ಶಿವಮೊಗ್ಗ

ಅತ್ಯಾಚಾರದ ವಿರುದ್ಧ ನಗರಸಭಾ ಸದಸ್ಯರ ಪ್ರತಿಭಟನೆ

Published On :

ಭದ್ರಾವತಿ: ಮಹಿಳೆಯರು ಮತ್ತು ಶಾಲಾ ಮಕ್ಕಳ ಮೇಲೆ ನಡೆಯುತ್ತಿರುವ ಲೈಂಗಿಕ ದೌರ್ಜನ್ಯ ಮತ್ತು ಅತ್ಯಾಚಾರ ಪ್ರಕರಣಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ನಗರಸಭಾಧ್ಯಕ್ಷೆ ವಿಶಾಲಾಕ್ಷಿ ನೇತೃತ್ವದಲ್ಲಿ ನಗರಸಭಾ ಸದಸ್ಯರು ನಗರಸಭೆ ಮುಂದೆ ಪ್ರತಿಭಟನೆ ನಡೆಸಿದರು. ನಂತರ ಪ್ರತಿಭಟನಾಕಾರರು ತಹಸೀಲ್ದಾರರಿಗೆ ಮನವಿಪತ್ರ ಸಲ್ಲಿಸಿ, ಇಂಥ ಪ್ರಕರಣಗಳು ಮತ್ತೆ ನಡೆಯದಂತೆ ಎಚ್ಚರಿಕೆ ಸರ್ಕಾರ ಕಠಿಣ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದರು.
ಹಾಗೆಯೇ ಜೆಡಿಎಸ್ ತಾಲೂಕು ಮಹಿಳಾ ಘಟಕದ ಕಾರ್ಯಕರ್ತೆಯರು ಅಪ್ರಾಪ್ತ ಬಾಲಕಿಯರು ಹಾಗೂ ಮಹಿಳೆಯರ ಮೇಲೆ ನಡೆಯುತ್ತಿರುವ ಅತ್ಯಾಚಾರ ಪ್ರಕರಣಗಳ ಬಗ್ಗೆ ಸರ್ಕಾರ ಕೂಡಲೇ ಗಮನ ಹರಿಸಿ ಶಾಲಾ ಕಾಲೇಜು ವಿದ್ಯಾರ್ಥಿನಿಯರಿಗೆ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಮಹಿಳೆಯರಿಗೆ ಸೂಕ್ತ ರಕ್ಷಣೆ ಕೊಡಬೇಕೆಂದು ಒತ್ತಾಯಿಸಿ ತಾಲೂಕು ಕಚೇರಿ ಅವರಣದಲ್ಲಿ ಪ್ರತಿಭಟನೆ ನಡೆಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.