ಡಿಸಿ ಕಚೇರಿ ಎದುರು ಕಾಂಗ್ರೆಸ್ ಕಾರ್ಮಿಕ ಘಟಕ ಪ್ರತಿಭಟನೆ
ಶಿವಮೊಗ್ಗ: ಮೆಗ್ಗಾನ್ ಆಸ್ಪತ್ರೆಯಲ್ಲಿ ಜನರಿಕ್ ಔಷಧ ಮಾರಾಟ ಕೇಂದ್ರ ಸ್ಥಾಪಿಸುವಂತೆ ಕಾಂಗ್ರೆಸ್ ಕಾರ್ಮಿಕ ವಿಭಾಗದ ಜಿಲ್ಲಾ ಘಟಕ ಜಿಲ್ಲಾಡಳಿತವನ್ನು ಒತ್ತಾಯಿಸಿದೆ. ಬುಧವಾರ ಡಿಸಿ ಕಚೇರಿ ಎದುರು ಧರಣಿ ನಡೆಸಿದ ಸಂಘಟನೆಯ ಸದಸ್ಯರು, ಬಿಜೆಪಿ ಸರ್ಕಾರವಿದ್ದಾಗ ರಾಜ್ಯದ ಎಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಬಡ ರೋಗಿಗಳಿಗೆ ಶೇ.60 ರಿಯಾಯಿತಿ ದರದಲ್ಲಿ ಔಷಧಿ ನೀಡಲು ಜನರಿಕ್ ಔಷಧಿ ಮಳಿಗೆ ಆರಂಭಿಸುವ ನಿರ್ಧಾರ ತೆಗೆದುಕೊಂಡಿತು. ಆದರೆ, ಶಿವಮೊಗ್ಗದಲ್ಲಿ ಈ ಕೇಂದ್ರ ಆರಂಭವಾಗಲೇ ಇಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಮೆಗ್ಗಾನ್ ಆಸ್ಪತ್ರೆ ಸುತ್ತಮುತ್ತ ಖಾಸಗಿ ಮೆಡಿಕಲ್ ಶಾಪ್ಗಳಿದ್ದು, ಇವುಗಳಿಂದ ಸರ್ಕಾರಿ ಆಸ್ಪತ್ರೆಯ ಕೆಲ ವೈದ್ಯರಿಗೆ ಹಣ ಸಂದಾಯವಾಗುತ್ತಿದೆ. ಅಲ್ಲದೇ ಈ ಮೆಡಿಕಲ್ ಶಾಪ್ಗಳಿಗೆ ಔಷಧಿ ವಿತರಿಸುವ ಏಜೆನ್ಸಿಯಿಂದಲೂ ಇದಕ್ಕೆ ಅಡಚಣೆಯಾಗಿದೆ ಎಂದು ಆರೋಪಿಸಿದರು. ಮುಖಂಡ ದೇವೇಂದ್ರಪ್ಪ, ಮಧುಸೂಧನ್, ರೇಷ್ಮಾ, ವಿನಯ್, ಚೇತನ್, ಶಶಿಕುಮಾರ್ ಇತರರು ಭಾಗವಹಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

