ಭೀಕರ ಕಾರು ಅಪಘಾತ: ಸ್ಥಳದಲ್ಲೇ ಇಬ್ಬರ ಸಾವು
ತೀರ್ಥಹಳ್ಳಿ: ಭೀಕರ ಕಾರು ಅಪಘಾತದಲ್ಲಿ ಇಬ್ಬರು ಮೃತಪಟ್ಟ ದಾರುಣ ಘಟನೆ ತೀರ್ಥಹಳ್ಳಿ ಕುಶಾವತಿ ಸೇತುವೆ ಸಮೀಪ ನೆಡೆದಿದೆ. ಶುಕ್ರವಾರ ಮಧ್ಯಾಹ್ನ ಅಪಘಾತ ಸಂಭವಿಸಿದ್ದು, ಸ್ಟೇರಿಂಗ್ ತುಂಡಾಗಿದ್ದರಿಂದ ನಿಯಂತ್ರಣ ತಪ್ಪಿ ಸ್ಯಾಂಟ್ರೋ ಕಾರು ಮರಕ್ಕೆ ಡಿಕ್ಕಿ ಹೊಡೆದಿದೆ. ಕಾರು ಮಗುಚಿ ಬಿದ್ದಿದ್ದು ಸುನಿಲ್ (33) ಹಾಗೂ ಸುನಿಲ್ (25) ಸ್ಥಳದಲ್ಲೇ ಮೃತಪಟ್ಟಿದ್ದಾರೆ. ತೀವ್ರ ಪೆಟ್ಟಾಗಿರುವ ಸುರೇಶ್ರನ್ನು ಚಿಕಿತ್ಸೆಗಾಗಿ ಮಣಿಪಾಲಕ್ಕೆ ಸಾಗಿಸಲಾಗಿದೆ. ತೀರ್ಥಹಳ್ಳಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.ತೀರ್ಥಹಳ್ಳಿ ತಾಲೂಕಿನಲ್ಲಿ ಕಳೆದ ನಾಲ್ಕು ದಿನಗಳಲ್ಲಿ ಸಂಭವಿಸಿದ ಮೂರನೇ ವಾಹನ ಅಪಘಾತವಿದು. ಈ ಮೂರು ಅಪಘಾತದಲ್ಲೂ ಪ್ರಾಣಹಾನಿ ಸಂಭವಿಸಿವೆ. ಕಲ್ಮನೆ ಸಮೀಪ ನಡೆದ ಕಾರು ಅಪಘಾತದಲ್ಲಿ ಇಬ್ಬರು, ಕೋಳಿಗೆಯಲ್ಲಿ ಸಂಭವಿಸಿದ ಬೈಕ್ ಅಪಘಾತದಲ್ಲಿ ಓರ್ವ ಮೃತಪಟ್ಟಿದ್ದು, ಅಪಘಾತಗಳಿಂದ ಒಟ್ಟು 5 ಜನ ಮೃತಪಟಿದ್ದಾರೆ.
ಮನೆ ಗೋಡೆ ಕುಸಿತ: ಕುಟುಂಬ ಪಾರು
ಸಾಗರ: ತಾ. ಆನಂದಪುರಂ ಹೋಬಳಿ ತಾವರೆಹಳ್ಳಿ ಜೇಡಿಸರದಲ್ಲಿ ವಿಪರೀತ ಮಳೆಯಿಂದ ಮನೆಯ ಗೋಡೆ ಕುಸಿದು ಮನೆಯಲ್ಲಿದ್ದವರು ಅದೃಷ್ಟವಶಾತ್ ಅಪಾಯದಿಂದ ಪಾರಾದ ಘಟನೆ ಗುರುವಾರ ನಡೆದಿದೆ. ಜೇಡಿಸರದ ನಿವಾಸಿ ದೊಡ್ಡಗೂರಪ್ಪ ಎಂಬುವವರ ಮನೆಯ ಗೋಡೆ ಕುಸಿದು ಮನೆಯಲ್ಲಿದ್ದ ಪತ್ನಿ ಜಯಮ್ಮ ಹಾಗೂ ಮಗಳು ಮಂಜುಳಾ ಅಪಾಯದಿಂದ ಪಾರಾಗಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

