ಮಳೆ ಇಳಿಮುಖ; ಧರೆಗುರುಳಿದ ಮರ
ಶಿವಮೊಗ್ಗ: ವಾರದ ಆರಂಭದಲ್ಲಿ ಭಾರಿ ನಿರೀಕ್ಷೆಯೊಂದಿಗೆ ಆರಂಭವಾಗಿದ್ದ ಮಳೆ ಗುರುವಾರದ ವೇಳೆಗಾಗಲೇ ಇಳಿಮುಖವಾಗಿದೆ. ಜಿಲ್ಲೆಯಾದ್ಯಂತ ಮಳೆ ಕಡಿಮೆಯಾಗಿದ್ದು, ಜಲಾಶಯಗಳ ಒಳಹರಿವಿನಲ್ಲಿ ಇಳಿಕೆ ಕಂಡಿದೆ. ಅತಿ ಹೆಚ್ಚು ಮಳೆಯಾಗಿರುವುದು ಹೊಸನಗರದಲ್ಲಿ ಮಾತ್ರ. ಕಳೆದ ರಾತ್ರಿ ಸುರಿದ ಭಾರಿ ಮಳೆಯಿಂದಾಗಿ ನಗರದ ವಿವಿಧೆಡೆ ಮರಗಳು ಉರುಳಿ ಬಿದ್ದಿವೆ. ನಗರದ ಲಕ್ಷ್ಮೀ ಟಾಕೀಸ್ ಬಳಿ ಭಾರಿ ಮರವೊಂದು 100 ಅಡಿ ರಸ್ತೆಗೆ ಅಡ್ಡಲಾಗಿ ಬಿದ್ದಿದ್ದರಿಂದ ಸಂಚಾರ ಅಸ್ತವ್ಯಸ್ತವಾಗಿತ್ತು. ಗುರುವಾರ ಮರವನ್ನು ತೆರವುಗೊಳಿಸಲಾಯಿತು. ಹಾಗೆಯೇ ಗಾಂಧಿ ನಗರ ಬಡಾವಣೆಯಲ್ಲಿಯೂ ಮರ ಬಿದ್ದಿತ್ತು. ಭದ್ರಾ ಜಲಾಶಯದ ಮಟ್ಟ 150 ಅಡಿ ತಲುಪಿದೆ. ಲಿಂಗನಮಕ್ಕಿ ಜಲಾಶಯ ಸಂಗ್ರಹ 2 ಅಡಿ ಹೆಚ್ಚಳವಾಗಿದೆ.
ಅಪಘಾತ: ಬೈಕ್ ಸವಾರ ಸಾವು
ಸೊರಬ: ತಾಲೂಕಿನ ಆನವಟ್ಟಿ ಹೋಬಳಿ ಭಾರಂಗಿ ಬಳಿ ಮ್ಯಾಕ್ಸಿ ಕ್ಯಾಬ್ ಮತ್ತು ಮೋಟಾರ್ ಬೈಕ್ ಮುಖಾಮುಖಿ ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ನಡೆದಿದೆ. ಬುಧವಾರ ಸಂಜೆ ಭಾರಂಗಿಯಿಂದ ಆನವಟ್ಟಿ ಕಡೆಗೆ ಬರುತ್ತಿದ್ದ ಮ್ಯಾಕ್ಸಿಕ್ಯಾಬ್ ಹಾಗೂ ಗಿಣಿವಾಲ ಕಡೆಯಿಂದ ಬರುತ್ತಿದ್ದ ಮೋಟಾರ್ ಬೈಕ್ ಡಿಕ್ಕಿಯಾಗಿ ಬೈಕ್ ಸವಾರ ಪರಮೇಶ್ವರಪ್ಪ (22) ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಆನವಟ್ಟಿ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

