ವಿವಿಧ ಹಾಸ್ಟೆಲ್ಗೆ ಜಿಪಂ ಅಧ್ಯಕ್ಷರ ದಿಢೀರ್ ಭೇಟಿ
ಶಿವಮೊಗ್ಗ: ಅಧಿಕಾರಕ್ಕೇರಿದ ಎರಡೇ ದಿನದಲ್ಲಿ ಜಿಪಂ ಅಧ್ಯಕ್ಷ ಕಲಗೋಡು ರತ್ನಾಕರ್, ಉಪಾಧ್ಯಕ್ಷೆ ಗಾಯತ್ರಿ ಷಣ್ಮುಖಪ್ಪ ಕ್ರಿಯಾಶೀಲರಾಗಿದ್ದು, ಸೋಮವಾರ ಬೆಳಿಗ್ಗೆಯೇ ನಗರದ ವಿವಿಧ ಹಾಸ್ಟೆಲ್ ಗಳಿಗೆ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಕೋಟೆ ರಸ್ತೆಯಲ್ಲಿರುವ ಬಾಲಕಿಯರ ಮೆಟ್ರಿಕ್ ಪೂರ್ವ ಹಾಗೂ ಮೆಟ್ರಿಕ್ ನಂತರದ ವಿದ್ಯಾರ್ಥಿನಿ ನಿಲಯ, ವಿದ್ಯಾನಗರ ಬಡಾವಣೆಯಲ್ಲಿರುವ ಬಿಸಿಎಂ ಇಲಾಖೆಯ ಎರಡು ಹಾಸ್ಟೆಲ್ ಗಳು, ಬಾಪೂಜಿ ನಗರದ ಪ್ರೊ. ಬಿ. ಕೃಷ್ಣಪ್ಪ ಹಾಸ್ಟೆಲ್ ಗಳಿಗೆ ಭೇಟಿ ನೀಡಿ ವ್ಯವಸ್ಥೆ ಹಾಗೂ ಆಹಾರ ಗುಣಮಟ್ಟ ಪರಿಶೀಲಿಸಿದರು. ಈ ಸಂದರ್ಭದಲ್ಲಿ ಹಾಸ್ಟೆಲ್ ನಿವಾಸಿಗಳು ಹಲವು ದೂರುಗಳನ್ನು ಜಿಪಂ ಮುಖ್ಯಸ್ಥರ ಗಮನಕ್ಕೆ ತಂದರು. ಸಂಬಂಧಪಟ್ಟ ಅಧಿಕಾರಿಗಳನ್ನು ದೂರವಾಣಿ ಮೂಲಕವೇ ತರಾಟೆಗೆ ತೆಗೆದುಕೊಂಡ ಅಧ್ಯಕ್ಷ ಕಲಗೋಡು ರತ್ನಾಕರ್ ಕೂಡಲೇ ಕ್ರಮಕ್ಕೆ ಸೂಚಿಸಿದರು. ವಿದ್ಯಾನಗರ ಹಾಸ್ಟೆಲ್ ಗೆ ಭೇಟಿ ನೀಡಿದಾಗ ಅಡುಗೆ ಸಹಾಯಕರು ಅನುಮತಿ ಇಲ್ಲದೇ ರಜೆ ತೆರಳಿದ್ದು ಗಮನಕ್ಕೆ ಬಂದಿತು.
ಕುಡಿವ ನೀರಿನ ಪೂರೈಕೆಯಲ್ಲಿ ವ್ಯತ್ಯಯ
ಶಿವಮೊಗ್ಗ: ನಗರಪಾಲಿಕೆ ವ್ಯಾಪ್ತಿಯಲ್ಲಿ ಕುಡಿಯುವ ನೀರಿಗೆ ಸಂಬಂಧಿಸಿದಂತೆ ನಗರದ ಕೆ.ಆರ್. ವಾಟರ್ ವರ್ಕ್ನಲ್ಲಿ ತಾಂತ್ರಿಕ ಕಾರಣಗಳಿಂದಾಗಿ ನಗರದ ಕೆಲವು ಭಾಗಗಳಿಗೆ ಸಮರ್ಪಕ ನೀರು ಪೂರೈಕೆಯಲ್ಲಿ ವ್ಯತ್ಯಯವಾಗುತ್ತಿದೆ. ನದಿಯಲ್ಲಿ ನೀರಿನ ಮಟ್ಟ ಏರಿಳಿತವಾಗುವ ಕಾರಣ ಹಾಲಿ ಇರುವ 90 ಎಚ್.ಪಿ. ಮೋಟಾರನ್ನು ತಾತ್ಕಾಲಿಕವಾಗಿ ಸ್ಥಳಾಂತರಿಸ ಬೇಕಾಗಿರುವುದರಿಂದ ಹಾಗೂ ಮಳೆಗಾಲದಲ್ಲಿನ ವಿದ್ಯುತ್ ಪರಿಕರಗಳ ದುರಸ್ಥಿ ಕಾರ್ಯ ಪ್ರಗತಿಯಲ್ಲಿರುವ ಕಾರಣ ವ್ಯತ್ಯಯವಾಗಿದೆ. ಪಾಲಿಕೆ ವ್ಯಾಪ್ತಿಯಲ್ಲಿನ ಹಲವು ಭಾಗಗಳಿಗೆ ಮುಂದಿನ ಏಳು ದಿನಗಳವರೆಗೆ ನೀರು ವಿತರಣೆಯಲ್ಲಿ ವ್ಯತ್ಯಯ ಉಂಟಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಮಹಾನಗರಪಾಲಿಕೆ ಆಯುಕ್ತರು ಕೋರಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

