ಬ್ರಾಹ್ಮಣ ಸಭಾದಿಂದ ಪ್ರತಿಭಾ ಪುರಸ್ಕಾರ, ಗಣ್ಯರ ಸನ್ಮಾನ
ಭದ್ರಾವತಿ: ಬ್ರಾಹ್ಮಣ ಸಮಾಜದ ಅಸ್ತಿತ್ವ ಸಕಲ ಸಮಾಜದ ಕಲ್ಯಾಣದ ದೃಷ್ಟಿಯಿಂದ ಅತಿಮುಖ್ಯವೆಂದು ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕು ಸ್ಥಾವರದ ಕಾರ್ಯಪಾಲಕ ನಿರ್ದೇಶಕ ಎಂ.ರವಿ ನುಡಿದರು. ಅವರು ಪಟ್ಟಣದ ಭಾರತಿತೀರ್ಥ ಸಮುದಾಯ ಭವನದಲ್ಲಿ ತಾಲೂಕು ಬ್ರಾಹ್ಮಣ ಸಭಾ ಏರ್ಪಡಿಸಿದ್ದ ಪ್ರತಿಭಾ ಪುರಸ್ಕಾರ ಮತ್ತು ಗಣ್ಯರ ಸನ್ಮಾನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕು ಕಾರ್ಖಾನೆ ಪ್ರಸ್ತುತ ಎದುರಿಸುತ್ತಿರುವ ಸಮಸ್ಯೆಗಳಿಂದ ಶೀಘ್ರ ಹೊರಬರುವುದೆಂಬ ಆಶ್ವಾಸನೆ ನೀಡಿದರು. ವಿಐಎಸ್ಎಲ್ ಕಾರ್ಖಾನೆ ಎದುರಿಸುತ್ತಿರುವ ಸಮಸ್ಯೆ ವ್ಯಕ್ತಿಗಳಿಂದ ಸೃಷ್ಟಿತವಾದದ್ದು ಮತ್ತು ರಾಜ್ಯ ಮತ್ತು ಕೇಂದ್ರ ಸರ್ಕಾರಗಳ ನೆರವಿನಿಂದ ಅದಕ್ಕೆ ಸೂಕ್ತ ಪರಿಹಾರ ಕಂಡುಕೊಂಡು ಕಾರ್ಖಾನೆ ಪುನ: ಸುಸ್ಥಿತಿಗೆ ಬರುವುದರಲ್ಲಿ ಸಂಶಯವಿಲ್ಲವೆಂದರು.
ಶಿವಮೊಗ್ಗ ಕರ್ನಾಟಕ ಸಂಘದ ಅಧ್ಯಕ್ಷೆ ವಿಜಯಾ ಶ್ರೀಧರ್ ಮಾತನಾಡಿದರು.
ಎಸ್ಎಸ್ಎಲ್ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಅತಿಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳಿಗೆ ನಗದು ಬಹುಮಾನ ನೀಡಿ ಪುರಸ್ಕರಿಸಲಾಯಿತು. ನಿರ್ದೇಶಕ ಎಂ.ರವಿ ಸಹ ಕಾರ್ಯಕ್ರಮದಲ್ಲಿ ಇಬ್ಬರು ಬಡ ವಿದ್ಯಾರ್ಥಿಗಳಿಗೆ ಬ್ರಾಹ್ಮಣ ಸಭಾ ನೀಡಿದ ಸಹಾಯಧನದೊಂದಿಗೆ ತಮ್ಮ ವೈಯುಕ್ತಿಕ ಕಾಣಿಕೆಯಾಗಿ ಎರಡು ಸಾವಿರ ರು. ನೀಡಿದರು.
ವೇಬ್ರಶ್ರೀ ಕೃಷ್ಣಮೂರ್ತಿ ಸೋಮಯಾಜಿ ವೇದಘೋಷದೊಂದಿಗೆ ಕಾರ್ಯಕ್ರಮ ಪ್ರಾರಂಭವಾಯಿತು. ಡಾ. ಹರೀಶ ದೇಲಂತಬೆಟ್ಟು ಮಾತನಾಡಿದರು. ಮುಕ್ತಾ ಪ್ರಸಾದ್ ಪ್ರಾರ್ಥಿಸಿದರು. ಕಾರ್ಯದರ್ಶಿ ಸತ್ಯನಾರಾಯಣ ರಾವ್ ದೇಶಪಾಂಡೆ ಸ್ವಾಗತಿಸಿದರು. ಜಿ.ಶಿವಕುಮಾರ್, ಗೀತಾ ಪರಿಚಯಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

