ಅಪಘಾತ: ಬೈಕ್ ಸವಾರ ಸಾವು
ಆಯನೂರು: ಇಲ್ಲಿನ ದಾನವಂದಿ ಕ್ರಾಸ್ ಬಳಿ ನಡೆದ ರಸ್ತೆ ಅಪಘಾತದಲ್ಲಿ ಶಿಕಾರಿಪುರದ ರಾಮಚಂದ್ರ (40) ಎಂಬುವರು ಮೃತಪಟ್ಟಿದ್ದಾರೆ. ಶಿಕಾರಿಪುರದಿಂದ ಶುಂಠಿ ವ್ಯಾಪಾರಕ್ಕೆಂದು ಆಯನೂರಿಗೆ ದ್ವಿಚಕ್ರ ವಾಹನದಲ್ಲಿ ಬಂದಿದ್ದ ವಿನಯ್ ಹಾಗೂ ಕೇರಳ ಮೂಲದ ರಾಮಚಂದ್ರ, ಸಾಗರ ರಸ್ತೆಯಲ್ಲಿ ಸಂಚರಿಸುತ್ತಿದ್ದ ಕ್ರೂಸರ್ ವಾಹನಕ್ಕೆ ಡಿಕ್ಕಿ ಹೊಡೆದಿದ್ದಾರೆ. ಇದೇ ಸಂದರ್ಭದಲ್ಲಿ ನಿಯಂತ್ರಣ ತಪ್ಪಿ ಅದೇ ರಸ್ತೆಯಲ್ಲಿ ಬರುತ್ತಿದ್ದ ಟಾಟಾ ಏಸ್ ವಾಹನಕ್ಕೂ ಡಿಕ್ಕಿ ಹೊಡೆದಿದ್ದಾರೆ. ಗಂಭೀರವಾಗಿ ಗಾಯಗೊಂಡ ರಾಮಚಂದ್ರ ಅವರನ್ನು ಸ್ಥಳೀಯ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟರು. ವಿನಯ್ಗೆ ಗಂಭೀರ ಗಾಯಗಳಾಗಿವೆ. ಕ್ರೂಸರ್ ವಾಹನದಲ್ಲಿದ್ದ ಮೂವರು ಪ್ರಯಾಣಿಕರಿಗೂ ಸಣ್ಣಪುಟ್ಟ ಗಾಯಗಳಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ. ಕುಂಸಿ ಠಾಣೆ ಎಸ್ ಐ ಅಭಯ ಪ್ರಕಾಶ್ ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿ ಕೊಂಡಿದ್ದಾರೆ
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

