ಪಾಲಿಕೆ ಎದುರು ಯುವ ಜೆಡಿಎಸ್ ಪ್ರತಿಭಟನೆ
ಶಿವಮೊಗ್ಗ: ನಗರಾದ್ಯಂತ ರಸ್ತೆಗಳಲ್ಲಿ ಗುಂಡಿ ಬಿದ್ದಿದ್ದು, ಇದಕ್ಕೆ ಕಳಪೆ ಕಾಮಗಾರಿಯೇ ಕಾರಣ ಎಂದು ಯುವ ಜನತಾದಳ ಆರೋಪಿಸಿ, ಕೂಡಲೇ ಗುತ್ತಿಗೆದಾರರನ್ನು ಕಪ್ಪುಪಟ್ಟಿಗೆ ಸೇರಿಸುವಂತೆ ಒತ್ತಾಯಿಸಿ ಮಹಾನಗರ ಪಾಲಿಕೆ ಎದುರು ಗುರುವಾರ ಪ್ರತಿಭಟನೆ ನಡೆಸಿದರು.
ಉಷಾ ನರ್ಸಿಂಗ್ ಹೋಂನಿಂದ ಲಕ್ಷ್ಮೀ ಟಾಕೀಸ್ ವರೆಗಿನ ರಸ್ತೆಯನ್ನು ಎರಡು ತಿಂಗಳ ಹಿಂದೆ ಡಾಂಬರೀಕರಣ ಮಾಡಲಾಗಿತ್ತು. ಆದರೆ ಇಲ್ಲಿಯೂ ಗುಂಡಿಗಳಾಗಿವೆ. ಈ ಗುತ್ತಿಗೆದಾರರನ್ನು ಕೂಡಲೇ ಕಪ್ಪು ಪಟ್ಟಿಗೆ ಸೇರಿಸಿ. ಮುಂದೆ ನಗರೋತ್ಥಾನ ಯೋಜನೆಯಡಿ ಕೈಗೊಳ್ಳುವ ಕಾಮಗಾರಿಗಳ ಗುಣಮಟ್ಟ ಕಾಪಾಡಲು ಕಟ್ಟುನಿಟ್ಟಿನ ಕ್ರಮ ವಹಿಸಿ ಎಂದು ಒತ್ತಾಯಿಸಿದರು.ಮಹಾನಗರ ಪಾಲಿಕೆ ಆಯುಕ್ತರಿಗೆ ಮನವಿ ಸಲ್ಲಿಸಿದ ಪ್ರತಿಭಟನಾಕಾರರು ಕೂಡಲೇ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದರು. ಪ್ರತಿಭಟನೆಯಲ್ಲಿ ಯುವ ಜನತಾದಳ ಜಿಲ್ಲಾಧ್ಯಕ್ಷ ಜಿ.ಡಿ. ಮಂಜುನಾಥ್, ಪಾಲಿಕೆ ಸದಸ್ಯ ನಾಗರಾಜ್ ಕಂಕಾರಿ, ಪಾಲಾಕ್ಷಿ, ಶ್ರೀನಿವಾಸ್, ಸಿದ್ದಪ್ಪ ಸೇರಿದಂತೆ ಹಲವರು ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

