ಶಿವಮೊಗ್ಗ

ಸಾಹಿತ್ಯದ ಗೊತ್ತಿಲ್ಲದ ಫೌಜಿಯಾ ಉರ್ದು ಸಾಹಿತ್ಯ ಅಕಾಡೆಮಿ ಅಧ್ಯಕ್ಷ: ಟೀಕೆ

Published On :

ಶಿಕಾರಿಪುರ: ಉರ್ದು ಸಾಹಿತ್ಯದ ಗಂಧಗಾಳಿಯಿಲ್ಲದ ಫೌಜಿಯಾ ಚೌಧರಿ ಅವರನ್ನು ರಾಜ್ಯ ಉರ್ದು ಸಾಹಿತ್ಯ ಅಕಾಡೆಮಿ ಅಧ್ಯಕ್ಷರನ್ನಾಗಿಸಿರುವುದು ಉರ್ದು ಸಾಹಿತ್ಯದ ಬಗೆಗಿನ ಆಸಕ್ತಿಯನ್ನು ಕ್ಷೀಣಿಸುವಂತಾಗಿದೆ ಎಂದು ಉರ್ದು ಸಾಹಿತ್ಯ ಅಕಾಡೆಮಿ ಮಾಜಿ ಅಧ್ಯಕ್ಷ, ರಾಜ್ಯ ಉರ್ದು ಮಕ್ಕಳ ಸಾಹಿತ್ಯ ಸಂಘದ ಅಧ್ಯಕ್ಷ ಮೌಲಾನಾ ಅಮ್ಜದ್ ಹುಸೇನ್ ಹಫೀಜ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ರಾಜ್ಯ ಉರ್ದು ಸಾಹಿತ್ಯ ಅಕಾಡೆಮಿ ಅಧ್ಯಕ್ಷರ ನೇಮಕ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ಅವರು ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಬರೆದ ಪತ್ರದ ಪ್ರತಿಯನ್ನು ಬಿಡುಗಡೆ ಮಾಡಿದರು. ಉರ್ದು ಸಾಹಿತ್ಯ ಅಕಾಡೆಮಿಗೆ ಕೆಲ ಕಾಲ ಅಧ್ಯಕ್ಷನಾಗಿ ಸೇವೆ ಸಲ್ಲಿಸುವ ಅವಕಾಶ ತಮಗೆ ದೊರೆತಿದ್ದು, ಈ ಅವಧಿಯಲ್ಲಿ ಅಕಾಡೆಮಿ ಗೌರವ ಹೆಚ್ಚಿಸುವ ರೀತಿಯಲ್ಲಿ ಕಾರ್ಯ ನಿರ್ವಹಿಸಿದ ತೃಪ್ತಿ ಹೊಂದಿರುವುದಾಗಿ ಹೇಳಿದರು.
 ಅಕಾಡೆಮಿಯ ವ್ಯವಸ್ಥೆಯನ್ನು ಛಿದ್ರಗೊಳಿಸುವ ಮುನ್ನಾ ಫೌಜಿಯಾರನ್ನು ಪದಚ್ಯುತಗೊಳಿಸಿ ಉರ್ದು ಸಾಹಿತ್ಯ ಕ್ಷೇತ್ರದಲ್ಲಿ ಸಾಧನೆಯ ಮೂಲಕ ಎಲೆ ಮರೆಯ ಕಾಯಿಯಂತಿರುವ  ಅರ್ಹರನ್ನು ತಕ್ಷಣವೇ ಗುರ್ತಿಸಿ ಅಧ್ಯಕ್ಷ ಸ್ಥಾನಕ್ಕೆ ನೇಮಕಗೊಳಿಸಿ ಅಕಾಡೆಮಿ ಗೌರವ ಹೆಚ್ಚಿಸುವ ಪ್ರಯತ್ನ ವಾಗಬೇಕಾಗಿದೆ ಎಂದು ಒತ್ತಾಯಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.