ ಗೆಲ್ಲುವ ಕುದುರೆಯಾದ ತಮಗೆ ಟಿಕೆಟ್ ನೀಡಬೇಕು, ಗೆಲ್ಲುವ ವಿಶ್ವಾಸ ತಮಗೆ ಇದೆ ಎಂದರು. ಶಿಕಾರಿಪುರ, ಶಿರಾಳಕೊಪ್ಪದ ಮುಖಂಡರು ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

