ಶಿವಮೊಗ್ಗ

ಸರ್ಕಾರಿ ಪದವಿ ಕಾಲೇಜಿನಲ್ಲಿ ಪತ್ರಿಕಾ ದಿನಾಚರಣೆ

Published On :

ಶಿರಾಳಕೊಪ್ಪ: ಇಲ್ಲಿನ ಸರ್ಕಾರಿ ಪದವಿ ಕಾಲೇಜಿನಲ್ಲಿ ಪತ್ರಿಕಾ ದಿನಾಚರಣೆ ಅಂಗವಾಗಿ ವಿದ್ಯಾರ್ಥಿಗಳಿಗೆ ಪತ್ರಿಕಾ ಸಂವಾದ ನಡೆಸಲಾಯಿತು. ತಾ. ಪತ್ರಕರ್ತರ ಸಂಘ ಮತ್ತು ಪದವಿ ಕಾಲೇಜು ಸಹಕಾರದೊಂದಿಗೆ ನಡೆದ ಕಾರ್ಯಕ್ರಮವನ್ನು ಲಯನ್ಸ್ ವಲಯಾಧಿಕಾರಿ ಎಂ.ಆರ್. ಗೀರೀಶ್ ಗಿಡಕ್ಕೆ ನೀರು ಹಾಕುವ ಮುಖಾಂತರ ಚಾಲನೆ ನೀಡಿದರು. ಪತ್ರಿಕಾ ರಂಗ ಇಂದು ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದ್ದು, ಜನರಿಗೆ ದೇಶ ವಿದೇಶದ ಸುದ್ದಿ ಸುಲಭವಾಗಿ ತಿಳಿಯುವಂತಾಗಿದೆ ಎಂದರು.  ತಾ. ಪತ್ರಕರ್ತರ ಸಂಘದ ಅಧ್ಯಕ್ಷ ಕೆ.ಎಸ್. ಹುಚ್ಚರಾಯಪ್ಪ ಮಾತನಾಡಿದರು. ಕಾರ್ಯದರ್ಶಿ ಚಂದ್ರಶೇಖರ ಮಠದ ಮಾತನಾಡಿ ಇಂದು ಪತ್ರಿಕೆಗಳು ಮಾಹಿತಿ ಜೊತೆಗೆ ಜ್ಞಾನವನ್ನು ಕೊಡುತ್ತಿವೆ ಎಂದು ಹೇಳಿದರು.         
ಅಧ್ಯಕ್ಷತೆ ವಹಿಸಿದ್ದ ಕಾಲೇಜು ಪ್ರಾಂಶುಪಾಲ ಮಂಜುನಾಥ ಮಾತನಾಡಿ ಪತ್ರಿಕೆಗೆ ವ್ಯಕ್ತಿಗಳನ್ನು ಬೆಳೆಸುವ ಮತ್ತು ನಾಶಪಡಿಸುವ ಶಕ್ತಿ ಇದೆ ಎಂದರು.
ನವೀನಕುಮಾರ್ ಮಾತನಾಡಿದರು. ಉಪನ್ಯಾಸಕರು ಮತ್ತು ಸಿಬ್ಬಂದಿ ಹಾಗೂ ವಿದ್ಯಾರ್ಥಿ ನಾಯಕ ಚೇತನ, ಕಾರ್ತೀಕ, ಪವನ, ಚೈತ್ರಾ ಇತರರು ಭಾಗವಹಿಸಿದ್ದರು.



Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.