ಶಿವಮೊಗ್ಗ

ಸ್ಥಾಯಿ ಸಮಿತಿ ಅಧ್ಯಕ್ಷ ಸುಂದರಸಿಂಗ್

Published On :

ಸಾಗರ: ಇಲ್ಲಿನ ನಗರಸಭೆ ಸ್ಥಾಯಿ ಸಮಿತಿ ಅಧ್ಯಕ್ಷ ಸುಂದರಸಿಂಗ್ ಆಯ್ಕೆಯಾಗಿದ್ದಾರೆ. ಎರಡನೇ ಬಾರಿಗೆ ನಗರಸಭೆ ಸದಸ್ಯರಾಗಿ ಆಯ್ಕೆಯಾಗಿರುವ ಸುಂದರ್ ಸಿಂಗ್ ಬುಧವಾರ ನಡೆದ ಸ್ಥಾಯಿ ಸಮಿತಿ ಅಧ್ಯಕ್ಷ ಸ್ಥಾನದ ಚುನಾವಣೆಯಲ್ಲಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಸ್ಥಾಯಿ ಸಮಿತಿ ಅಧ್ಯಕ್ಷರಾಗಿ ಆಯ್ಕೆಯಾದ ನಂತರ ಪತ್ರಕರ್ತರೊಂದಿಗೆ ಮಾತನಾಡಿದ ಸುಂದರಸಿಂಗ್, ಜನರ ಸೇವೆ ಮಾಡಲು ಇದೊಂದು ಉತ್ತಮ ಅವಕಾಶ. ನಗರವ್ಯಾಪ್ತಿಯಲ್ಲಿ ಗುಣಮಟ್ಟದ ಕಾಮಗಾರಿ ನಿರ್ವಹಣೆ ನನ್ನ ಉದ್ದೇಶ. ಸ್ವಚ್ಛತೆ ಹಾಗೂ ಕುಡಿಯುವ ನೀರಿನ ಸೌಲಭ್ಯ ಜನರಿಗೆ ತಲುಪಿಸುವ ನಿಟ್ಟಿನಲ್ಲಿ ಸಮರೋಪದಿಯಲ್ಲಿ ಕೆಲಸ ಮಾಡಲಾಗುವುದು ಎಂದರು.
ಪಕ್ಷವು ನನ್ನ ಮೇಲೆ ವಿಶ್ವಾಸ ಇರಿಸಿ ಈ ಸ್ಥಾನ ನೀಡಿದೆ. ಅವರ ವಿಶ್ವಾಸವನ್ನು ಜನರಿಗೆ ಉತ್ತಮ ಆಡಳಿತ ನೀಡುವ ಮೂಲಕ ಉಳಿಸಿಕೊಳ್ಳುತ್ತೇನೆ. ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಸದಸ್ಯರುಗಳು ನೀಡಿದ ಸಹಕಾರಕ್ಕೆ ಧನ್ಯವಾದ ತಿಳಿಸಿದರು.  ನಗರಸಭೆ ಅಧ್ಯಕ್ಷೆ ಎನ್.ಲಲಿತಮ್ಮ, ನಗರ ಕಾಂಗ್ರೆಸ್ ಘಟಕದ ಅಧ್ಯಕ್ಷ ಮಕ್ಬೂಲ್ ಅಹ್ಮದ್, ನಗರಸಭೆ ಸದಸ್ಯ ಮೋಹನ್, ಶ್ರೀನಾಥ್, ಉಮೇಶ್, ಉಷಾ, ತೀ.ನ.ಶ್ರೀನಿವಾಸ್, ಗಣಾಧೀಶ್, ಸುರೇಶಬಾಬು, ಫ್ರಾನ್ಸಿಸ್ ಗೋಮ್ಸ್, ಶ್ರೀನಿವಾಸ್, ನಾಗರತ್ನ ಸಿ. ಹಾಜರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.