ಶಿವಮೊಗ್ಗ

ಸಿಬಿಐ ತನಿಖೆಗೆ ಒಪ್ಪಿಸಲು ಆಗ್ರಹ

Published On :

ಶಿವಮೊಗ್ಗ: ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ಹಗರಣವನ್ನು ಸಿಬಿಐ ಅಥವಾ ಸಿಓಡಿ ತನಿಖೆಗೆ ಒಪ್ಪಿಸಬೇಕೆಂದು ಮಾಜಿ ಶಾಸಕ, ಬಿಜೆಪಿ ರೈತಮೋರ್ಚಾ ರಾಜ್ಯಾಧ್ಯಕ್ಷ ಆರಗ ಜ್ಞಾನೇಂದ್ರ ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ.
ನಗರದಲ್ಲಿ ಶನಿವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಡಿಸಿಸಿ ಬ್ಯಾಂಕ್ ಶಾಖೆಯಲ್ಲಿ ನಡೆದಿದೆ ಎನ್ನಲಾದ ರು. 1.79 ಕೋಟಿ ಅವ್ಯವಹಾರವನ್ನು ಪ್ರಸ್ತಾಪಿಸಿ, ಇಷ್ಟು ದೊಡ್ಡ ಮೊತ್ತದ ಬೇನಾಮಿ ಸಾಲ ನೀಡಿದ ಈ ಪ್ರಕರಣದಲ್ಲಿ ಶಾಖೆ ವ್ಯವಸ್ಥಾಪಕರು ಹಾಗೂ ಗುಮಾಸ್ತರನ್ನು ಬಲಿಪಶು ಮಾಡಲಾಗಿದೆ. ಡಿಸಿಸಿ ಬ್ಯಾಂಕ್ ಅಧ್ಯಕ್ಷ ಆರ್.ಎಂ. ಮಂಜುನಾಥ ಗೌಡರ ಆದೇಶವಿಲ್ಲದೇ ಬ್ಯಾಂಕಿನಲ್ಲಿ ಒಂದು ಹುಲ್ಲುಕಡ್ಡಿಯೂ ಅಲ್ಲಾಡುವುದಿಲ್ಲ ಎಂಬ ಪರಿಸ್ಥಿತಿ ಇರುವಾಗ ಅವರು ಹೇಳದೆ ಇಷ್ಟೆಲ್ಲಾ ನಡೆಯಲು ಸಾಧ್ಯವೇ ಇಲ್ಲ ಎಂದರು.
ಡಿಸಿಸಿ ಬ್ಯಾಂಕಿನಲ್ಲಿ ಬಂಗಾರ ಮೌಲ್ಯಮಾಪಕರೇ ಇಲ್ಲ. ಹಗರಣ ನಡೆದಿರುವ ಶಾಖೆಯಲ್ಲಿ ಸಾಲ ನೀಡಿದ ಮೊತ್ತ ರು. 220 ಕಿಲೋ ಬಂಗಾರಕ್ಕೆ. ಆದರೆ ಇರುವುದು 100 ಕಿಲೋ ಬಂಗಾರ ಮಾತ್ರ. ಇದು ಹೇಗೆ ಸಾಧ್ಯವಾಯಿತು ಎಂದು ಪ್ರಶ್ನಿಸಿದರು.
ರು. 3 ಲಕ್ಷ ವರೆಗೆ ಬಡ್ಡಿರಹಿತ ಸಾಲವನ್ನು ಯಾವ ರೈತರಿಗೂ ಕೊಟ್ಟಿಲ್ಲ. ಯಾವುದ್ಯಾವುದೋ ಸಂಘಸಂಸ್ಥೆಗಳಿಗೆ ಕೋಟಿಗಟ್ಟಲೆ ಸಾಲ ನೀಡಲಾಗಿದೆ ಎಂದ ಅವರು, ಕೆಲ ದಿನಗಳ ಹಿಂದೆ ತೀರ್ಥಹಳ್ಳಿಯಲ್ಲಿ ಮಂಜುನಾಥ ಗೌಡರನ್ನು ಸನ್ಮಾನಿಸಲಾಯಿತು. ಈ ಕಾರ್ಯಕ್ರಮಕ್ಕಾಗಿ ತಾಲೂಕಿನ ಪ್ರತಿ ಸಹಕಾರ ಸಂಘಗಳಿಗೆ ರು. 10 ಸಾವಿರ ಪಡೆದುಕೊಳ್ಳಲಾಗಿದೆ ಎಂದು ತಿಳಿಸಿದರು.
ಮಂಜುನಾಥ ಗೌಡರು ಅಧ್ಯಕ್ಷರಾಗಿರುವ ಅಪೆಕ್ಸ್ ಬ್ಯಾಂಕಿನಲ್ಲಿಯೂ ಅವ್ಯವಹಾರ ನಡೆದಿದೆ ಎಂದರು.ಪತ್ರಿಕಾಗೋಷ್ಠಿಯಲ್ಲಿ ವಿಧಾನಪರಿಷತ್ ಸದಸ್ಯ ಎಂ.ಬಿ. ಭಾನುಪ್ರಕಾಶ್, ಮಾಜಿ ಶಾಸಕ ಕೆ.ಜಿ. ಕುಮಾರಸ್ವಾಮಿ, ಮುಖಂಡ ಎಚ್.ಸಿ. ಬಸವರಾಜಪ್ಪ, ಎಸ್.ಎನ್. ಚನ್ನಬಸಪ್ಪ, ಡಿ.ಎಸ್. ಅರುಣ್, ಮಹೇಂದ್ರನಾಥ್, ಶಿವರಾಜ್ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.